Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈ ಇಳಿ ವಯಸ್ಸಿಿನಲ್ಲಿ ವಕೀಲರಿಗೆ ಶುಲ್ಕ ಕಟ್ಟಿಿ ಹೋರಾಡಬೇಕೆ?: ಮಾಜಿ ಪ್ರಧಾನಿ ದೇವೇಗೌಡ ಬೇಸರ ‘ನೈಸ್ ಯೋಜನೆ ಕುರಿತು ಸುಪ್ರೀಂಗೆ ಸಲ್ಲಿಸಿದ ರಿಟ್‌ನಲ್ಲಿ ನನ್ನ ಹೆಸರೂ ಸೇರ್ಪಡೆ’

ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.24
ಬೆಂಗಳೂರು- ಮೈಸೂರು ಇನ್ಫಾಾಸ್ಟ್ರಕ್ಚರ್ (ನೈಸ್) ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಒಂದು ಸಲ್ಲಿಕೆಯಾಗಿದ್ದು, ಅದರಲ್ಲಿ ನನ್ನನ್ನು ಕೂಡ ಪಾರ್ಟಿ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ತಿಳಿಸಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಿಯಲ್ಲಿ ಮಾತನಾಡಿದ ಅವರು, ಈ ಅರ್ಜಿಯಲ್ಲಿ ರಾಜ್ಯ ಸರ್ಕಾರ, ಕೆಲವು ರೈತರು ಹಾಗೂ ನನ್ನನ್ನೂ ಸೇರಿಸಿ ಪಾರ್ಟಿ ಮಾಡಲಾಗಿದೆ. ಈ ಇಳಿವಯಸ್ಸಿಿನಲ್ಲೂ ನಾನು ವಕೀಲರಿಗೆ ಶುಲ್ಕ ಕೊಟ್ಟು ನ್ಯಾಾಯಾಲಯದಲ್ಲಿ ಹೋರಾಟ ಮಾಡಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಈ ರಾಜ್ಯದಲ್ಲಿ ಮುಖ್ಯಮಂತ್ರಿಿ ಆಗಿದ್ದಾಗ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದರು. ಬಿಎಂಐಸಿ ಯೋಜನೆಗೆ ಹಣಕಾಸು ಇಲಾಖೆಯ ಸಹಮತಿಯೂ ಇತ್ತು. ಆಗ ಯೋಜನೆಗೆ ಒಪ್ಪಂದ (ಎಂಓಯು) ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದದ ಎಲ್ಲಾ ಮಾಹಿತಿಯೂ ಅವರಿಗೆ ಕೂಡ ಇದೆ ಎಂದು ಹೇಳಿದರು.
ಈ ಯೋಜನೆಯು ಬೆಂಗಳೂರು ನಗರ, ಮಂಡ್ಯ, ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿತ್ತು. ಐದು ಟೌನ್‌ಶಿಪ್‌ಗಳು, ಕಾಂಕ್ರಿಿಟ್ ರಸ್ತೆೆ ನಿರ್ಮಾಣ ಮಾಡುವ ಬಗ್ಗೆೆ ಒಪ್ಪಂದವಾಗಿತ್ತು. ನೈಸ್ ಕಂಪನಿ ವಿಚಾರದಲ್ಲಿ ಕಾನೂನು ಸಲಹೆಗಾರರಿಗೆ 55 ಲಕ್ಷ ರೂಪಾಯಿ ಕೊಡುತ್ತಿಿದ್ದಾರಂತೆ. ರಾಜ್ಯ ಸರ್ಕಾರದ ಅಡ್ವೋೋಕೇಟ್ ಜನರಲ್, ಕಾನೂನು ಸಲಹೆಗಾರರು ಇದ್ದರೂ ಸಹ ಇನ್ನೊೊಬ್ಬರನ್ನು ನೈಸ್ ಕಂಪನಿಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರರನ್ನು ನೇಮಿಸಿಕೊಂಡಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು.
ನನಗೆ ಇನ್ನೂ ಹೋರಾಟದ ಕೆಚ್ಚಿಿದೆ. ಹೋರಾಟ ಮಾಡುವ ಶಕ್ತಿಿ ಇದೆ. ಒಂದು ಲಕ್ಷಕ್ಕೂ ಹೆಚ್ಚು ನೌಕರರು ಹೊರಗುತ್ತಿಿಗೆ ಮೂಲಕ ಕೆಲಸ ಮಾಡುತ್ತಿಿದ್ದಾರೆ. ಲಕ್ಷಾಂತರ ಹುದ್ದೆಗಳು ಭರ್ತಿಯಾಗದೇ ಹಾಗೆಯೇ ಖಾಲಿ ಉಳಿದಿವೆ. ವಿಕ್ಟೋೋರಿಯಾ ಆಸ್ಪತ್ರೆೆಗೆ ಭೇಟಿ ನೀಡಿದರೆ ಎಷ್ಟು ಹೊರಗುತ್ತಿಿಗೆ ನೌಕರರು ಕೆಲಸ ಮಾಡುತ್ತಿಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಾಾಗುತ್ತದೆ ಎಂದು ದೇವೇಗೌಡರು ದೂರಿದರು.
ಈಗಿನ ಮುಖ್ಯಮಂತ್ರಿಿಗಳಿಗೆ ಬಡವರ ಬಗ್ಗೆೆ ಎಲ್ಲಿಲ್ಲದ ಅನುಕಂಪ ಇದೆ. ಮುಖ್ಯಮಂತ್ರಿಿ ಕಚೇರಿಯಲ್ಲೇ ಏಳೆಂಟು ಮಂದಿ ಕ್ಯಾಾಬಿನೆಟ್ ದರ್ಜೆ ಪಡೆದುಕೊಂಡು ಕರ್ತವ್ಯ ನಿರ್ವಹಣೆ ಮಾಡುತ್ತಿಿದ್ದಾರೆ. ಇದು ಇವರ ಆಡಳಿತದ ವೈಖರಿ ಎಂದು ದೇವೇಗೌಡರು ಲೇವಡಿ ಮಾಡಿದರು.
ಕೇಂದ್ರವನ್ನು ದೂರಿದರೆ ಪ್ರಯೋಜನವಿಲ್ಲ:
ರಾಜ್ಯ ಸರ್ಕಾರ ಬೆಳಗಿನಿಂದ ಸಂಜೆಯವರೆಗೂ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಕಾಲಹರಣ ಮಾಡುತ್ತಿಿದೆ. ಹೀಗೆ ಟೀಕೆ ಮಾಡುತ್ತಾಾ ಹೋದರೆ ಆಗುವ ಪ್ರಯೋಜನ ಏನು? ಮುಖ್ಯಮಂತ್ರಿಿ ಆದವರು ಪ್ರಧಾನಿಗಳ ಅಧ್ಯಕ್ಷತೆಯಲ್ಲಿ ನಡೆಯುವ ದಿಶಾ ಸಭೆಗೆ ಹೋಗಿ ರಾಜ್ಯಕ್ಕೆೆ ಏನು ಬೇಕು ಎಂಬುದರ ಬಗ್ಗೆೆ ಚರ್ಚೆ ಮಾಡಿ ಹೋರಾಟ ಮಾಡಬೇಕು. ಸಂಸದರಾಗಿ ನಾವು ನಮ್ಮ ಕರ್ತವ್ಯ ನಿಭಾಯಿಸುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ನರೇಗಾ ಯೋಜನೆ ಹೆಸರನ್ನು ಬದಲಾವಣೆ ಮಾಡಿದರು ಎನ್ನುವ ಕಾರಣಕ್ಕೆೆ ಕಾಂಗ್ರೆೆಸ್ ನಾಯಕರು ನರೇಂದ್ರ ಮೋದಿ ಅವರ ಬಗ್ಗೆೆ ಟೀಕೆ ಮಾಡುತ್ತಿಿದ್ದಾರೆ. ಆದರೆ, ಕಾಂಗ್ರೆೆಸ್ ನವರು ಆಡಳಿತ ನಡೆಸುತ್ತಿಿದ್ದಾಗ ಮಹಾತ್ಮ ಗಾಂಧೀಜಿ ಅವರಿಗೆ ಎಷ್ಟು ಗೌರವ ನೀಡಿದ್ದಾರೆ ಎನ್ನುವುದು ನನಗೆ ಗೊತ್ತಿಿದೆ. ಮಹಾತ್ಮಾಾ ಗಾಂಧಿ ಅವರ ಬಗ್ಗೆೆ ಇಷ್ಟೊೊಂದು ಕಾಳಜಿ, ಕಳಕಳಿ ಇರುವವರು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಆಳ್ವಿಿಕೆ ಮಾಡಿದ ಸಂದರ್ಭದಲ್ಲಿ ಎಲ್ಲಿಯಾದರೂ ಗಾಂಧೀಜಿ ಅವರ ಒಂದು ಪೋಸ್ಟರ್ ನೋಡಿದೀರಾ? ಎಲ್ಲಿಯಾದರೂ ಮಹಾತ್ಮಾಾ ಗಾಂಧಿ ಅವರ ೆಟೋ ಇಟ್ಟುಕೊಂಡು ಚುನಾವಣೆ ನಡೆಸಿದ್ದಾರಾ? ಎಂದು ಕಿಡಿಕಾರಿದರು.
ಈಗ ನೋಡಿದರೆ ಕಾಂಗ್ರೆೆಸ್ನವರು ಇಷ್ಟು ಜೋರಾಗಿ ಪ್ರತಿಭಟನೆ ಮಾಡುತ್ತಿಿದ್ದಾರೆ. ಕರ್ನಾಟಕದ ಗ್ಯಾಾರಂಟಿ ಬಿಹಾರದವರೆಗೂ ಹೋಯಿತು. ಅಲ್ಲಿ ವರ್ಕ್ ಆಗಲಿಲ್ಲ. ಮೋದಿ ಅವರಿಗೆ ದೇಶ ನಡೆಸಲು ಗೊತ್ತು. ಎಲ್ಲೆಲ್ಲಿ ಹಣ ಪೋಲಾಗ್ತಾಾ ಇದೆ ಅಂತ ಕೂಡ ಅವರಿಗೆ ಗೊತ್ತು. ಯಾವ ರಾಜ್ಯ ಹೇಗೆಲ್ಲಾ ಹಣ ಖರ್ಚು ಮಾಡುತ್ತಿಿದೆ ಎಂಬುದು ಕೂಡ ಅವರಿಗೆ ಗೊತ್ತು. ನಾನೇನು ಮೋದಿ ಅವರನ್ನು ಹೊಗಳಲು ಬಂದಿಲ್ಲ ಎಂದು ಅವರು ಹೇಳಿದರು.
ಪಕ್ಷದ ಸಮಾವೇಶಗಳನ್ನು ಮಾಡುತ್ತೇವೆ:
ಜ.30ರಂದು ಸಂಸತ್‌ನ ಜಂಟಿ ಅಧಿವೇಶನ ಶುರುವಾಗುತ್ತಿಿದ್ದು, ಅದಕ್ಕೂ ಮೊದಲೇ ಜನವರಿ 23ರಿಂದ 25ರ ನಡುವೆ ಹಾಸನ ಹಾಗೂ ಬಾಗಲಕೋಟೆ ಭಾಗದಲ್ಲಿ ಪಕ್ಷದ ವತಿಯಿಂದ ತಲಾ ಒಂದು ಸಮಾವೇಶ ನಡೆಸಲಾಗುವುದು. ಈ ಬಗ್ಗೆೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಾಮಿ ಅವರಿಗೆ ತಿಳಿಸಿದ್ದೇನೆ. ರಾಜ್ಯ ಸರ್ಕಾರದ ವೈಲ್ಯಗಳು ಕುಮಾರಸ್ವಾಾಮಿ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ಜನಪರ ಕಾರ್ಯಕ್ರಮಗಳನ್ನು ಮುಂದುವರೆಸದಿರುವುದರ ಬಗ್ಗೆೆ ಸಮಾವೇಶದಲ್ಲಿ ಪ್ರಸ್ತಾಾಪಿಸಲಾಗುವುದು ಎಂದರು ಅವರು.
ವಿಧಾನ ಪರಿಷತ್ ಸದಸ್ಯ ಟಿ.ಎನ್. ಜವರಾಯಿ ಗೌಡ, ಮಾಜಿ ಸದಸ್ಯರಾದ ಕೆ.ಎ. ತಿಪ್ಪೇಸ್ವಾಾಮಿ, ಚೌಡರೆಡ್ಡಿಿ ತೂಪಲ್ಲಿ ಮುಂತಾದವರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ