Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಷ್ಟಗಿ: ಸಾಲದ ಚಿಂತೆಗೆ ರೈತ ಆತ್ಮಹತ್ಯೆ

ಸುದ್ದಿಮೂಲ ವಾರ್ತೆ ಕುಷ್ಟಗಿ, ಜು. 01:

ಕೈ ಕೊಟ್ಟ ಮಳೆಯಿಂದ ಜಮೀನಿಗಾಗಿ ಮಾಡಿದ ಸಾಲ ತೀರಿಸುವುದು ಹೇಗೆ ಎಂಬ ಚಿಂತೆ ಹಚ್ಚಿಕೊಂಡು ತಾಲೂಕಿನ ರೈತರೊಬ್ಬರು ನೇಣಿಗೆ ಶರಣಾದ ಘಟನೆ ಶನಿವಾರ ಜರುಗಿದೆ

ತಾಲೂಕಿನ ಬೋದೂರು ತಾಂಡದ ವಿಠ್ಠಪ್ಪ ಗೋವಿಂದಪ್ಪ ಚೌವ್ಹಾಣ (62) ಎಂಬ ಮೃತ ರೈತ. ಈತ ಬೋದೂರು ತಾಂಡದ ಬಳಿಯಲ್ಲಿ 3 ಎಕರೆ 20 ಗುಂಟೆ ಜಮೀನು ಹೊಂದಿದ್ದು, ಇದಕ್ಕಾಗಿ 5 ಲಕ್ಷ ರೂ. ಟ್ರಾಕ್ಟರ್ ಸಾಲ ಹಾಗೂ 5 ಲಕ್ಷ ರೂ. ಖಾಸಗಿ ಸಾಲ‌ ಸೇರಿದಂತೆ ಒಟ್ಟು10 ಲಕ್ಷ ರೂ. ಮಾಡಿದ್ದರು.

ಮೃತ ರೈತನಿಗೆ ಮೂವರು ಪುತ್ರರು ಹಾಗೂ ಐವರು ಪುತ್ರಿಯರಿದ್ದು, ಇವರೆಲ್ಲರೂ ಕಬ್ಬು ಕಟಾವು ಕೆಲಸಕ್ಕೆ ಮಂಡ್ಯ ಜಿಲ್ಲೆಗೆ ಹೋಗಿದ್ದಾರೆ. ಗ್ರಾಮದಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದ. ರೈತನ ಮಳೆ ಸಕಾಲಿಕವಾಗಿ ಬಾರದ ಹಿನ್ನೆಲೆ ಮಾಡಿಕೊಂಡಿರುವ ಸಾಲ ತೀರಿಸುವ ಬಗ್ಗೆ ಚಿಂತೆಯಲ್ಲಿದ್ದರು. ಶನಿವಾರ ಬೆಳಗ್ಗೆ ಜಮೀನು ಕಡೆ ಹೋಗುವುದಾಗಿ ಹೇಳಿ ಮರಕ್ಕೆ ನೇಣಿಗೆ ಶರಣಾಗಿದ್ದಾರೆ. ಈ ಕುರಿತು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತನ ಆತ್ಮಹತ್ಯೆ ವಿಷಯ ತಿಳಿದು ಸ್ಥಳೀಯ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ