Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದಲ್ಲಿ ಕೈಗಾರಿಕೆ ಬೆಳವಣಿಗೆಗೆ ಸಂಪೂರ್ಣ ಸಹಕಾರ

 

ನವದೆಹಲಿ, ಸೆ.10: ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದಿಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ಅವರು; ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು; ಸಂಪೂರ್ಣ ಸಹಕಾರದ ಭರವಸೆ ಕೊಟ್ಟರು.

ಪ್ರಮುಖವಾಗಿ ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಸಚಿವರು, ಪಾಟೀಲ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಅವರು; ಕೇಂದ್ರ ಸರ್ಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ಎಂ.ಬಿ.ಪಾಟೀಲ್ ಅವರಿಗೆ ಹೇಳಿದರು.

ಕರ್ನಾಟಕದ ಕೈಗಾರಿಕಾ ಯೋಜನೆಗಳ ಬಗ್ಗೆ ಮಾಹಿತಿ ತೆಗೆದುಕೊಂಡ ಸಚಿವರು; ಎಂ.ಬಿ.ಪಾಟೀಲ್ ಅವರು ಸಲ್ಲಿಸಿದ ವಿವಿಧ ಪ್ರಸ್ತಾವನೆಗಳ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ರಾಜ್ಯದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಚ್‌ಎಂಟಿ ಭೂಮಿ ವಿವಾದ ಹಾಗೂ ದೇವದಾರಿ ಗಣಿಗಾರಿಕೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರು ಪಾಟೀಲ್ ಅವರ ಜತೆ ಚರ್ಚೆ ನಡೆಸಿದರು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ಈ ದಿಸೆಯಲ್ಲಿ ಎಂಬಿ ಪಾಟೀಲ್ ಅವರ ಜತೆ ನಡೆಸಿದ ಮಾತುಕತೆ ಉತ್ತಮ ರೀತಿಯಲ್ಲಿ ಇತ್ತು ಎಂದು ಕೇಂದ್ರ ಕೈಗಾರಿಕೆ ಸಚಿವರು ಹೇಳಿದರು.

ಕರ್ನಾಟಕದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸೇರಿದಂತೆ ರಾಜ್ಯದ ಹಲವು ಅಧಿಕಾರಿಗಳು ನಿಯೋಗದಲ್ಲಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ