Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋವಿಡ್ ಪ್ರಕರಣ ಹೆಚ್ಚಳ: ಮುನ್ನೆಚ್ಚರಿಕಾ ಕ್ರಮಗಳು ಹೀಗಿವೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮಾ. 21:  ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಕ್ರಮಗಳನ್ನು ಸೂಚಿಸಿ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ ಕಳೆದ ಐದು ತಿಂಗಳಿನಿಂದ ಪ್ರಕರಣ ನಿಯಂತ್ರಣದಲ್ಲಿದ್ದರೂ ಸಹ ರಾಜ್ಯದ ಕೋವಿಡ್ 19 ಪಾಸಿಟಿವಿಟಿ ಪ್ರಮಾಣ ಶೇ2.77 ಇದೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇ. 0.61 ಇದೆ. ಕೆಲವು ವಾರಗಳಿಂದೀಚೆಗೆ ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಕೋವಿಡ್ 19 ಪರಿಸ್ಥಿತಿಯನ್ನು ಸೂಕ್ತ ನಿಗಾದಲ್ಲಿರಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೆಲವು ಸಲಹೆಗಳನ್ನು ನೀಡಿ ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ಅವರು ನೀಡಿದ ಸಲಹೆಗಳು ಹೀಗಿವೆ. * ನಿಗದಿತ ಗುರಿಯಂತೆ ಕೋವಿಡ್ 19 ಪ್ರಕರಣಗಳ ಪರೀಕ್ಷೆ ನಡೆಸಬೇಕು * ಹೊಸದಾಗಿ ಹಾಗೂ ಕ್ಲಸ್ಟರ್ ಮಾದರಿಯಲ್ಲಿ ವರದಿಯಾಗುವ ಪ್ರಕರಣಗಳ ಮೇಲ್ವಿಚಾರಣೆ ಮಾಡುವುದು * ಸೋಂಕು ಹರಡುವುದನ್ನ ತಡೆಗಟ್ಟಲು ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ನಿಯಮಿತವಾಗಿ ಎಚ್ಚರಿಕೆ ಚಿಹ್ನೆಗಳನ್ನು ಐಎಲ್‌ಐ ಹಾಗೂ ಪ್ರಕರಣಗಳನ್ನು ಪತ್ತೆಹಚ್ಚಿ ಉಸ್ತುವಾರಿ ಮಾಡಬೇಕು * ಅಂತಾರಾಷ್ಟ್ರೀಯ ಪ್ರಯಾಣಿಕರು, ಸ್ಥಳೀಯವಾಗಿ ವರದಿಯಾಗುವ ಕ್ಲಸ್ಟರ್ ಪ್ರಕರಣಗಳು ಹಾಗೂ ಸೆಂಟಿನಲ್ ಸೈಟ್‌ಗಳಲ್ಲಿ ಸಂಗ್ರಹಿಸಲಾಗುವ ಮಾದರಿಗಳನ್ನು ಚಾಲ್ತಿಯಲ್ಲಿರುವ ಶಿಷ್ಟಾಚಾರದಂತೆ ಜಿನೋಮ್ ಸೀಕ್ವೆನ್ಸಿಂಗ್ ನಡೆಸಬೇಕು. * ಅರ್ಹ ಜನರಿಗೆ ಮುನ್ನೆಚ್ಚರಿಕಾ ಲಸಿಕೆ (ಪ್ರಿಕಾಷನ್ ಡೋಸ್) ನೀಡುವ ಪ್ರಮಾಣ ಹೆಚ್ಚಿಸಬೇಕು * ಜನಸಂದಣಿ ಇರುವ ಪ್ರದೇಶಗಳಲ್ಲಿ ಕೋವಿಡ್ ನಿಯಮಗಳ ಪಾಲನೆ ಖಚಿತಪಡಿಸಿಕೊಳ್ಳಬೇಕು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ