Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ 91ನೇ ಜನ್ಮದಿನ





ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 18: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ 91ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಶಭಾಶಯ ತಿಳಿಸಿದ್ದರೆ, ರಾಷ್ಟ್ರ ಮತ್ತು ರಾಜ್ಯದ ಅನೇಕ ಗಣ್ಯರು ಶುಭ ಕೋರಿದ್ದಾರೆ.

'ನಮ್ಮ ದೇಶಕ್ಕೆ ದೇವೇಗೌಡರ ಕೊಡುಗೆ ಗಮನಾರ್ಹವಾಗಿದೆ. ಅವರು ಅರೋಗ್ಯವಂತರಾಗಿ ದೀರ್ಘಕಾಲ ಜೀವಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

ಜತೆಗೆ, ರಾಜ್ಯಪಾಲ ಥಾವರಚಂದ್ ಗೆಹಲೋತ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಜಾರ್ಖಂಡ್  ಮುಖ್ಯಮಂತ್ರಿ ಹೇಮಂತ್ ಸೊರೇನ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ರಾಷ್ಟ್ರ ಮಟ್ಟದ ಅನೇಕ ನಾಯಕರು ಮಾಜಿ ಪ್ರಧಾನಿಗಳಿಗೆ ಶುಭ ಹೇಳಿದ್ದಾರೆ.

ಮನೆಯಲ್ಲಿ ಕೇಕ್ ಕತ್ತರಿಸಿ ಸಂಭ್ರಮ:
ಬೆಳಗ್ಗೆಯೇ ಮಾಜಿ ಪ್ರಧಾನಿಗಳ ನಿವಾಸದಲ್ಲಿ ಮಕ್ಕಳು, ಮೊಮ್ಮಕ್ಕಳು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿಗಳಿಗೆ ಶುಭ ಕೋರಿ ಆಶೀರ್ವಾದ ಪಡೆದರು.

ಅಲ್ಲದೆ, ವಿವಿಧ ಪಕ್ಷಗಳ ಹಿರಿಯ ಮುಖಂಡರು, ಜೆಡಿಎಸ್ ಪಕ್ಷದ ನೂತನ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ತಮ್ಮ ಶುಭಾಶಯಗಳನ್ನು ತಿಳಿಸಿದರು. ಇದಕ್ಕೂ ಮುನ್ನ ಮಾಜಿ ಪ್ರಧಾನಿಗಳು ಜೆಪಿ ನಗರದ ಶ್ರೀ ತಿರುಮಲಗಿರಿ ವೆಂಕಟರಮಣ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಬಸವರಾಜ ಬೊಮ್ಮಾಯಿ ಭೇಟಿ:
ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ ಪದ್ಮನಾಭನಗರದ ನಿವಾಸಕ್ಕೆ ತೆರಳಿ ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಅರ್ ಅಶೋಕ್, ಗೋವಿಂದ ಕಾರಜೋಳ, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ.ರಮೇಶ್ ಗೌಡ ಇತರರು ಹಾಜರಿದ್ದರು.

ತಮ್ಮ ಜನ್ಮದಿನಕ್ಕೆ ಶುಭ ಹಾರೈಸಿದ ಎಲ್ಲರಿಗೂ ದೇವೇಗೌಡರು ಧನ್ಯವಾದಗಳನ್ನು ತಿಳಿಸಿದ್ದಾರೆ.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ