Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶಕ್ಕೆ ಗಾಂಧಿ ಒಬ್ಬರೇ ಮಹಾತ್ಮ ಮತ್ತು ಪಿತಾಮಹ:ಸಿಎಂ

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.2: ದೇಶಕ್ಕೆ ಗಾಂಧಿ ಒಬ್ಬರೇ ಮಹಾತ್ಮ ಮತ್ತು ಪಿತಾಮಹ. ಯಾವುದೇ ಪ್ರಚಾರದ ಸಾಮಾಗ್ರಿ ಮತ್ತು ತಂತ್ರಜ್ಞಾನ ಇಲ್ಲದೆ ಕೇವಲ ಅಹಿಂಸೆ ಮತ್ತು ತಮ್ಮ ಬದುಕಿನ ಸರಳತೆಯಿಂದಲೇ ಮಹಾತ್ಮಗಾಂಧಿ ವಿಶ್ವದ ಮೂಲೆ ಮೂಲೆಗೆ ತಲುಪಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಹಲವು ಇಲಾಖೆಗಳ ಸಹಯೋಗದಲ್ಲಿ ಗಾಂಧಿ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಒಮ್ಮೆ ರೈಲಿನಲ್ಲಿ ಮೂರನೇ ದರ್ಜೆಯಲ್ಲಿ ಪ್ರಯಾಣಿಸುತ್ತಿದ್ದರು. ಸಹ ಪ್ರಯಾಣಿಕರು, "ಏಕೆ ಮೂರನೇ ದರ್ಜೆ ಸೀಟಿನಲ್ಲಿ ಪ್ರಯಾಣಿಸುತ್ತಿದ್ದೀರಿ" ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಗಾಂಧಿ ಅವರು, "ನಾಲ್ಕನೇ ದರ್ಜೆ ರೈಲಿನಲ್ಲಿ ಇಲ್ಲ. ಇದ್ದಿದ್ದರೆ ಅಲ್ಲೇ ಪ್ರಯಾಣಿಸುತ್ತಿದ್ದೆ. ಅದು ಇಲ್ಲದ್ದರಿಂದ ಮೂರನೇ ದರ್ಜೆಯಲ್ಲಿ ಪ್ರಯಾಣಿಸುತ್ತಿದ್ದೇನೆ" ಎಂದರು. ಇಷ್ಟು ಸರಳವಾದ ವ್ಯಕ್ತಿತ್ವ ಗಾಂಧಿಯವರದ್ದಾಗಿತ್ತು ಎಂದು ಉದಾಹರಿಸಿದರು.

ನಮ್ಮ ಸರ್ಕಾರ ರೂಪಿಸುತ್ತಿರುವ ಕಾರ್ಯಕ್ರಮಗಳಲ್ಲಿ ಮಹಾತ್ಮಗಾಂಧಿ ಅವರ ಆಶಯಗಳು ಸೇರಿವೆ. ಗಾಂಧಿ ಅವರ ಆಶಯದಂತೆ ಕಟ್ಟ ಕಡೆಯ ವ್ಯಕ್ತಿಗೂ ಬದುಕುವ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಸರ್ಕಾರದ ಗುರಿ ಎಂದರು.

ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಸೇರಿದಂತೆ ಹಲವು ಗಣ್ಯರು ವೇದಿಕೆಯಲ್ಲಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ