Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಭೂತಿಪುರ ಮಠದಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ವಸತಿ ಶಾಲೆ

ಸುದ್ದಿಮೂಲ ವಾರ್ತೆ

ಬೆಂಗಳೂರು ಮಾ,20: ಬೆಂಗಳೂರು ನಗರದ ಮಾರತ್‌ ಹಳ್ಳಿಯ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ  ಶ್ರೀ ವೀರಭದ್ರಸ್ವಾಮಿ ಉಚಿತ ವಿದ್ಯಾರ್ಥಿ ವಸತಿ ಶಾಲೆ ವತಿಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ವಸತಿ ಶಾಲೆಗೆ ಪ್ರವೇಶಾತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಶ್ರೀ ಷ.ಬ್ರ. ಡಾ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಗ್ರಾಮೀಣ ಪ್ರದೇಶದ ಎಲ್ಲಾ ವರ್ಗದ ಬಡಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಜ್ಜಲ ಭವಿಷ್ಯವನ್ನು ರೂಪಿಸಿ, ತನ್ಮೂಲಕ ಸುಸಂಸ್ಕೃತ ರಾಷ್ಟ್ರನಿರ್ಮಾಣದ ಸತ್ಸಂಕಲ್ಪ ಮಾಡಿದ್ದಾರೆ. ಆದರಿಂದ 6 ರಿಂದ 10 ನೇ ತರಗತಿಯವರೆಗು ಓದಲಿಚ್ಚಿಸುವ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಯೋಗ, ಸಂಗೀತ,ಮತ್ತು ಕ್ರೀಡಾ ಶಿಕ್ಷಣವನ್ನೊಳಗೊಂಡ ವಸತಿ ಶಾಲೆಯನ್ನು ಪ್ರಾರಂಭಿಸಲಾಗಿದೆ

ಆಂಗ್ಲ ಮಾಧ್ಯಮದಲ್ಲಿ ಅಧ್ಯಯನ ಮಾಡಲು ಇಚ್ಚಿಸುವ ಗ್ರಾಮೀಣ ಪ್ರದೇಶದ ಎಲ್ಲಾ ವರ್ಗದ ಬಾಲಕ ವಿದ್ಯಾರ್ಥಿಗಳಿಗೆ ಪ್ರವೇಶ  ನೀಡಲಾಗುವುದು. ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 07 ರಂದು ಬೆಳಗ್ಗೆ 9 ಘಂಟೆಗೆ ಬೆಂಗಳೂರಿನ  ಶ್ರೀಮದ್‌ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದಲ್ಲಿ ನಡೆಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಇತ್ತೀಚಿನ ಎರಡು ಭಾವಚಿತ್ರ, ಬಿಪಿಎಲ್ ಕಾರ್ಡ್‌ ಮತ್ತು ಆಧಾರ್‌ ಕಾರ್ಡ್‌ಗಳೊಂದಿಗೆ ನೇರವಾಗಿ ಪ್ರವೇಶ ಪರೀಕ್ಷೆಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9738245665, 9448670372 ಸಂಖ್ಯೆಯನ್ನು ಬೆಳ್ಳಗೆ 10ರಿಂದ ಮಧ್ಯಾಹ್ನ 3 ಘಂಟೆಯ ವರೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ