Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಅಧಿವೇಶನ ತಡೆಯಲು ನಿರ್ಧಾರ : ಜಿ.ಟಿ. ದೇವೇಗೌಡ

ಸುದ್ದಿಮೂಲ ವಾರ್ತೆ

ಮೈಸೂರು, ನ.13 : ರಾಜ್ಯ ಸರ್ಕಾರ ಕೂಡಲೇ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿ ಇರುವ ರೈತರಿಗೆ ಪರಿಹಾರ ಹಣ ಬಿಡುಗಡೆ ಮಾಡದಿದ್ದರೇ ಶಾಸಕರೆಲ್ಲರೂ ಸೇರಿ ಡಿ.4ರಂದು ಬೆಳಗಾವಿ ಅಧಿವೇಶನ ತಡೆದು ಧರಣಿ ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನ ಹುಣಸೂರಿನಲ್ಲಿ ತಮ್ಮ ನೇತೃತ್ವದ ಜೆಡಿಎಸ್ ನಾಯಕರೊಂದಿಗೆ ರೈತರ ಜಮೀನುಗಳಿಗೆ ತೆರಳಿ ಬರ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 3,97,879 ಹೆಕ್ಟೇರ್ ವಿಸ್ತೀರ್ಣ ವ್ಯವಸಾಯ ಪ್ರದೇಶವಿದೆ. ಈ ಸಾಲಿನಲ್ಲಿ 3,70,211 ಹೆಕ್ಟೇರ್ (ಶೇ. 93)ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಈ ಬಾರಿಯ ಮುಂಗಾರಿನಲ್ಲಿ ಜಿಲ್ಲೆಯಲ್ಲಿ 82,660.75 ಹೆಕ್ಟೇರ್ ಪ್ರದೇಶದಲ್ಲಿ, ಒಟ್ಟು 1,49,296 ರೈತರಿಗೆ ಅಂದಾಜು 70 ಕೋಟಿ ರೂ. ನಷ್ಟು ಅನಾವೃಷ್ಟಿಯಿಂದ ಬೆಳೆ ನಷ್ಟವಾಗಿರುತ್ತದೆ ಎಂದು ಸರ್ಕಾರದಿಂದ ವರದಿ ನೀಡಲಾಗಿದೆ ಎಂದು ವಿವರಿಸಿದರು.

2 ಲಕ್ಷ ಕೋಟಿ ರೂ. ಬೆಳೆ ನಷ್ಟ

2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು 2 ಲಕ್ಷ ಕೋಟಿ ರೂ. ಬೆಳೆ ನಷ್ಟವಾಗಿದೆ. ಆದರೆ, ಈವರೆಗೆ ಸರ್ಕಾರ ಬೆಳೆ ಪರಿಹಾರ ಕೊಟ್ಟಿಲ್ಲ. ಹೀಗಾಗಿ ರೈತರು ಬಡ್ಡಿ ಕಟ್ಟಲು ಸಾಧ್ಯವಾಗದೇ ಅನಾಥರಾಗಿದ್ದಾರೆ . ರಾಜ್ಯ ಸರ್ಕಾರ ವಿದ್ಯುತ್ ಸಮಸ್ಯೆ ಬಗೆಹರಿಸಲು ಬಜೆಟ್‌ನಲ್ಲಿ ಅನುದಾನ ನೀಡಿಲ್ಲ ಎಂದು ಟೀಕಿಸಿದರು.

ರೈತರ ಪಾಲಿಗೆ ಮರಣ ಶಾಸನ

ಹಿಂದೆ ಬಿಜೆಪಿ ಸರ್ಕಾರದಲ್ಲಿಯೂ ಕೇಂದ್ರದಿಂದ ಬರ ಪರಿಹಾರ ತರಲಾಗಿತ್ತು. ರಾಜ್ಯಾದ್ಯಂತ 33 ಸಾವಿರ ಕೋಟಿ ರೂ. ಬೆಳೆ ಹಾನಿ ಆಗಿದೆ ಎಂದು ಗುರುತಿಸಲಾಗಿದೆ. ಆದರೆ, ಈವರೆಗೆ ಪರಿಹಾರ ನೀಡಿಲ್ಲ. ರೈತರಿಗೆ ಹಗಲಿನ ವೇಳೆ ವಿದ್ಯುತ್ ನೀಡದೇ ರಾತ್ರಿ ವೇಳೆ ಕೊಡುತ್ತಿರುವುದರಿಂದ ರಾತ್ರಿ ವೇಳೆ ಹೊಲ ಗದ್ದೆಗಳಲ್ಲಿ ದುಡಿಯುವಂತಾಗಿದೆ. ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ. ರೈತರ ಪಾಲಿಗೆ ಮರಣ ಶಾಸನ ಬರೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ಕೊಳವೆ ಬಾವಿ ಕೊರೆಸಿಕೊಳ್ಳಲು ಉಚಿತವಾಗಿ ವಿದ್ಯುತ್ ಸಂಪರ್ಕ ಸೇರಿದಂತೆ 3 ಲಕ್ಷ ರೂ. ವೆಚ್ಚದಲ್ಲಿ ಐಪಿ ಸೆಟ್ ಹಾಕಿಸಿಕೊಡಲಾಗುತ್ತಿತ್ತು. ಆದರೆ ರಾಜ್ಯ ಸರ್ಕಾರ ಈ ಯೋಜನೆಯನ್ನೇ ರದ್ದುಗೊಳಿಸಿದೆ ಎಂದು ವಿಷಾದಿಸಿದರು.

ಮಾಜಿ ಸಚಿವ ಸಾ.ರಾ. ಮಹೇಶ್ ಮಾತನಾಡಿ, ಬರ ಪರಿಹಾರಕ್ಕೆ ಮೀಸಲಾದ ಹಣ ಜಿಲ್ಲಾಧಿಕಾರಿಗಳ ಬಳಿ ಇದ್ದು, ಕೂಡಲೇ ರೈತರ ಖಾತೆಗೆ ಜಮೆ ಮಾಡಬೇಕು. ಸರ್ಕಾರ ಇತರ ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕಿ ರೈತರ ಸಂಕಷ್ಟಕ್ಕೆ ಧಾವಿಸಬೇಕು. ಸಿಎಂ ಜಿಲ್ಲೆಯಲ್ಲಿಯೇ ಬರ ಪರಿಹಾರ ಕಾರ್ಯ ಸ್ಥಗಿತಗೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವರು ನಿಷ್ಕ್ರಿಯರಾಗಿದ್ದಾರೆ. ಕೂಡಲೇ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿ ಜನರ ಕಷ್ಟ ಪರಿಹರಿಸಬೇಕು ಎಂದು ಮನವಿ ಮಾಡಿದರು.

ಶಾಸಕ ಹರೀಶ್ ಗೌಡ ಮಾತನಾಡಿ, ಈ ಬಾರಿ ಜಿಲ್ಲೆಯಲ್ಲಿ ಶೇ.18ರಷ್ಟು ಮಳೆ ಕಡಿಮೆಯಾಗಿದೆ. ಇದರಿಂದ ಬೆಳೆ ನಷ್ಟವಾಗಿರುತ್ತದೆ. ಇದರೊಂದಿಗೆ ವಿದ್ಯುತ್ ಕಣ್ಣುಮುಚ್ಚಾಲೆಯಿಂದ ರೈತರ ಪಂಪ್ ಸೆಟ್ಗಳಿಗೆ ವಿದ್ಯುತ್ ಸರಿಯಾಗಿ ಪೂರೈಕೆಯಾಗದೆ ಬಹಳ ತೊಂದೆಯಾಗಿದೆ. ಕೈಗೆ ಬಂದ ಬೆಳೆ ಒಣಗಿರುವುದರಿಂದ ರೈತರು ಸಾಲದ ಸೂಲದಲ್ಲಿ ಮತ್ತೊಮ್ಮೆ ಸಿಲುಕಿದ್ದಾರೆ. ಹೀಗಾಗಿ ಕೂಡಲೇ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಶಾಸಕ ಜಿ.ಡಿ. ಹರೀಶ್‌ಗೌಡ ಮತ್ತಿತರ ಮುಖಂಡರು ಇದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ