Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯವಂತ ಜೀವನಕ್ಕಾಗಿ ವ್ಯಸನ ಮುಕ್ತರಾಗಿ : ಗಂಗಾಧರ್‌ ಕರೆ

ಸುದ್ದಿಮೂಲ ವಾರ್ತೆ

ತುಮಕೂರು ಆ.1: ಆರೋಗ್ಯ ವಂತ ಜೀವನ ಬೇಕೆಂದರೆ ವ್ಯಸನ ಮುಕ್ತರಾದಾಗ ಮಾತ್ರ ಸಾಧ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಾಧರ್ ತಿಳಿಸಿದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ರಾಜಕುಮಾರ್ ಅವರ ಅಧ್ಯಕ್ಷತೆಯಲ್ಲಿ ಡಾ.ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವ್ಯಸನ

ಮುಕ್ತ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದುಶ್ಚಟಗಳಿಂದ ದೂರವಾದಾಗ ಮಾತ್ರ ಮನುಷ್ಯ ಅರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಮಾಜದಲ್ಲಿ ಮುಂದೆ ಬರಲು ಸಾಧ್ಯ ಎಂದರು.

ಸಂಪನ್ಮೂಲ ವ್ಯಕ್ತಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಜಯಣ್ಣ ಮಾತನಾಡಿ, ದೇಶದ ಸರ್ವತೋಮುಖ ಬೆಳೆವಣಿಗೆ ಎಂದರೆ, ದೇಶದಲ್ಲಿನ ಜನರು ಆರೋಗ್ಯವಂತ ಜೀವನವನ್ನು ಅವಲಂಬಿಸಿರುತ್ತದೆ. ವಿಶ್ವ ಆರೋಗ್ಯ ಸಂಸ್ಥೆ, ಆರೋಗ್ಯ ಎಂದರೆ ಮನುಷ್ಯನ ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಅದ್ಯಾತ್ಮಿಕ

ಆರೋಗ್ಯವನ್ನು ಒಟ್ಟಾರೆಯಾಗಿ ಪರಿಗಣಿಸಲಾಗುತ್ತದೆ. ಈ ಎಲ್ಲ ಅಂಶಗಳು ಸರಿ ಇರಬೇಕೆಂದರೆ ನಾವು ವ್ಯಸನದಿಂದ ಮುಕ್ತರಾಗಬೇಕು. ಹದಿ ಹರೆಯದ ವಯಸ್ಸಿನಲ್ಲಿ ಆಕರ್ಷಣೆಗೆ ಒಳಗಾಗಿ ಮಾಡುವ ಒಂದು ತಪ್ಪು, ಚಟವಾಗಿ ಪರಿಣಮಿಸಿ, ವ್ಯಕ್ತಿ ವೈಯಕ್ತಿಕ ಆರೋಗ್ಯದ ಜೊತೆಗೆ, ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತದೆ. ಮದ್ಯಪಾನ, ಧೂಮಪಾನ, ಮಾದಕ ವಸ್ತುಗಳ ಸೇವನೆಯಿಂದ ನಮ್ಮ ಮೆದುಳಿನ ನರಮಂಡಲದ ಮೇಲೆ ನೇರ ಪರಿಣಾಮ ಬೀರಿ, ಸಾವು ನೋವುಗಳು ಸಂಭವಿಸುತ್ತವೆ. ಹಾಗಾಗಿ ಯುವಜನತೆ ಇದರಿಂದ ದೂರ ಇರಬೇಕೆಂದು ಸಲಹೆ ನೀಡಿದರು.

ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ರಾಜಕುಮಾರ್ , ಉಪನ್ಯಾಸಕರಾದ ಮೋಹನಕುಮಾರ್ ಅವರು ವ್ಯಸನ ಮುಕ್ತ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಪ್ರಭಾಕರ್, ಗಂಗಾಧರಯ್ಯ, ದಸ್ತಗೀರ್ ಸಾಬ್, ಪ್ರಕಾಶ್.ಟಿ.ವಿ.,

ಶ್ರೀಧರ್, ಹರೀಶ್, ನಂಜುಂಡಯ್ಯ, ಶಶಿಧರ್, ಮೋಹನಕುಮಾರ್ ಹರೀಶ್.ಜಿ.ಹೆಚ್. ಮತ್ತಿತರರು ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ