Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ : ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸಿದರೆ ಎಫ್‌ ಐ ಆರ್‌  

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ. 6 :ಬೆಂಗಳೂರು ಮೈಸೂರು ಹೆದ್ದಾರಿಯ ಮೇಲೆ ವಿಶೇಷವಾಗಿ ಟೋಲ್ ನಿರ್ಗಮನದ ಹತ್ತಿರ ಬಹಳಷ್ಟು ವಾಹನಗಳ ಚಾಲಕರು ವಿರುದ್ಧ ದಿಕ್ಕಿನಲ್ಲಿ ವಾಹನಗಳನ್ನು ಚಾಲನೆ ಎಫ್‌ ಐ ಆರ್‌ ದಾಖಲಿಸುವುದಾಗಿ ಸಂಚಾರ ಮತ್ತು ರಸ್ತೆ ಸುರಕ್ಷತೆ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಕುಮಾರ್ ಆದೇಶಿಸಿದ್ದಾರೆ.

ಈ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆ ಸೂಚಿಸಿದ್ದರೂ ಸಹ ಪ್ರವೇಶ ನಿಯಂತ್ರಣ ಹೆದ್ದಾರಿಯ ವಿರುದ್ಧ ದಿಕ್ಕಿನಲ್ಲಿ ವಾಹನಗಳ ಚಾಲನೆಯನ್ನು ತಡೆಗಟ್ಟಲು ಯಾವುದೇ ಸಮರ್ಪಕವಾದ ಕ್ರಮ ಕೈಗೊಳ್ಳದಿರುವುದು ಕಂಡು ಬರುತ್ತಿದೆ. ಅಲ್ಲದೆ, ವಿರುದ್ಧ ದಿಕ್ಕಿನಲ್ಲಿ ವಾಹನವನ್ನು ಚಾಲನೆ ಮಾಡಿಕೊಂಡು ಬರುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ದಾಳಲಾಗುತ್ತಿವೆ. .

ಹೀಗಾಗಿ, ಸಂಚಾರ ಮತ್ತು ರಸ್ತೆ ಸುರಕ್ಷತೆ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಕುಮಾರ್ ಪೊಲೀಸರು ಹಾಗೂ ವಾಹನ ಚಾಲಕರ ವಿರುದ್ಧ ಕ್ರಮ ಜರುಗಿಸಲು ಮುಂದಾಗಿದ್ದಾರೆ.

ವಿರುದ್ಧ ದಿಕ್ಕಿನಲ್ಲಿ ಚಲಿಸುವ ವಾಹನಗಳ ಚಾಲಕರುಗಳಿಂದ ಬೇರೆ ವಾಹನಗಳ ಪ್ರಯಾಣೀಕರ ಜೀವಕ್ಕೆ ಅಪಾಯವಾಗುತ್ತಿದೆ. ಈ ರೀತಿ ವಿರುದ್ಧ ದಿಕ್ಕಿನಲ್ಲಿ ಚಲಿಸುವ ವಾಹನ ಚಾಲಕರುಗಳ ವಿರುದ್ಧ ಕಲಂ 279, 184 ಐಎಂಎ ಕಾಯ್ದೆ ಪ್ರಕಾರ ಎಫ್‌ಐಆರ್ ದಾಖಲಿಸಿ ಕ್ರಮ ಜರುಗಿಸಬೇಕು. ಅಂತಹ ಚಾಲಕರ ಚಾಲನಾ ಪರವಾನೆಗಿಯನ್ನು ತತಕ್ಷಣ ಅಮಾನತ್ತಿನಲ್ಲಿಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಇದು ಅಲ್ಲದೆ ಒಂದು ಪಕ್ಷದಲ್ಲಿ ವಾಹನ ಚಾಲಕರ ಚಾಲನಾ ಪರವಾನಗಿ, ವಾಹನದ ನೋಂದಣಿ ಪ್ರಮಾಣ ಪತ್ರ , ರಹದಾರಿ ಇವುಗಳನ್ನು ಸರಿಯಾಗಿ ಹೊಂದಿಲ್ಲದಿದ್ದಲ್ಲಿ ಕಲಂ 207 ಐಎಂಎ ಕಾಯ್ದೆಯಡಿಯಲ್ಲಿ ಅವರ ವಾಹನವನ್ನು ವಶಕ್ಕೆ ಪಡೆಯತಕ್ಕದ್ದು, ಈ ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲನೆ ಮಾಡುವಂತೆ ಪೊಲೀಸರಿಗೆ ಅಲೋಕ್‌ ಕುಮಾರ್‌ ವಾರ್ನಿಂಗ್‌ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ