Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ಐದು ವರ್ಷದೊಳಗೆ ಎಲ್ಲಾ ಸರ್ಕಾರಿ ಹುದ್ದೆಗಳ ಭರ್ತಿ : ಜಿ. ಪರಮೇಶ್ವರ

ಸುದ್ದಿಮೂಲ ವಾರ್ತೆ

ತುಮಕೂರು, ಅ.27 : ರಾಜ್ಯದಲ್ಲಿ 5.25ಲಕ್ಷ ಸರ್ಕಾರಿ ನೌಕರರಿದ್ದು, 2.50ಲಕ್ಷ ಹುದ್ದೆಗಳು ಖಾಲಿ ಇವೆ. ಇನ್ನು 5 ವರ್ಷದೊಳಗಾಗಿ ಈ ಎಲ್ಲಾ ಹುದ್ದೆಗಳನ್ನು ತುಂಬಲು ನಮ್ಮ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದರು.

ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

7ನೇ ವೇತನ ಆಯೋಗ ಸಂಬಂಧ ರಚಿಸಲಾಗಿರುವ ಸಮಿತಿಯು ನ. 23ರೊಳಗಾಗಿ ವರದಿ ನೀಡಿದ ನಂತರ ಇನ್ನುಳಿದ ಶೇ.23ರಷ್ಟು ವೇತನ ಸವಲತ್ತುಗಳನ್ನು ನೀಡಲು ಕ್ರಮವಹಿಸಲಾಗುವುದು. ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಎನ್‌ಪಿಎಸ್‌ನಿಂದ ಓಪಿಎಸ್ ಸಂಬಂಧ ರಚಿಸಲಾಗಿರುವ ಸಮಿತಿಯು ವರದಿ ನೀಡಿದ ನಂತರ ತಪ್ಪದೆ ನೀಡಿದ ಭರವಸೆಯಂತೆ ಎನ್‌ಪಿಎಸ್‌ನಿಂದ ಓಪಿಎಸ್‌ಗೆ ಬದಲಾವಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರಿ ನೌಕರರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ರಾಜ್ಯದಲ್ಲಿ 2.60ಲಕ್ಷ ಹುದ್ದೆಗಳು ಖಾಲಿ ಇದ್ದು, ರಾಜ್ಯ ಸರ್ಕಾರಿ ನೌಕರರು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರದ ಜನಪರ ಯೋಜನೆಗಳ ಲಾಭವನ್ನು ಕಟ್ಟಕಡೆಯ ಜನರಿಗೂ ಸಹ ತಲುಪಿಸಲು ಸರ್ಕಾರಿ ನೌಕರರು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ. ಆದುದರಿಂದ ಸರ್ಕಾರಿ ನೌಕರರಿಗೆ 7ನೇವೇತನ ಆಯೋಗದ ಸವಲತ್ತುಗಳನ್ನು ಮುಂಬರುವ ಏಪ್ರಿಲ್ 22, 2024ರೊಳಗಾಗಿ ಒದಗಿಸಿಕೊಡಬೇಕು ಮತ್ತು ಎನ್.ಪಿ.ಎಸ್. ರದ್ದಾಗಬೇಕು. ಒಪಿಎಸ್ ಜಾರಿಯಾಗಬೇಕು. ಎಲ್ಲಾ ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ಸೌಲಭ್ಯ ದೊರಕಬೇಕು. ಇದರಿಂದಾಗಿ 6ಲಕ್ಷ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬಗಳಿಗೆ ಅ ಎಂದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ