Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧೀಜಿ ಶಾಂತಿ ಸಂದೇಶ ವಿಶ್ವಕ್ಕೆ ಮಾದರಿ 

ಸುದ್ದಿಮೂಲ ವಾರ್ತೆ

ತುಮಕೂರು,ಅ.2: ಜಗತ್ತಿಗೆ ಶಾಂತಿ ಹಾಗೂ ಅಹಿಂಸೆಯ ಅಸ್ತ್ರಗಳನ್ನು ಕೊಟ್ಟಂತಹವರು ಮಹಾತ್ಮ ಗಾಂಧೀಜಿ, ಸರಳತೆಯನ್ನು ತಿಳಿಸಿಕೊಟ್ಟವರು ಲಾಲ್ ಬಹದ್ದೂರ್ ಶಾಸ್ತ್ರೀಜಿ. ಇಂತಹ ಮಹನೀಯರು ಹಾಕಿ ಕೊಟ್ಟಂತಹ ಆದರ್ಶಗಳನ್ನು ಅನುಕರಣೆ ಮಾಡುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ 154ನೇ ಮಹಾತ್ಮ ಗಾಂಧಿ ದಿನಾಚರಣೆ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಹಾಗೂ ಪ್ರಬಂಧ ವಿಜೇತ ಅಭ್ಯರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದ ಅವರು, ತುಮಕೂರು ಜಿಲ್ಲೆಗೆ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಪೂರ್ವ ಚಳುವಳಿ ಸಂಬಂಧ ಜಾಗೃತಿ ಮೂಡಿಸಲು 1927ರ ಆಗಸ್ಟ್ ತಿಂಗಳಿನಲ್ಲಿ ಅವರೊಂದಿಗೆ ಆಗಮಿಸಿದ್ದರು ಎಂದು ಸ್ಮರಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಂಗಿದ್ದ ಮಹಾತ್ಮ

ಗಾಂಧೀಜಿಯವರು ಬಹಿರಂಗ ಅಧಿವೇಶನವನ್ನುದ್ದೇಶಿಸಿ

ಮಾತನಾಡಿದ್ದರು. ಮರುದಿನ ಬೆಳಿಗ್ಗೆಯೇ ಕೋತಿತೋಪು ಬಳಿಯನ್ಹರಿಜನರ ಕೇರಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ, ಅದೇ ದಿನ ಸಂಜೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಾಸ್ಟೆಲ್‌ಗೆ ಭೇಟಿ ನೀಡಿದ್ದರು ಎಂದು ಸ್ಮರಿಸಿದರು.

ಭಾರತದ ಜನತೆಗೆ ಗಾಂಧೀಜಿಯವರು ನೀಡಿದ ಕೊಡುಗೆ ಎಂದರೆ ಅದು ಸತ್ಯಕ್ಕೆ ಆಗ್ರಹ ಅಂದರೇ ಸತ್ಯಾಗ್ರಹ, ಬ್ರಿಟೀಷರ ವಿರುದ್ದ ಹೋರಾಡಲು ಅವರು ಬಳಸಿದ ಅಸ್ತ್ರವೆಂದರೆ ಶಾಂತಿ, ಅಹಿಂಸೆ ಹಾಗೂ ಧರ್ಮ. ಈ ಮೂರು ಅಸ್ತ್ರಗಳೊಂದಿಗೆ ಬ್ರಿಟೀಷರ ಪಾರುಪತ್ಯವನ್ನು ಮಾಹಾತ್ಮ ಗಾಂಧಿಜಿಯವರು ಕೊನೆಗಾಣಿಸಿದರು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಶೋಷಿತ ಜನಾಂಗದವರ ಅದರಲ್ಲೂ ಹರಿಜನರ ಪರ ಧ್ವನಿಯೆತ್ತಿದ್ದ ಮಹಾತ್ಮ ಗಾಂಧೀಜಿಯವರು ‘ಹರಿಜನ ಪತ್ರಿಕೆ’ಯ ಮೂಲಕ ಶೋಷಿತ ಸಮುದಾಯದ ಸಮಸ್ಯೆಗಳನ್ನು ಸಮಾಜಕ್ಕೆ ತೋರಿಸಿದ್ದರು. ಇಂದಿನ ಪೀಳಿಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಆದರ್ಶಗಳನ್ನು ಪಾಲಿಸಬೇಕಿದೆ ಎಂದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಏರ್ಪಡಿಸಿದ್ದ ಮಹಾತ್ಮ ಗಾಂಧಿ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಈ ಸಂದರ್ಭ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

ನಗರ ಶಾಸಕ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಉಪವಿಭಾಗಾಧಿಕಾರಿ ಗೌರವ್‌ಕುಮಾರ್‌ಶೆಟ್ಟಿ ಅವರುಗಳು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣಪತ್ರ ಹಾಗೂ ನಗದು ಬಹುಮಾನ ವಿತರಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ