ಆನೇಕಲ್: ಕಾರ್ಯಕರ್ತನ ಮನೆಯಲ್ಲಿ ಊಟ ಮಾಡಿದ ಮಹಾರಾಷ್ಟ್ರ ಮಾಜಿ ಸಚಿವ
ಸುದ್ದಿಮೂಲ ವಾರ್ತೆ
ಆನೇಕಲ್, ಏ.12: ಮಹಾರಾಷ್ಟ್ರದ ಮಾಜಿ ಸಚಿವ, ಹಾಲಿ ಶಾಸಕ ರಾಮ್ ಸಿಂಗ್ ಇಂದು ಆನೇಕಲ್ ಪಟ್ಟಣದ ಸುಧಾಮ್ ನಗರದಲ್ಲಿ ವೆಂಕಟೇಶ್ ಎಂಬ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಊಟ ಸವಿದರು.
ಬಳಿಕ ಮಾತನಾಡಿದ ರಾಮ್ ಸಿಂಗ್, ಚುನಾವಣೆ ಹತ್ತಿರವಾಗುವಂತೆ ಕಾರ್ಯಕರ್ತರನ್ನ ಹುರಿದುಂಬಿಸುವ ನಿಟ್ಟಿನಲ್ಲಿ ಆನೇಕಲ್‌ಗೆ ಭೇಟಿ ನೀಡಿ ಇಲ್ಲಿನ ಮುಖಂಡರು, ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.
ಚುನಾವಣೆ ಬಂದಾಗ ಕಾರ್ಯಕರ್ತರನ್ನು ಗುರುತಿಸುವುದು ನಮ್ಮ ಕರ್ತವ್ಯ. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೆ. ಹಾಗಾಗಿ ಕಾರ್ಯಕರ್ತರ ಮನೆಗೆ ಭೇಟಿ ನೀಡಿದ್ದೇನೆ. ಅಲ್ಲದೆ ಪಕ್ಷವನ್ನು ಬಲಿಷ್ಠ ಪಡಿಸುವುದು ಅಗತ್ಯ ಇದೆ ಎಂದರು.
ಇನ್ನು ಇದೆ ವೇಳೆ ಬಿಜೆಪಿ ಮಂಡಲದ ಅಧ್ಯಕ್ಷ ಮುನಿರಾಜು ಗೌಡ, ಸುಧಾಮ್ ನಗರದ ಮಂಡಲ ಅಧ್ಯಕ್ಷ ವೆಂಕಟೇಶ್ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯ ಮುರಳಿ , ಸುಧಾಮ್ ನಗರದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.