Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ

ಸುದ್ದಿಮೂಲ ವಾರ್ತೆ

ಮಂಡ್ಯ, ಅ.31:ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ ಇಲ್ಲವೋ ಎನ್ನುವುದನ್ನೂ ಪ್ರಾಮಾಣಿಕಕವಾಗಿ ಜನರಿಗೆ ತಲುಪಿಸಿ:. ಅದನ್ನು ಬಿಟ್ಟು ಮೌಡ್ಯ ಬಿತ್ತುವ ಕಾರ್ಯಕ್ರಮಗಳಿಂದ ಕಾಗೆ ಚರ್ಚೆಗಳಿಂದ ಗೆ ಏನು ಪ್ರಯೋಜನ ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು ? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದರು. ಆದರೆ ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂಥಾ ಮೌಡ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್ ಗಳು ಮಾಡಬಾರದು ಎಂದರು.

ಸರ್ಕಾರ ತಪ್ಪು ಮಾಡಿದ್ದರೆ ಬರೆಯಿರಿ

ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ. ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ ಇಲ್ಲವೋ ಎನ್ನುವುದನ್ನೂ ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ ಎಂದು ಕರೆ ನೀಡಿದರು.

ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿ ಎಂದು ಸಲಹೆ ನೀಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ನಿರ್ಮಲಾನಂದ ಮಹಾ ಸ್ವಾಮೀಜಿ, ಸಚಿವ ಚಲಯವರಾಯಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಶಾಸಕರಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ