Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲುಷಿತ ನೀರು ಸೇವಿಸಿ ಮೃತಪಟ್ಟರೆ ಜಿ.ಪಂ ಸಿಇಒ ಅಮಾನತು

ಸುದ್ದಿಮೂಲ ವಾರ್ತೆ

ಬೆಂಗಳೂರು,ಆ.22: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಅಲ್ಲದೆ, ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.

ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ನಾಲ್ಕು ಇಲಾಖೆಗಳ ನಡುವೆ ಸಮನ್ವಯ

ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ - ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಹಾಸ್ಟೆಲ್ ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ . ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು ಎಂದರು.

ಟ್ಯಾಂಕ್ ಗಳ ಸ್ವಚ್ಛತಾ ಕಾರ್ಯ

ಪೈಪ್ ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು. ನೈರ್ಮಲ್ಯ ಮತ್ತು ಸ್ವಚ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ಪಟ್ಟರು. ಸಾಮಾನ್ಯವಾಗಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯಡಿ ಆದ್ಯತೆಯನ್ನು ರಸ್ತೆ, ಇನ್ನಿತರ ಕಾಮಗಾರಿಗಳಿಗೆ ವಹಿಸಲಾಗುತ್ತದೆ ಎಂದರು.

39 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರು ಸಭೆಯ ಗಮನಕ್ಕೆ ತಂದರು.

ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ನೀರಿನ ಸ್ವಚ್ಛತೆ ಬಗ್ಗೆ ಆದ್ಯತೆ ವಹಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಆರೋಗ್ಯ ಸಚಿವ ಗುಂಡೂ ರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ.ಎನ್.ರಾಜಪ್ಪ, ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ