Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ : ಜಿ.ಪರಮೇಶ್ವರ್

ಸುದ್ದಿಮೂಲ ವಾರ್ತೆ

ತುಮಕೂರು,ನ.08 : ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ನಿಗದಿತ ಕಾಲಮಿತಿಯೊಳಗಾಗಿ ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಿ ಕೆಲಸ ಮಾಡಬೇಕು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶಿರಾ ತಾಲೂಕಿನ ಮಿನಿ ವಿಧಾನಸೌಧದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ‘ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯಗಳ ಕುರಿತ ಸಭೆ’ಯನ್ನುದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

ಶಿರಾ ತಾಲೂಕಿಗೆ ಸಂಬಂಧಿಸಿದ ಕೃಷಿ, ತೋಟಗಾರಿಕೆ, ಸಣ್ಣ ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಿ ವಿವಿಧ ಅಧಿಕಾರಿಗಳಿಂದ ಪ್ರಗತಿ ವರದಿ ಪಡೆದು ಮಾತನಾಡಿದ ಅವರು, ಬರ ಪರಿಸ್ಥಿತಿಯ ನಿರ್ವಹಣೆಗಾಗಿ ಎಲ್ಲಾ ಜಿಲ್ಲೆಗಳಿಗೂ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಜಿಲ್ಲೆಗೆ ೧೫ ಕೋಟಿ ರೂ. ಬಿಡುಗಡೆ ಮಾಡಲಾಗಿದೆ, ಸರ್ಕಾರದಲ್ಲಿ ಹಣದ ಕೊರತೆ ಇಲ್ಲ ಎಂದರು.

ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಂದಿನ ಜನವರಿ ನಂತರದ ನಾಲ್ಕು ಮಾಹೆಗಳಲ್ಲಿ ಕುಡಿಯುವ ನೀರು ಹಾಗೂ ಪಶುಗಳಿಗೆ ಮೇವಿನ ತೊಂದರೆಯಾಗದಂತೆ ಬರನಿರ್ವಹಣೆ ಮಾಡುವ ಸಂಬಂಧ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಟಿ.ಬಿ. ಜಯಚಂದ್ರ ಮಾತನಾಡಿ, ಶಿರಾ ತಾಲೂಕಿನಲ್ಲಿ ರಾಸುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ನೀರಿರುವ ಕೆರೆಗಳ ಸದ್ಬಳಕೆ ಮಾಡಿಕೊಂಡು, ಪಶುಗಳಿಗಾಗಿ ಮೇವುಗಳನ್ನು ಬೆಳೆಸಿ, ಮುಂದಿನ ಬೇಸಿಗೆಯಲ್ಲಿ ಪಶುಗಳಿಗೆ ಮೇವು ಕೊರತೆಯಾಗದಂತೆ ವಿವಿಧ ಹಂತಗಳಲ್ಲಿ ಮೇವು ಸಂಗ್ರಹಿಸಬೇಕು ಎಂದರು.

ತಾಲ್ಲೂಕಿನಲ್ಲಿ 270 ಆರ್.ಓ ಪ್ಲಾಂಟ್‌ಗಳಿದ್ದು, ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಸಮಗ್ರ ನಿರ್ವಹಣೆ ಮಾಡಿ ಕ್ರಮವಹಿಸುವಂತೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು, ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಸೇರಿದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದ್ದು, ದುರಸ್ತಿಗೆ ಬಂದಿರುವ ಖಾಸಗಿ ಘಟಕಗಳನ್ನು ಸಹ ಸರಿಪಡಿಸಲು ಕ್ರಮವಹಿಸಲಾಗುತ್ತಿದೆ ಎಂದ ಅವರು, 500 ಕೋಟಿ ವೆಚ್ಚದ ನರೇಗಾ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 300 ರಿಂದ 500 ಜನ ಹಾಗೂ ಪ್ರತಿ ರೈತನಿಗೆ 30 ರಿಂದ 50 ಸಾವಿರದ ವರೆಗಿನ ಕಾಮಗಾರಿಯಂತೆ ಜಿಲ್ಲೆಯ ಒಂದು ಲಕ್ಷ ರೈತರನ್ನು ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗಿದೆ, ಮುಂದುವರೆದು, ಅಂಗನವಾಡಿ ಶಾಲೆ, ಆಸ್ಪತ್ರೆ, ಇತರೆ ಸರ್ಕಾರಿ ಕಟ್ಟಡ,ರಸ್ತೆ ಮೊದಲಾದ ಸಮುದಾಯ ಆಧಾರಿತ ಕಾಮಗಾರಿಗಳ ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪವಿಭಾಗಾಧಿಕಾರಿ ರಿಷಿ ಆನಂದ್, ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ