Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಲೂರಿನಲ್ಲಿ ಐದು ಗ್ಯಾರಂಟಿಗಳ ಪ್ರಗತಿಪರಿಶೀಲನಾ ಸಭೆ

ಸುದ್ದಿಮೂಲ ವಾರ್ತೆ

ಮಾಲೂರು, ಜು 25 :ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಶಾಸಕ ಕೆ.ವೈ ನಂಜೇಗೌಡ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ

ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ ಪಕ್ಷ ನೀಡಿದ್ದ ಐದು ಗ್ಯಾರಂಟಿಗಳ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಅನುಷ್ಠಾನಗೊಳಿಸಿದೆ. ಅದರಲ್ಲಿ ಶಕ್ತಿ ಯೋಜನೆಯಲ್ಲಿ ಕೆಎಸ್ಆರ್ ಟಿ ಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಮಾಡಲು ಅನುಕೂಲ ಕಲ್ಪಸಿದ್ದು, ಜನ ಸಾಮಾನ್ಯರು ಪ್ರವಾಸ ಮಾಡಿದ್ದರಿಂದ ಪ್ರವಾಸಿ ಸ್ಥಳ ಮತ್ತು ದೇವಾಲಯಗಳಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಯಾಗಿದೆ.

ಗೃಹಜೋತಿ ಯೋಜನೆ ಅಡಿ 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಉಚಿತ ವಿದ್ಯುತ್ ಲಭಿಸಲಿದೆ. ಅನ್ನಭಾಗ್ಯ ಯೋಜನೆ ಅಡಿ 5 ಕೆ.ಜಿ ಅಕ್ಕಿ ಜತೆಗೆ ಇನ್ನೂಳಿದ

5 ಕೆ.ಜಿ ಅಕ್ಕಿ ಬದಲು ಬಿಪಿಎಲ್ ಅಂತ್ಯೋದಯ ಕಾರ್ಡ್ ಪಡಿತದಾರರಿಗೆ ಕುಟುಂಬದ ಎಲ್ಲಾ ಸದ್ಯಸರಿಗೆ ತಲಾ 34 ರೂ.ಗಳಂತೆ ಒಬ್ಬರಿಗೆ ಪ್ರತಿ ತಿಂಗಳು 180 ರೂ.ಗಳ ಹಣವನ್ನು ಪಡಿತರ ಚೀಟಿಯ ಯಜಮಾನರ ಖಾತೆಗೆ ನೇರವಾಗಿ ಪಾವತಿಸಲಾಗುವುದು. ಮಹಿಳಾ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆಯ ಒಡತಿಗೆ 2 ಸಾವಿರ ಗಳನ್ನು ನೀಡುವ ಗ್ರಹ ಲಕ್ಷ್ಮಿ ಯೋಜನೆ ಪ್ರಕ್ರಿಯೆ ಚಾಲನೆಯಲ್ಲದೆ ಎಂದರು.

ಅಧಿಕಾರಿಗಳು ಯಾವುದೇ ಗೊಂದಲಗಳಿಗೆ ಒಳಗಾಗದೆ ಸರ್ಕಾರದ ಯೋಜನೆಗಳ ಅನುಷ್ಠಾನವನ್ನು ಪ್ರಾಮಾಣಿಕವಾಗಿ ಮಾಡಬೇಕು. ಪ್ರಾಮಾಣಿಕ ವಾಗಿ ಜನರ ಕೆಲಸ ಮಾಡದ

ಅಧಿಕಾರಿಗಳನ್ನು ಮುಲಾಜಿಲ್ಲದೆ ವರ್ಗಾವಣೆ ಮಾಡಿಸಿ ಕೆಲಸ ಮಾಡುವ ಅಧಿಕಾರಿಗಳನ್ನು ಉಳಿಸಿಕೊಂಡು ಸರ್ಕಾರಿ ಸಾರ್ವಜನಿಕ ಕೆಲಸ ಕಾರ್ಯಗಳು ಮಾಡಲು ಅವಕಾಶ ಕಲ್ಪಿಸಲಾಗುವುದು. ತಾಲೂಕಿನ ಸರ್ಕಾರಿ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಅವಕಾಶ ನೀಡದೆ ನೇರವಾಗಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಆಗಮಿಸುವವರನ್ನು ಅಲೆಸದೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸಗಳನ್ನು ಮಾಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ. ರಮೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ