Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರಿನಲ್ಲಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ ರೈತ ಸಂಘ ವಿರೋಧ

ಸುದ್ದಿಮೂಲ ವಾರ್ತೆ

ಮೈಸೂರು, ನ.30: ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ಅನ್ನು ಮೈಸೂರಿನಲ್ಲಿ ನಿರ್ಮಾಣ ಮಾಡುವುದು ಬೇಡ. ಸಂಸದ ಪ್ರತಾಪ್ ಸಿಂಹ ಅವರ ಈ ನಡೆಗೆ ತೀವ್ರ ವಿರೋಧವಿದೆ. ಅಭಿವೃದ್ಧಿಯ ಹೆಸರಿನಲ್ಲಿ ರೈತರ ಭೂಮಿ ಕಬಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣ ಅಭಿವೃದ್ಧಿಯೂ ನಮಗೆ ಬೇಕಿರಲಿಲ್ಲ. ಇವುಗಳಿಂದ ನಮ್ಮ‌ ರೈತರಿಗೆ, ಜನರಿಗೆ ಏನೂ ಪ್ರಯೋಜನ ಇಲ್ಲ. ಈಗಾಗಲೇ ಕ್ರಿಕೆಟ್ ಸ್ಟೇಡಿಯಂ ಕಟ್ಟುವುದಕ್ಕೆ ಭೂ ಸ್ವಾದೀನ ಪ್ರಕ್ರೀಯೆ ನಡೆಯುತ್ತಿದೆ. ಇದನ್ನ ಈ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಇಲವಾಲ ಹೋಬಳಿಯ ಉಯಿಲಾಳ ಗ್ರಾಮದ ಸುತ್ತುಮುತ್ತಲಿನ ಪ್ರದೇಶ ಸೂಕ್ಷ್ಮ ಪ್ರದೇಶವಾಗಿದೆ. ಅಲ್ಲಿ ಕಾಡು ಪ್ರಾಣಿಗಳು ವಾಸ ಮಾಡುತ್ತವೆ. ಜೊತೆಗೆ ಶ್ರೀರಂಗಪಟ್ಟಣದ ಪಕ್ಷಿಧಾಮ ಕೂಡ ಸಮೀಪದಲ್ಲೇ ಇದೆ. ಹಾಗಾಗಿ ಅಲ್ಲಿ ಯಾವುದೇ ಕಾರಣಕ್ಕೂ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಕೂಡದು ಎಂದು ಹೇಳಿದರು.

ನಮ್ಮ ಮನವಿಗೆ ಸ್ಪಂದಿಸದಿದ್ದರೇ ಮುಂದಿನ‌ ದಿನಗಳಲ್ಲಿ ಸಂಸದರ ವಿರುದ್ಧ ಉಗ್ರ ಹೋರಾಟಕ್ಕೆ ಇಳಿಯಬೇಕಾಗಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ