Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಾಟಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಸೆ.16: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೃಷಿ ಮತ್ತು ಕಂದಾಯ ಇಲಾಖೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ರೈತರನ್ನು ಆತ್ಮಹತ್ಯೆಗೆ ದೂಡುವುದು ಕರ್ನಾಟಕದ ಮಾದರಿಯೇ? ಎಂದು ಪ್ರಶ್ನಿಸಿದ್ದಾರೆ.

ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ 'ಕರ್ನಾಟಕ ಮಾದರಿ'? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ ಎಂದು ಕಿಡಿಕಾರಿದ್ದಾರೆ.

ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು(!!) ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ. ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ? ಎಂದು ಟೀಕಿದ್ದಾರೆ.

ನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ.

ಸರಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ