Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರು- ಪೊಲೀಸರ ನಡುವೆ ವಾಗ್ವಾದ, ಸರ್ಕಾರದ ವಿರುದ್ಧ ಘೋಷಣೆ

ಸುದ್ದಿಮೂಲ ವಾರ್ತೆ

ಮೈಸೂರು, ಜು.18:ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರ ಸಂಘದ ಮೈಸೂರು- ಚಾಮರಾಜನಗರ ಜಿಲ್ಲಾ ಘಟಕದ ಆಶ್ರಯದಲ್ಲಿ ರೈತರು ನಗರದ ಸಿದ್ದಾರ್ಥ ನಗರದಲ್ಲಿರುವ ಹೊಸ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳ ಭೇಟಿ ಮಾಡಿ ಹಕ್ಕೋತಾಯ ಪತ್ರ ಸಲ್ಲಿಸಲು ಬಂದ ರೈತರನ್ನು ಪೊಲೀಸರು ರಸ್ತೆಯಲ್ಲಿ ತಡೆದಾಗ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದು ರಸ್ತೆಯಲ್ಲೇ ಕುಳಿತು ಪೊಲೀಸರ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದರು

ನಂತರ ಪೊಲೀಸರು ರೈತರ ಮನವೊಲಿಸಿ ಕಚೇರಿ ಮುಂಭಾಗ ಕೂರಿಸಿ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್ ಅವರನ್ನು ಕರೆದುಕೊಂಡು ಬಂದರು.ನಿಮ್ಮ ಒತ್ತಾಯ ಪತ್ರದಲ್ಲಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ತುರ್ತಾಗಿ ಸಭೆ ಕರೆದು ಬಗೆಹರಿಸುವುದಾಗಿ ತಿಳಿಸಿದರು

ಬಣ್ಣಾರಿ ಸಕ್ಕರೆ ಕಾರ್ಖಾನೆ ಕಬ್ಬು ನುರಿಸುವ ಕಾರ್ಯ ಆರಂಭಿಸಲಿದ್ದು ಕಳೆದ ವರ್ಷ ರೈತರು ಕಾರ್ಖಾನೆಗೆ ಸುಮಾರು 15 ಲಕ್ಷ ಟನ್ ಕಬ್ಬನ್ನು ಸರಬರಾಜು ಮಾಡಿರುತ್ತಾರೆ.ಕಬ್ಬಿನ ಉತ್ಪಾದನೆ ವೆಚ್ಚ ಏರಿಕೆಯಾಗಿರುವ ಕಾರಣ ಹೆಚ್ಚು ಬೆಲೆ ನಿಗದಿಪಡಿಸಲು ರೈತರು ಹೋರಾಟ ನಡೆಸಿದ ನಂತರ ರಾಜ್ಯ ಸರ್ಕಾರ ಹೆಚ್ಚುವರಿ 150ರೂ. ನಿಗದಿ ಮಾಡಿ ಆದೇಶ ಹೊರಡಿಸಿದೆ.

ಕಳೆದ ವರ್ಷ ರಾಜ್ಯ ಕಬ್ಬು ಬೆಳೆಗಾರರ ಸಂಘ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತತ 39 ದಿನಗಳ ಕಾಲ ಆಹೋರಾತ್ರಿ ಹೋರಾಟ ನಡೆಸಿದ ನಂತರ ಸರ್ಕಾರ ಪ್ರತಿ ಟನ್ ಕಬ್ಬಿಗೆ 150 ರೂ. ಕೊಡುವಂತೆ ಆದೇಶ ಮಾಡಿದ್ದರೂ ಸಹ ಇದುವರೆಗೂ ಕಬ್ಬಿನ ಬಾಕಿ ಹಣ ಸಕ್ಕರೆ ಕಾರ್ಖಾನೆ ರೈತರಿಗೆ ಪಾವತಿ ಮಾಡಿಲ್ಲ. ಕಳೆದ ವರ್ಷದ ಬಾಕಿ ಹಣ ಮೊದಲು ಕೊಟ್ಟು ಸಕ್ಕರೆ ಕಾರ್ಖಾನೆ ಪ್ರಾರಂಭಿಸಲಿ ಎಂದು ಆಗ್ರಹಿಸಿದರು.

ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುವುದಕ್ಕೂ ಮೊದಲು ಜಿಲ್ಲಾಧಿಕಾರಿಗಳು ರೈತರು ಮತ್ತು ಕಾರ್ಖಾನೆ ಮಾಲೀಕರನ್ನು ತಮ್ಮ ಅಧ್ಯಕ್ಷತೆಯಲ್ಲಿ ಸಭೆ ಕರೆದು ಕಟಾವು ಕೂಲಿ, ಸಾಗಾಣಿಕೆ ವೆಚ್ಚ ರೈತರ ಸಮ್ಮುಖದಲ್ಲಿ ನಿಗದಿ ಪಡಿಸಬೇಕು ಕಳೆದ ವರ್ಷಕ್ಕಿಂತ ಈ ವರ್ಷ ಕಬ್ಬು ಉತ್ಪಾದನಾ ವೆಚ್ಚ ಹೆಚ್ಚಾಗಿರುವುದರಿಂದ ರಾಜ್ಯ ಸರ್ಕಾರ ರಾಜ್ಯ ಸಲಹಾ ಸಮಿತಿ ಎಸ್ ಎ ಪಿ ಸಭೆ ಕರೆದು ಕಬ್ಬು ಬೆಳೆಗಾರರಿಗೆ ರೈತರ ಹೊಲದಲ್ಲಿನ ದರ ಎಂದು ಘೋಷಣೆ ಮಾಡಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಸೋಮಶೇಖರ್, ಕಾರ್ಯಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಮೂಕಳ್ಳಿ ಮಹದೇವಸ್ವಾಮಿ, ಪಟೇಲ್ ಶಿವಮೂರ್ತಿ,ತಾಲೂಕು ಅಧ್ಯಕ್ಷರುಗಳಾದ ಕುರುಬೂರು ಸಿದ್ದೇಶ್, ಲಕ್ಷ್ಮಿಪುರ ವೆಂಕಟೇಶ್, ಹಾದ್ಯ ರವಿ, ಮುಖಂಡರುಗಳಾದ ಕುರುಬೂರು ಪ್ರದೀಪ್,ಪ್ರ ಕಾತೂರು ಮಹದೇವಸ್ವಾಮಿ,ಉಡಿಗಾಲ ರೇವಣ್ಣ,ಬನ್ನೂರು ಸುರೇಂದ್ರ, ನೀಲಕಂಠಪ್ಪ, ಸಿದ್ದರಾಮು,ಗಿರೀಶ್,ನಂಜುಂಡಸ್ವಾಮಿ,ಕಮಲಮ್ಮ,ಭಾಗ್ಯಮ್ಮ,ಮಹದೇವು, ಮತ್ತಿತರರು ಇದ್ದರು

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ