Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕ್ರಿಯಾ ಯೋಜನೆ ಸಲ್ಲಿಸಿದ ಅಗ್ನಿಶಾಮಕ ದಳ ಡಿಜಿ ಕಮಲ್ ಪಂತ್

ಅ.30:ನಗರದಲ್ಲಿ ಹೆಚ್ಚುತ್ತಿರುವ ಅಗ್ನಿಪ್ರಾಣಾಪಾಯಗಳು ಹೆಚ್ಚುತ್ತಿದೆ. ಜನಸಾಮಾನ್ಯರಲ್ಲೂ ಆತಂಕ ಮನೆಮಾಡಿದೆ. ಹೀಗಾಗಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು, ಅಗ್ನಿ ಶಾಮಕದಳವನ್ನೂ ಉನ್ನತೀಕರಣಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಅಗ್ನಿ ಶಾಮಕದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್ ಅವರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ 20 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲೇ ಮೂರು ಕಡೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿವೆ. ಅಗ್ನಿ ದುರಂತಗಳಿಂದ ಜನರೂ ಭಯಭೀತರಾಗಿದ್ದಾರೆ. ಹೀಗಾಗಿ ನಗರ ಭಾಗಗಳೂ ಸೇರಿದಂತೆ ರಾಜ್ಯಾದ್ಯಂತ ಅಗ್ನಿ ದುರಂತಗಳು ಸಂಭವಿಸಿದಂತೆ ಅಗ್ನಿಶಾಮಕ ದಳ ತಡೆಯುವಂತಾಗಬೇಕು" ಎಂದು ಸಲಹೆ ನೀಡಿದರು.

"ಅತ್ತಿಬೆಲೆ ಪಠಾಕಿ ಗೋದಾಮಿನ ದುರಂತದಲ್ಲಿ ತಮಿಳುನಾಡು ಮೂಲದ ರಾಜೇಶ್, ದಿನೇಶ್, ಸಂತೋಷ್ ಕುಮಾರ್, ನಿತೀಶ್, ವೇದಪ್ಪನ್, ಆದಿಕೇಶವನ್, ವಿಜಯರಾಘವನ್, ಆಕಾಶ್ ರಾಜ್, ಗಿರಿ, ಇಂಬರ್ತಿ, ಮುನಿವೇಲ್, ಪ್ರಕಾಶರಾಜ್, ಆಂಥೋನಿ ಪೌಲಾರಾಜ್ ಸೇರಿ 13 ಕಾರ್ಮಿಕರು ಮೃತಪಟ್ಟಿದ್ದರು.

ಅಕ್ಟೋಬರ್ 19 ರಂದು ಕೋರಮಂಗಲದ ಮಡ್‌ಪೈಪ್ ಅನ್ನೋ ರೆಸ್ಟೋಕೆಫೆ ಅಗ್ನಿ ದುರಂತಕ್ಕೆ ಈಡಾಗಿತ್ತು. ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದರೆ, ಹಲವರು ಗಾಯಾಳುಗಳಾಗಿದ್ದರು. ಇದರ ಬೆನ್ನಿಗೆ ಕಳೆದ ಶನಿವಾರ ಹಜ್ ಭವನವೂ ಬೆಂಕಿಗೆ ಆಹುತಿಯಾಗಿದ್ದು ಕನಿಷ್ಟ 3 ಕೋಟಿ ನಷ್ಟವಾಗಿದೆ. ಎಂದು ಆತಂಕ ಹೊರಹಾಕಿದ ಸಚಿವರು, ಇಂತಹ ದುರಂತಗಳಿಗೆ ಕಾರಣವೇನು? ಇದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳೇನು? ಎಂಬ ಕುರಿತು ಅಗ್ನಿಶಾಮಕ ದಳ ಚಿಂತನೆ ನಡೆಸಬೇಕಿದೆ" ಎಂದರು.

ಅಲ್ಲದೆ, ಅಗ್ನಿಶಾಮಕ ದಳದ ಉನ್ನತೀಕರಣಗಳ ಬಗ್ಗೆಯೂ ಗಮನವಹಿಸಬೇಕಿದೆ. ಇದರ ಜೊತೆಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗಲೇ ಅಗ್ನಿದುರಂತ ತಡೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆಯೂ ಪರಿಶೀಲಿಸಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಉನ್ನತೀಕರಣ ಹಾಗೂ ಹೊಸ ಅಗ್ನಿಶಾಮಕ ದಳಗಳನ್ನು ಸ್ಥಾಪಿಸುವ ಕುರಿತ ಕ್ರಿಯಾ ಯೋಜನೆ ಮಂಡಿಸಿದ ಅಗ್ನಿಶಾಮಕ ದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್, "ಉಡುಪಿ ಜಿಲ್ಲೆಯ ಮಣಿಪಾಲ್, ದಾವಣಗೆರೆಯ- ನ್ಯಾಮತಿ, ವಿಜಯಪುರ ಜಿಲ್ಲೆಯ ನಿಡಗುಂದಿ-ಬಬಲೇಶ್ವರ್, ರಾಯಚೂರಿನ ಮಸ್ಕಿ, ಬೆಳಗಾವಿಯ ಮುದಲಗಿ, ಬಳ್ಳಾರಿಯ ಕಂಪ್ಲಿ ಹಾಗೂ ಕಲಬುರಗಿ ಷಹಾಬಾದ್ ಭಾಗದಲ್ಲಿ ನೂತನ ಅಗ್ನಿಶಾಮಕ ದಳ ಸ್ಥಾಪಿಸುವ ಸಂಬಂಧ ಯೋಜನೆ ಮಂಡಿಸಿದರು.

ಅಲ್ಲದೆ, ಬೆಂಗಳೂರು ಸೇರಿದಂತೆ ನಗರ ಭಾಗದಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳ ತಡೆಗೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬಹುದು? ಎಂಬ ಕುರಿತು ಶೀಘ್ರದಲ್ಲೇ ಇಲಾಖೆಗೆ ವರದಿ ನೀಡುವುದಾಗಿಯೂ ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸೇರಿದಂತೆ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ