Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.

'ಗಗನ್ಯಾನ್' ಮಿಷನ್ ಯಶಸ್ವಿ

ನವದೆಹಲಿ, ಅ.21: ಚಂದ್ರಯಾನ, ಸೂರ್ಯಯಾನ ಯಶಸ್ಸಿನ ನಂತರ ಮಾನವ ಸಹಿತ ಗಗನಯಾನಕ್ಕೆ ಸಿದ್ಧತೆ ಆರಂಭಿಸಿರುವ ಭಾರತಿಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಗಗನಯಾನ ಪರೀಕ್ಷಾ ಅಭಿಯಾನವನ್ನು ಶನಿವಾರ ಯಶಸ್ವಿಗೊಳಿಸಿ ಹೊಸ ನಿರೀಕ್ಷೆ ಹುಟ್ಟುಹಾಕಿದೆ.

ಇಸ್ರೋ ತನ್ನ ಗಗನಯಾನ ಅಭಿಯಾನಕ್ಕೆ ಸಂಬಂಧಿಸಿದಂತೆ ಮೊದಲ ಮಾನವರಹಿತ ಹಾರಾಟ ಪರೀಕ್ಷೆಯನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿಯ ಸತೀಶ ಧವನ್ ಅಂತರಿಕ್ಷ ಕೇಂದ್ರದಿಂದ ಯಶಸ್ವಿಯಾಗಿ ನಡೆಸಿತು.

ಬಹುನಿರೀಕ್ಷೀತ ಮಾನವಸಹಿತ ಗಗನಯಾನ ಸಿದ್ಧತೆಯ ಭಾಗವಾಗಿ, ಇಸ್ರೋ ನಡೆಸಿದ ಮೊದಲ ಪ್ರಾಯೋಗಿಕ ಪರೀಕ್ಷಾರ್ಥ ಸಫಲವಾಗಿದೆ. ಉದ್ದೇಶಿತ ಮೂರು ಪರೀಕ್ಷೆಗಳಲ್ಲಿ ಇದು ಮೊದಲನೆಯದ್ದಾಗಿದೆ. ಕ್ರ್ಯೂ ಮಾಡೆಲ್, ಕ್ರ್ಯೂ ಎಸ್ಕೇಪ್ ಮಾಡೆಲ್ ಒಳಗೊಂಡ ರಾಕೆಟ್ ನಭಕ್ಕೆ ಹಾರಿತ್ತು. ರಾಕೆಟ್‍ನಿಂದ ಬೇರ್ಪಟ್ಟು ಎರಡೂ ಮಾಡೆಲ್‍ಗಳು ಪ್ಯಾರಚೂಟ್ ಮೂಲಕ ಭೂಮಿಗೆ ಬಂದಿಳಿದಿವೆ.

ಚೊಚ್ಚಲ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1(ಟಿವಿ-ಡಿ1)‘ಕ್ರೂ ಎಸ್ಕೇಪ್ ಸಿಸ್ಟಮ್ (ಸಿಇಎಸ್)’ ನ ಸಾಧನೆಯನ್ನು ಪ್ರದರ್ಶಿಸುವ ಉದ್ದೇಶವನ್ನು ಹೊಂದಿತ್ತು.

ಸಿಇಎಸ್ ಯಾವುದೇ ತುರ್ತು ಸಂದರ್ಭಗಳಿಂದಾಗಿ ಬಾಹ್ಯಾಕಾಶ ಯಾನವು ವಿಫಲಗೊಂಡರೆ ಅಂತರಿಕ್ಷ ನೌಕೆಯಲ್ಲಿನ ಕ್ರೂ ಮಾಡ್ಯೂಲ್‌ನಿಂದ ಯಾನಿಗಳನ್ನು ಸುರಕ್ಷಿತವಾಗಿ ಪಾರು ಮಾಡುವ ವ್ಯವಸ್ಥೆಯಾಗಿದೆ. ಸಿಇಎಸ್ ಮೂಲಕ ಹೊರಕ್ಕೆ ತಳ್ಳಲ್ಪಡುವ ಬಾಹ್ಯಾಕಾಶ ಯಾನಿಗಳನ್ನು ಭೂಮಿಯನ್ನು ತಲುಪಿದ ಬಳಿಕ ಸುರಕ್ಷಿತವಾಗಿ ಹೊರತೆಗೆಯಲಾಗುವುದು. ಕ್ರೂ ಮಾಡ್ಯೂಲ್ ಅಂತರಿಕ್ಷ ನೌಕೆಯಲ್ಲಿ ಯಾನಿಗಳು ವಾಸವಾಗಿರುವ ಭಾಗವಾಗಿದ್ದು, ಒತ್ತಡಕ್ಕೊಳಗಾದ ಲೋಹೀಯ ರಚನೆಯಾಗಿರುವ ಅದರೊಳಗೆ ಭೂಮಿಯಲ್ಲಿನ ವಾತಾವರಣವನ್ನು ಸೃಷ್ಟಿಸಲಾಗಿರುತ್ತದೆ.

ಆರಂಭಿಕ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಿದ ಬಳಿಕ ಶನಿವಾರ ಬೆಳಿಗ್ಗೆ ಟಿವಿ-ಡಿ1 ಹಾರಾಟಕ್ಕೆ ಚಾಲನೆ ನೀಡಲಾಗಿತ್ತು. ಕೆಲವೇ ನಿಮಿಷಗಳಲ್ಲಿ ಮಾಡ್ಯೂಲ್ ಬಂಗಾಳ ಕೊಲ್ಲಿಯಲ್ಲಿ ಇಳಿದಿತ್ತು. ಭಾರತೀಯ ನೌಕಾಪಡೆಯು ಹಡಗು ಮತ್ತು ಮುಳುಗು ತಂಡದ ಮೂಲದ ಅದನ್ನು ಸುರಕ್ಷಿತವಾಗಿ ಹೊರತೆಗೆಯಿತು.

2024ರಲ್ಲಿ ಉಡಾವಣೆಗೊಳ್ಳಲಿರುವ ಗಗನಯಾನ ಅಭಿಯಾನ ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಯಾನವಾಗಲಿದೆ. ಮೂರು ದಿನಗಳ ಅಭಿಯಾನದ ಸಂದರ್ಭದಲ್ಲಿ ಅವರನ್ನು ಭೂಮಿಯಿಂದ 400 ಕಿ.ಮೀ. ಎತ್ತರದಲ್ಲಿ ಕೆಳ ಭೂಕಕ್ಷೆಯಲ್ಲಿ ಇರಿಸಲಾಗುವುದು ಎಂದು ಇಸ್ರೋ ತಿಳಿಸಿದೆ.

ಇಂದು ಬೆಳಗ್ಗೆ 8:45 ಗಂಟೆಗೆ ಮಾನವರಹಿತ ಪರೀಕ್ಷಾರ್ಥ ವಾಹನ ಉಡಾವಣೆಗೆ ಇಸ್ರೋ ಸಜ್ಜಾಗಿತ್ತು. ಅದಕ್ಕೂ ಮುನ್ನ 8:30 ಗಂಟೆಗೆ ಉಡ್ಡಯನಕ್ಕೆ ಇಸ್ರೋ ಸಮಯ ನಿಗದಿಪಡಿಸಿತ್ತು, ಆದ್ರೆ ಹವಾಮಾನ ವೈಪರಿತ್ಯದಿಂದ ಸಮಯ ಬದಲಾವಣೆ ಮಾಡಲಾಗಿತ್ತು. ಕೊನೇ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಯಶಸ್ವಿಯಾಗಿ ಪರೀಕ್ಷಾರ್ಥ ಹಾರಾಟಕ್ಕೆ ರಾಕೆಟ್‌ ಉಡಾವಣೆ ಮಾಡಲಾಯಿತು.

ಇಸ್ರೋ ಸಾಧನೆಗೆ ಜಗತ್ತೇ ಮೆಚ್ಚುಗೆ:

ಗಗನಯಾನದ ಸಮಯದಲ್ಲಿ ಗಗನಯಾತ್ರಿಗಳು ಕುಳಿತುಕೊಳ್ಳುವ ಕ್ರ್ಯೂ ಸುಮಾರು 17 ಕಿ.ಮೀ. ಎತ್ತರದಲ್ಲಿ ಬೇರೆಯಾಗಿಸುವ ಪ್ಲ್ಯಾನ್ ಇತ್ತು. ಪ್ರಕ್ರಿಯೆ ನಂತರ ಪ್ಯಾರಾಚ್ಯೂಟ್‌ ತೆರೆಯಲಿದೆ, ಬಳಿಕ ನಿಧಾನವಾಗಿ ಕ್ರ್ಯೂ ಮಾಡ್ಯೂಲ್ ಅನ್ನ ಸಮುದ್ರದ ಮೇಲೆ ಇಳಿಸುತ್ತೇವೆ ಎಂದು ಇಸ್ರೋ ಮಾಹಿತಿ ನೀಡಿತ್ತು. ಇದೀಗ ಎಲ್ಲವೂ ಅಂದುಕೊಂಡಂತೆ ನಡೆದಿದೆ. ಈ ಮೂಲಕ ಇತಿಹಾಸ ನಿರ್ಮಿಸಿದ ಹೆಮ್ಮೆಯ ಗರಿ ಸಿಕ್ಕಿದ್ದು, ಜಾಗತಿಕವಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಗಗನಯಾನಕ್ಕೆ ಮಾನವರನ್ನು ಕಳುಹಿಸುವುದುರ ಪ್ರಯೋಗಾರ್ಥವಾಗಿ ನಡೆದ ಈ ಪ್ರಯತ್ನ ಯಶಸ್ವಿಯಾಗಿದೆ.

ಟಿವಿ- ಡಿ1 ಮಿಷನ್‍ನ ಯಶಸ್ವಿ ಸಾಧನೆಯನ್ನು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ