Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಪಂಪ್‍ಸೆಟ್‍ಗಳಿಗೆ 25 ಕೆವಿ ವಿದ್ಯುತ್ ಪರಿವರ್ತಕ ನೀಡಲು ಆಗ್ರಹಿಸಿ ರೈತರ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಆ.28: ಅಕ್ರಮ - ಸಕ್ರಮ ಕೃಷಿ ಪಂಪ್‍ಸೆಟ್ ಗಳಿಗೆ ಕೂಡಲೇ ವಿದ್ಯುತ್ ಪರಿವರ್ತಕಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಮತ್ತು ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಬೇಕೆಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ತಾಲೂಕಿನ ದಿಬ್ಬೂರಹಳ್ಳಿಯಲ್ಲಿ ರಾಜ್ಯ ಹೆದ್ದಾರಿಯನ್ನು ತಡೆದು ನಂತರ ಬೆಸ್ಕಾಂ ಕಚೇರಿಗೆ ಮುತ್ತಿಗೆ ಪ್ರತಿಭಟನೆ ನಡೆಸಿದರು.

ತಾಲೂಕಿನಲ್ಲಿ ಸುಮಾರು 231 ಅಕ್ರಮ-ಸಕ್ರಮ ಕೃಷಿ ಪಂಪ್‍ಸೆಟ್ಟುಗಳಿಗೆ ರೈತರಿಂದ ತಲಾ 30 ಸಾವಿರ ರೂಗಳನ್ನು ಕಟ್ಟಿಸಿಕೊಂಡು ಇದುವರೆಗೆ 25 ಕೆವಿ ಟ್ರಾನ್ಸ್ ಫಾರ್ಮರ್ಸ್ ನೀಡಿಲ್ಲ ತಕ್ಷಣ ರೈತರಿಗೆ ಅಕ್ರಮ ಪಂಪ್ ಸೆಟ್ಟುಗಳನ್ನು ಸಕ್ರಮಗೊಳಿಸಬೇಕು, ಕೃಷಿ ಪಂಪ್‍ಸೆಟ್ಟುಗಳಿಗೆ ಲೋಡ್ ಶೆಡ್ಡಿಂಗ್ ನೆಪದಲ್ಲಿ ಪದೇಪದೇ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಗೃಹಜೋತಿ ಬೆನ್ನಲ್ಲೇ ಜನರಿಗೆ ಕತ್ತಲೆ ಭಾಗ್ಯವನ್ನು ಸರ್ಕಾರ ಹಾಗೂ ಬೆಸ್ಕಾಂ ಅಧಿಕಾರಿಗಳು ಕರುಣಿಸುವ ಮುಖಾಂತರ ರೈತರು ಹಾಗೂ ವಿದ್ಯಾರ್ಥಿಗಳು ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟ ಆಡಲು ಮುಂದಾಗಿದ್ದಾರೆ ಎಂದು ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಟಿಕೆ ಅರುಣ್‍ಕುಮಾರ್ ವಾಗ್ದಾಳಿ ನಡೆಸಿದರು.

ಸುಪ್ರೀಂ ಕೋರ್ಟ್ ಆದೇಶದಂತೆ ಟ್ರಾನ್ಸ್ ಫಾರ್ಮರ್ಸ್ ಸುಟ್ಟುಹೋದ ಪಕ್ಷದಲ್ಲಿ ತಾವೇ 24 ಗಂಟೆ ಒಳಗಾಗಿ ರಿಪೇರಿ ಅಥವಾ ಹೊಸ ಟಿಸಿ ವ್ಯವಸ್ಥೆ ಮಾಡಿ ಸರಿಪಡಿಸಬೇಕಾಗಿರುತ್ತದೆ. ಅಧಿಕಾರಿಗಳನ್ನು ಕೇಳಿದರೆ ಲಂಚವಿಲ್ಲದೆ ಟಿಸಿ ಬಿಚ್ಚುವುದಿಲ್ಲ, ಸರಿಪಡಿಸುವುದಿಲ್ಲ. ರೈತರು ಲಂಚವನ್ನು ನೀಡಲು ಹಣವಿಲ್ಲದಿದ್ದಾಗ ನಿರ್ದಿಷ್ಟ ಸಮಯದಲ್ಲಿ ಟಿಸಿ ಗಳನ್ನು ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷ ಶಂಕರನಾರಾಯಣ, ಎನ್ ಮಂಜುನಾಥ, ತಾಲೂಕು ಪ್ರಧಾನ ಕಾರ್ಯದರ್ಶಿ ಎಂ ವೆಂಕಟರೆಡ್ಡಿ, ಮುನಿರಾಜು, ಕೆಎಸ್ ನಾಗರಾಜ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ