Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಣಿಪಾಲ್‌ ಆಸ್ಪತ್ರೆ ಬಳಿ ಫೈಓವರ್ : ಭೈರತಿ ಸುರೇಶ್‌

ಸುದ್ದಿಮೂಲ ವಾರ್ತೆ

ಮೈಸೂರು, ನ.06 : ಇತ್ತೀಚಿನ ದಿನಗಳಲ್ಲಿ ಮೈಸೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಈ ಹಿನ್ನೆಲೆಯಲ್ಲಿ ಎದುರಾಗುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ನಗರದ ಹೊರ ವರ್ತುಲದಲ್ಲಿ ಪೆರಿಫೆರಲ್ ರಿಂಗ್ ರಂಗ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರಾದ ಭೈರತಿ ಸುರೇಶ್ ತಿಳಿಸಿದರು.

ಸೋಮವಾರ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಮೈಸೂರು ನಗರಾಭಿವದ್ಧಿ ಪ್ರಾಧಿಕಾರದ ವತಿಯಿಂದ ನಗರದ ಹೊರ ವರ್ತುಲ ರಸ್ತೆ ನಿರ್ಮಿಸುವ ಹಾಗೂ ಮೈಸೂರು- ಬೆಂಗಳೂರು ರಸ್ತೆಯ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ಫ್ಲೈ ಓವರ್ ನಿರ್ಮಿಸುವ ಕುರಿತ ವಿಸ್ಕೃತ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.‌

ಬೆಂಗಳೂರು ಮೈಸೂರು ಹೈವೇ ನ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ ಅವರಿಂದ ಪ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದ್ದು, ನಿರ್ಮಾಣ ಕಾಮಗಾರಿಯು ವೈಜ್ಞಾನಿಕವಾಗಿ ನಿರ್ಮಾಣವಾಗಬೇಕು. ಮೈಸೂರು ನಗರವು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ನಗರದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪೆರಿಫೆರಲ್‌ ರಿಂಗ್ ರೋಡ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಪೆರಿಫೆರಲ್ ರಿಂಗ್ ರೋಡ್ ಗೆ ಭೂಮಿ ನೀಡಿದವರಿಗೆ ಆ ಜಾಗದ ಬೆಲೆಯ ಹಣ ಅಥವಾ ಬೇರೆ ಭೂಮಿಯನ್ನು ನೀಡಲು ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್. ಸಿ. ಮಹದೇವಪ್ಪ ಮಾತನಾಡಿ ಬೆಂಗಳೂರು- ಮೈಸೂರು ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆಯನ್ನು ಸರ್ವೇ ಮೂಲಕ ಗುರುತಿಸಿಕೊಳ್ಳಿ, ಇದರಲ್ಲಿ ಬೆಂಗಳೂರು ಕಡೆಯಿಂದ ಬಂದು ಟಿ ನರಸೀಪುರ, ಹುಣಸೂರು, ನಂಜನಗೂಡು ಕಡೆಗೆ ಹೋಗುವ ವಾಹನಗಳ ಸಂಖ್ಯೆ ತಿಳಿದರೆ ರಸ್ತೆ ಸೌಲಭ್ಯ, ಸರ್ವಿಸ್ ರಸ್ತೆ ಕಲ್ಪಿಸಲು ಅನುಕೂಲವಾಗುತ್ತದೆ.

ಮೈಸೂರು ಜಿಲ್ಲೆಯು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ನಿರ್ಮಾಣವಾಗುವ ರಸ್ತೆಗಳು, ಫ್ಲೈ ಓವರ್ ಗಳು ಮುಂದಿನ 20 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಮಾಡಬೇಕು. ಗುಜರಾತ್, ಮಹಾರಾಷ್ಟ್ರದ ಅಧಿಕಾರಿಗಳು ಮೈಸೂರಿನ ಇನ್ಫ್ರಾಸ್ಟ್ರಕ್ಚರ್‌ ಅಧ್ಯಯನ ಮಾಡಲು ಜಿಲ್ಲೆಗೆ ಭೇಟಿ ನೀಡಿ ಇದನ್ನು ತಮ್ಮ ರಾಜ್ಯಗಳಲ್ಲಿ ಅಳವಡಿಸಿಕೊಳ್ಳಲು ವರದಿ ತಯಾರಿಸಿಕೊಳ್ಳುತ್ತಾರೆ. ನಗರದಲ್ಲಿ ಅಗತ್ಯ ಇರುವೆಡೆ ಸ್ಕೈ ವಾಕ್ ಗಳನ್ನು ನಿರ್ಮಿಸಲು ಯೋಜನೆ ತಯಾರಿಸಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕ ಕೆ. ಹರೀಶ್ ಗೌಡ, ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ಡಾ.ಎಂ‌.ಎನ್. ಅಜಯ್ ನಾಗಭೂಷಣ್, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಎಪ್ರಿಲ್ ಅಥವಾ ಮೇ ನಲ್ಲಿ ಮೈಸೂರು ನಗರಪಾಲಿಕೆ ಚುನಾವಣೆ ಸಭೆಗೂ ಮುನ್ನ ಮಾತನಾಡಿದ ಅವರು, ಮೈಸೂರು ಮಹಾನಗರಪಾಲಿಕೆ ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲಈಗಾಗಲೇ ಸಿಎಂ ಅವರು ಮಹಾನಗರ ಪಾಲಿಕೆ ಚುನಾವಣೆ ಸಮಯಕ್ಕೆ ಸರಿಯಾಗಿ ನಡೆಸುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಅವಧಿ ಮುಗಿದ ಬಳಿಕವೇ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆ ಮುಂದಿನ ಎಪ್ರಿಲ್, ಮೇ ಗೆ ಇದ್ದು ಹದಿನೈದು ದಿನಗಳಲ್ಲಿ ಪಾಲಿಕೆ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.

ಸಿಎಂ, ಡಿಸಿಎಂ ಹಣ ವಸೂಲಿ ಮಾಡುತ್ತಿದ್ದಾರೆಂಬ ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯೆ ಕೊಡುವಷ್ಟು ದೊಡ್ಡವನು ನಾನಲ್ಲ. ಆದರೂ ಭ್ರಷ್ಟಾಚಾರದ ಪಿತಾಮಹ ಬಿಜೆಪಿಯವರು ಎಂಬುದು ಜನರ ಅನಿಸಿಕೆ ಆಗಿದೆ. ಸಿಎಂ ಯಾರೆಂಬ ಪ್ರಶ್ನೆಗೆ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ