Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಜಿ. ಪರಮೇಶ್ವರ್ ಕರೆ

ಸುದ್ದಿಮೂಲ ವಾರ್ತೆ

ತುಮಕೂರು,ನ.28: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ ಹೊಂದಿ ಉನ್ನತ ಅಧಿಕಾರಿಗಳಾಗಿ ಈ ರಾಷ್ಟ್ರ ಸೇವೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗೆದ್ದಲಹಳ್ಳಿ ಬಳಿಯ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಜರುಗಿದ ವಿದ್ಯಾರ್ಥಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಯೋಜನೆ ರೂಪಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ವಸತಿ ನಿಲಯಗಳನ್ನು ಆರಂಭಿಸಿದೆ. ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ಗಮನಿಸಿ ಜಿಲ್ಲಾಡಳಿತವು ಜಿಲ್ಲೆಯಾದ್ಯಂತ ವಿವಿಧ ಸವಲತ್ತುಗಳನ್ನು ವಿತರಣೆ ಮಾಡುತ್ತಿರುವುದು ರಾಜ್ಯದಲ್ಲಿಯೇ ವಿಶೇಷ ಕಾರ್ಯ ಎಂದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಕೆಡಿಪಿ ಸಭೆಯಲ್ಲಿ ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವ ಬಗ್ಗೆ ತಿಳಿಸಲಾಯಿತು. ಜಿಲ್ಲೆಯ 100 ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 12 ಸಾವಿರ ವಿದ್ಯಾರ್ಥಿಗಳಲ್ಲಿ ಕೊರತೆಯಾಗಿದ್ದ 4 ಸಾವಿರ ಹಾಸಿಗೆ ಹಾಗೂ 3 ಸಾವಿರ ವಿದ್ಯಾರ್ಥಿಗಳು ಉಪಯೋಗಿಸುವ ಎರಡು ಅಂತಸ್ತಿನ 1500 ಮಂಚಗಳು, ಹೊದಿಕೆ, ಸಿಸಿ ಟಿವಿ ವ್ಯವಸ್ಥೆ, ಕುಡಿಯುವ ನೀರಿನ ಘಟಕ, ಸೇರಿದಂತೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಸಚಿವರ ಸೂಚನೆಯಂತೆ ಜಿಲ್ಲಾಧಿಕಾರಿಗಳು ಒದಗಿಸಿದ್ದಾರೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ