Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವದ ಮಾನಸಿಕ ಆರೋಗ್ಯಕ್ಕೆ ಯೋಗ ಮದ್ದು: ಗೆಹ್ಲೋಟ್

 

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.21: ಯೋಗವು ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕೃತಿ ಮತ್ತು ಆಚರಣೆಗಳಲ್ಲಿ ಮಿಳಿತಗೊಂಡಿದೆ. ಇಂದು ಇಡೀ ಪ್ರಪಂಚದ ಭಾಗವಾಗಿರುವ ನಮ್ಮ ಗ್ರಂಥಗಳಲ್ಲಿ ಯೋಗದ ಮಹತ್ವವನ್ನು ಉಲ್ಲೇಖಿಸಲಾಗಿದೆ, ಅದಕ್ಕಾಗಿಯೇ ಭಾರತವನ್ನು ವಿಶ್ವದ ಯೋಗ ಗುರು ಎಂದು ಕರೆಯಲಾಗುತ್ತದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.



9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯುಷ್ಯ ಇಲಾಖೆ ಇಂದು ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ "ಯೋಗ-ವಸುದೈವ ಕುಟುಂಬಕ್ಕಾಗಿ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಆರೋಗ್ಯಕರ ಜೀವನಕ್ಕಾಗಿ ಯೋಗ ಅವಶ್ಯಕವಾಗಿದೆ ಎಂದರು.

ಜನರನ್ನು ದೇಶ-ಭಾಷೆ ಮೀರಿ ಸಂಪರ್ಕಿಸುವ ಮತ್ತು ಆರೋಗ್ಯ ಸಮಾಜ ಕಟ್ಟುವ ಶಕ್ತಿ ಯೋಗಕ್ಕೆ ಇದೆ. ದೇಹ, ಮನಸ್ಸು ಮತ್ತು ಭಾವನೆಗಳನ್ನು ಸಮತೋಲನಗೊಳಿಸಲು ಯೋಗ ಉತ್ತಮ ಮಾರ್ಗವಾಗಿದೆ. ಇಂದು ಪ್ರಪಂಚದಾದ್ಯಂತ ಜನರು ತಮ್ಮ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಯೋಗಾಸನದ ಅಭ್ಯಾಸದ ಮೂಲಕ, ನಾವು ಆರೋಗ್ಯಕರ ಮನಸ್ಸು ಮತ್ತು ದೇಹವನ್ನು ಪಡೆಯಬಹುದು ಎಂದರು.

2014 ರಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗವನ್ನು ಅಳವಡಿಸಿಕೊಳ್ಳುವಂತೆ ವಿಶ್ವದ ಎಲ್ಲಾ ದೇಶಗಳಿಗೆ ಕರೆ ನೀಡಿದರು ಮತ್ತು ಇಂದು ವಿಶ್ವದಲ್ಲಿ ಪ್ರತಿ ವರ್ಷ ಯೋಗ ದಿನವನ್ನು 172 ಕ್ಕೂ ಹೆಚ್ಚು ದೇಶಗಳು ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತಿದೆ.

ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನದ ಥೀಮ್ "ವಸುಧೈವ ಕುಟುಂಬಕ್ಕಾಗಿ ಯೋಗ". ಇದು ನಮ್ಮ ಭಾತೃತ್ವ ಮತ್ತು ವಿಶ್ವ ಸಹೋದರತ್ವದ ನಡವಳಿಕೆಯನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕ ರಾಜ್ಯದಲ್ಲಿ ಜನವರಿ 15, 2023 ರಂದು 26 ನೇ ರಾಷ್ಟ್ರೀಯ ಯುವಜನೋತ್ಸವವನ್ನು ಆಯೋಜಿಸುವ ಸಂದರ್ಭದಲ್ಲಿ, ದೊಡ್ಡ ಪ್ರಮಾಣದ ಯೋಗವನ್ನು ಆಯೋಜಿಸುವ ಮೂಲಕ ಯೋಗದ ಗಿನ್ನೆಸ್ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ.

ನಾನು ಸ್ವತಃ ಯೋಗ ಪಟುವಾಗಿದ್ದು, ಪ್ರತಿದಿನ ಯೋಗ ಮತ್ತು ಪ್ರಾಣಾಯಾಮದ ಮಾಡುವ ಮೂಲಕ ಸಕಾರಾತ್ಮಕ ಪರಿಣಾಮಗಳನ್ನು ಅನುಭವಿಸಿದ್ದೇನೆ. ತಾವೆಲ್ಲರೂ ಯೋಗಾಭ್ಯಾಸವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಯೋಗದ ಮಹತ್ವವನ್ನು ವಿವರಿಸುವ ಮೂಲಕ ಯೋಗದತ್ತ ಜಗತ್ತಿನ ಜನರನ್ನು ಪ್ರೇರೇಪಿಸಬೇಕೆಂದು ಮನವಿ ಮಾಡಿದರು.

ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮ. ಆರೋಗ್ಯ ಮತ್ತು ಬಲಿಷ್ಠ ಸಮಾಜಕ್ಕಾಗಿ ಯೋಗ ಅಗತ್ಯವಾಗಿದೆ. ನಮ್ಮ ಋಷಿಮುನಿಗಳು ನೀಡಿರುವ ಈ ಯೋಗವನ್ನು ಉಳಿಸಿಕೊಳ್ಳುವುದು ನಮ್ಮ ಜವಬ್ಧಾರಿ, ಮಾನಸಿಕ ಒತ್ತಡ ಎಲ್ಲ ರೋಗಗಳ ಮೂಲ, ಯೋಗ ಅದಕ್ಕೆ ಮದ್ದು ಎಂದು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಅವರು ಮಾತನಾಡಿ, ಇತ್ತೀಚಿನ ಹೊಸ ರೋಗಗಳಿಗೆ ಯೋಗ ಮದ್ದು, ಬದುಕಿನ ಶೈಲಿ, ಆಹಾರ ಬದಲಾಗಿದೆ, ಮಾಲಿನ್ಯ ಹೆಚ್ಚಾಗಿದೆ. ಯೋಗ ಅಭ್ಯಾಸ ಮಾಡಿದವರಿಗೆ ಮನಸ್ಸು ಮತ್ತು ದೇಹ ಹತೋಟಿಯಲ್ಲಿರುತ್ತದೆ. ಯೋಗವನ್ನು ಸರ್ಕಾರದಿಂದ ಪ್ರೋತ್ಸಾಹಿಸಲಾಗುತ್ತದೆ, ಜನರು ನಿತ್ಯ ಜೀವನದಲ್ಲಿ ಯೋಗವನ್ನು ಅಭ್ಯಾಸವಾಗಿ ಮಾಡಿಕೊಳ್ಳಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ರಿಜ್ವಾನ್ ಅರ್ಷದ್ ಅವರು ಈ ದಿನ ಮೊದಲ ಬಾರಿ ಯೋಗ ಮಾಡಿದ್ದೇನೆ, ಇಂದು ಯೋಗ ಮಾಡಿದ ನಂತರ ನನಗೆ ಅರಿವಾಗಿದೆ ಇದನ್ನು ಮುಂದುವರೆಸಬೇಕೆಂದು, ಯೋಗ ಸಾವಿರಾರು ವರ್ಷಗಳಿಂದ ನಮ್ಮ ಸಂಸ್ಕೃತಿಯ ಭಾಗವಾಗಿದೆ, ಯೋಗ ವಿಶ್ವಕ್ಕೆ ಭಾರತದ ಕೊಡುಗೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶರವಣ, ಕ್ರೀಡಾಪಟುಗಳಾದ ವೆಂಕಟೇಶ್ ಪ್ರಸಾದ್, ಅಂಜು ಬಿ ಜಾರ್ಜ್, ಚಲನಚಿತ್ರ ನಟಿ ಭಾವನ, ಆಯುಷ್ ಇಲಾಖೆಯ ಕಾರ್ಯದರ್ಶಿ ಟಿ ಅನಿಲ್ ಕುಮಾರ್, ಆಯುಕ್ತರಾದ ಜೆ ಮಂಜುನಾಥ್, ಶ್ವಾಸಗುರು ಖ್ಯಾತಿಯ ಶ್ರೀ ವಚನಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ