Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಚಿವ ಎಚ್. ಎಂ. ರೇವಣ್ಣ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.14: ಹಿಂದುಳಿದ ವರ್ಗಗಳ ಯುವಕರ ಶಕ್ತಿ ಎಚ್. ಎಂ. ರೇವಣ್ಣ ಅವರನ್ನು ರಾಜ್ಯದ ಮೂಲೆ ಮೂಲೆಗಳಿಂದ ಬಂದು  ಭೇಟಿಯಾಗುವುದನ್ನು ನಾವು ದಿನನಿತ್ಯ ಅವರ ನಿವಾಸದಲ್ಲಿ ಕಾಣಬಹುದು.ಅಧಿಕಾರ ಇರಲಿ ಬಿಡಲಿ  ಅಧಿಕಾರದಲ್ಲಿರುವವರಿಗೆ  ಮತ್ತು ಜನಸಾಮಾನ್ಯರಿಗೆ ಒಂದು ರೀತಿ ಸೇತುವೆ ಎಂದರೆ ತಪ್ಪಾಗಲಾರದು ಎಂದು ಕಾಂಗ್ರೆಸ್ ಮುಖಂಡ ಮನೋಹರ್ ಎಸ್.ಎಮ್ ತಿಳಿಸಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. 'ಇಂತಹ ವ್ಯಕ್ತಿಯನ್ನು  ಕಾಂಗ್ರೆಸ್ ಪಕ್ಷ ಖಂಡಿತವಾಗಿಯೂ ಉಳಿಸಿಕೊಳ್ಳುತ್ತದೆ ಎಂಬುದು ನಮ್ಮ ಅನಿಸಿಕೆ, ಯಾವುದೇ ಕ್ಷೇತ್ರಕ್ಕೆ ಅಥವಾ ಯಾವುದೇ ಸ್ಥಾನಕ್ಕೆ ಅಂಟಿಕೊಳ್ಳದೆ, ಸದಾ ಪಕ್ಷಕ್ಕೆ ಮತ್ತು ನೊಂದವರ ಪರ ಯಾವುದಾದರೂ ರಾಜಕಾರಣಿ ಮುಂಚೂಣಿಯಲ್ಲಿದ್ದರೆ ಅದು ನಮ್ಮ ರೇವಣ್ಣ ಸಾಹೇಬರು' ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

'ಕಾಂಗ್ರೆಸ್ ಪಕ್ಷದ ಮೇಲೆ ನಮಗೆ ವಿಶ್ವಾಸವಿದೆ. ಎರಡು ಬಾರಿ ಮಾಗಡಿಯಿಂದ  ಚುನಾಯಿತರು, ಸಿದ್ದರಾಮಯ್ಯನವರ ಸಂಪುಟದಲ್ಲಿ ಮಂತ್ರಿಯಾಗಿದ್ದವರು, ದಿಲ್ಲಿಯಿಂದ ಕರ್ನಾಟಕದವರೆಗೆ ತಮ್ಮದೇ ವರ್ಚಸ್ಸನ್ನು ಕಾಪಾಡಿಕೊಂಡು ಬಂದಿರುವ ಏಕೈಕ ನಾಯಕ ಎಚ್.ಎಂ. ರೇವಣ್ಣ ಅವರು, ಇಂತಹ ಜನರ ಧ್ವನಿಯನ್ನು ಪಕ್ಷ ಎತ್ತಿ ಹಿಡಿಯುತ್ತದೆ ಎಂಬ ವಿಶ್ವಾಸದಿಂದ, ನಮ್ಮ ಮನವಿಯನ್ನು  ಪಕ್ಷದ ಮುಂದೆ  ಇಡಲು ಇಚ್ಚಿಸುತ್ತೇನೆ' ಎಂದರು.

'ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಹಿರಿಯ ನಾಯಕರು ಈ ಬಗ್ಗೆ ಚಿಂತನೆ ನಡೆಸಿ ಅವರು ಕರ್ನಾಟಕದಲ್ಲಿ ಬಯಸಿದ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿಸಲು ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ