Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್.ಟಿ. ನಕಲಿ ಪ್ರಮಾಣ ಪತ್ರ ರದ್ದುಗೊಳಿಸಿ ಕ್ರಮಿನಲ್ ಕೇಸ್ ದಾಖಲಿಸಲು ಒತ್ತಾಯ

ಸುದ್ದಿಮೂಲವಾರ್ತೆ

ಕೊಪ್ಪಳ,ಜು.25: ಕೊಪ್ಪಳ ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ನ ಎಸ್.ಟಿ.ನಕಲಿ ಜಾತಿ ಪ್ರಮಾಣ ಪತ್ರಗಳು ವಿಪರೀತವಾಗಿದ್ದು, ಸಮುದಾಯಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಜಾತಿ ಪ್ರಮಾಣ ಪತ್ರಗಳ ಪುನರ್ ಪರಿಶೀಲನಾ ಕಾರ್ಯಕ್ಕೆ ವಿಶೇಷ ಸಮಿತಿ ರಚಿಸುವ ಮೂಲಕ ಅವುಗಳನ್ನು ತಡೆಯುವ ಕೆಲಸ ಆಗಬೇಕು ಎಂದುವ ಒತ್ತಾಯಿಸಿ ಎಸ್. ಟಿ. ಒಳಮೀಸಲಾತಿ ಆಂದೋಲನ ಸಮಿತಿ ಕರ್ನಾಟಕದ ರಾಜ್ಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ನೇತೃತ್ವದಲ್ಲಿ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ನಗರದ ತಹಶೀಲ್ದಾರ ಕಛೇರಿಯಲ್ಲಿ ಪರಿಶಿಷ್ಟ ಪಂಗಡ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾಗೇಂದ್ರ ಅವರಿಗೆ ಹಾಗೂ ಅವರ ಮೂಲಕ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಿಗೆ ಸಮುದಾಯದ ಪರವಾಗಿ ಮನವಿ ಪತ್ರ ಸಲ್ಲಿಸಿ ಇನ್ನುಮುಂದೆ ಜಾತಿಯನ್ನು ನಮೂದಿಸಿ ಶಾಶ್ವತವಾಗಿ ಲಭ್ಯವಾಗುವ ರೀತಿ ಗಣಕೀಕರಣಗೊಳಿಸಬೇಕು, ಜಾತಿ ಪ್ರಮಾಣ ಪತ್ರ ವಿತರಣೆಗೆ ಅದನ್ನೇ ಮಾನದಂಡವಾಗಿ ರೂಪಿಸಬೇಕು ಕಾರಣ ಪದೇ ಪದೇ ತಪ್ಪು ಮಾಡುತ್ತಿರುವ ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಹಕ್ಕೊತ್ತಾಯ ಮಾಡಿ ಗ್ರೇಡ್ ೨ ತಹಶೀಲ್ದಾರ ಗವಿಸಿದ್ದಪ್ಪ ಮಣ್ಣೂರ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನು ಕೊಪ್ಪಳ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಾಟ್ರಳ್ಳಿ ಗ್ರಾಮದ ಶಿವರಾಜಕುಮಾರ ತಂದಿ ನಾರಾಯಣ ಚಿತ್ತೂರ ಎಂಬಾತನ ಶಾಲಾ ದಾಖಲಾತಿ ಪ್ರಕಾರ ಹಿಂದೂ ರಡ್ಡೇರ ಜಾತಿಗೆ ಸೇರಿದ್ದು, ಆತನಿಗೆ ಹಿಂದೂ ವಾಲ್ಮೀಕಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರವನ್ನು 2008 ರಂದು ನೀಡಲಾಗಿತ್ತು, ನಂತರ ಸಮುದಾಯದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ದಾಖಲಾತಿ ಪರಿಶೀಲನೆ ಮಾಡಿ ೨೮-೦೧-೨೦೧೦ ತಹಶೀಲ್ದಾರ ಅವರು ರದ್ದುಪಡಿಸಿ ದಂಡ ವಿಧಿಸಿರುರುತ್ತಾರೆ. ಆದರೆ ಪುನಃ ಅದೇ ವ್ಯಕ್ತಿಗೆ ೨೮-೦೧-೨೦೧೭ ಬರೋಬ್ಬರಿ ೭ ವರ್ಷಗಳ ನಂತರ ಪರಿಶಿಷ್ಟ ಪಂಗಡ ವಾಲ್ಮೀಕಿ ಜಾತಿ ಪ್ರಮಾಣ ಪತ್ರವನ್ನು ನೀಡಿ ಘೋರ ತಪ್ಪು ಎಸಗಿದ್ದು, ಕೂಡಲೇ ಅಂದಿನ ತಹಶೀಲ್ದಾರ ಸೇರಿದಂತೆ ಅದಕ್ಕೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳನ್ನು ಬಂಧಿಸಿ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಇಲ್ಲವಾದಲ್ಲಿ ನಾವೇ ಆ ಕೆಲಸ ಮಾಡುತ್ತೇವೆ ಎಂದು ಅಲ್ಲದೇ ಸರಕಾರವೇ ಇದಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಸಮುದಾಯ ಭಾವಿಸಬೇಕಾಗುತ್ತದೆ ಒಂದು ವಾರದಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ರದ್ದು ಮಾಡಿ ಆದೇಶ ಮಾಡದಿದ್ದಲ್ಲಿ, ತಹಶೀಲ್ದಾರ ಕಛೇರಿ ಮುಂದೆ ಸರಕಾರ ಮತ್ತು ಅಧಿಕಾರಿಗಳ ವಿರುದ್ಧ ಧರಣಿ ನಡೆಸಲಾಗುವದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ತಾಲೂಕ ಅಧ್ಯಕ್ಷ ಶರಣಪ್ಪ ನಾಯಕ್, ನಿವೃತ್ತ ಕಂದಾಯ ಅಧಿಕಾರಿ ಗೋವಿಂದಪ್ಪ, ಮಾರುತಿ ಬೊಮ್ಮನಾಳ, ಅಂದಪ್ಪ ಬೊಮ್ಮನಾಳ, ಮಂಜುನಾಥ ಪೂಜಾರ, ಗ್ಯಾನಪ್ಪ ದದೇಗಲ್, ಈಶಪ್ಪ ತಳವಾರ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ