Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ಮುಂದೆ ರಾತ್ರಿ ವೇಳೆ ಗಸ್ತು ಹೊಡೆಯಲಿದ್ದಾರೆ ಮಹಿಳಾ ಪೊಲೀಸ್

ಸುದ್ದಿಮೂಲ ವಾರ್ತೆ

ಮೈಸೂರು, ಆ. 12 : ನಗರದಲ್ಲಿಇನ್ನು ಮುಂದೆ ರಾತ್ರಿ ಗಸ್ತಿಗೆ ಮಹಿಳಾ ಪೊಲೀಸ್ ಸಿಬ್ಬಂದಿಗಳೂ ಸಹ ಕಾರ್ಯನಿರ್ವಹಿಸಲಿದ್ದಾರೆ.

ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ಮಹಿಳೆಯರ ರಕ್ಷಣೆಗೆ ಮುಂದಾದ ಮಹಿಳಾ ಪೊಲೀಸ್ ಸಿಬ್ಬಂದಿಗಳು ಈ ಕಾರ್ಯಕ್ಕೆ ನಾವೂ ಸೈ ಎಂದು ನಿರೂಪಿಸಿದ್ದಾರೆ. ಮೇಟಗಳ್ಳಿ ಠಾಣೆಯದ ಈ ವಿನೂತನ ಪ್ರಯೋಗ ಆರಂಭವಾಗಿದೆ.

ಹತ್ತಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳನ್ನು ರಾತ್ರಿ ಗಸ್ತಿಗೆ ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಬಿ. ರಮೇಶ್ ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಮೇಟಗಳ್ಳಿ ಠಾಣೆ ಇನ್ಸ್‌ ಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳ ರಾತ್ರಿ ಗಸ್ತಿನ ಕಾರ್ಯ ಆರಂಭವಾಗಿದೆ.

ಸದ್ಯ ಮೊದಲ ಹಂತದಲ್ಲಿ ಈ ಕಾರ್ಯಕ್ಕೆ ಹತ್ತು ಮಹಿಳಾ ಸಿಬ್ಬಂದಿಗಳನ್ನ ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಅವಶ್ಯಕತೆಗೆ ತಕ್ಕಂತೆ ಮತ್ತಷ್ಟು ಸಂಖ್ಯೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ. ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿದೆ. ಮಹಿಳೆಯರು ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ರಕ್ಷಣೆ ಒದಗಿಸಲು ಮೈಸೂರು ಖಾಕಿ ಪಡೆ ಆಧ್ಯತೆ ನೀಡಿದೆ.

ಶಂಕಿತ ವ್ಯಕ್ತಿಗಳನ್ನ ವಿಚಾರಣೆಗೆ ಒಳಪಡಿಸಿ ಅವರ ಸಂಪೂರ್ಣ ಮಾಹಿತಿ ಪಡೆಯುವ ಕೆಲಸ ಮಹಿಳಾ ಸಿಬ್ಬಂದಿಗಳು ರಾತ್ರಿಪಾಳಿ ಗಸ್ತಿನಲ್ಲಿ ಮಾಡುತ್ತಾರೆ. ಕೇವಲ ಪುರುಷ ಸಿಬ್ಬಂದಿಗಳಿಗೆ ಮಾತ್ರ ಸೀಮಿತವಾಗಿದ್ದ ರಾತ್ರಿ ಗಸ್ತಿನ ಜವಾಬ್ದಾರಿಯನ್ನ ಮಹಿಳೆಯರೂ ಹೆಗಲ ಮೇಲೆ ಹೊತ್ತಿರುವ ನಡೆ ನಿಜಕ್ಕೂ ಶ್ಲಾಘನೀಯ.

ಮುಂದಿನ ದಿನಗಳಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲೂ ಈ ವ್ಯವಸ್ಥೆ ಕಾರ್ಯರೂಪಕ್ಕೆ ತರುವ ಯೋಜನೆ ಇದೆ. ಸಾಂಸ್ಕೃತಿಕ ನಗರಿಯ ನಾಗರೀಕರಿಗೆ ಒಂದಿಲ್ಲ ಒಂದು ರೀತಿಯಲ್ಲಿ ಅಭಯ ನೀಡುತ್ತಿರುವ ಮೈಸೂರು ಪೊಲೀಸರಿಗೆ ಮೆಚ್ಚುಗೆ ವ್ಯಕ್ತವಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ