Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರ ಬುನಾದಿ ಹಾಕಿದ ಮಹನೀಯರು

ತುಮಕೂರು, ಜೂ 27 : ನಾಡಪ್ರಭು ಕೆಂಪೇಗೌಡರ ಆದರ್ಶ, ಜನಪರ ಆಡಳಿತ ಹಾಗೂ ನಗರ ನಿರ್ಮಾಣದಲ್ಲಿದ್ದ ದೂರದೃಷ್ಟಿ ಅಂಶಗಳನ್ನು ಇಂದಿನ ಯುವ ಪೀಳಿಗೆ ಅರಿಯಬೇಕಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅಭಿಪ್ರಾಯ ಪಟ್ಟರು.



ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಬಳಿಕ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ 23 ಪೇಟೆಗಳನ್ನು ನಿರ್ಮಿಸಿ ಅಲ್ಲಿ ಜನರು ವ್ಯಾಪಾರ ವಹಿವಾಟನ್ನು ಮಾಡಲು ಅನುಕೂಲ ಕಲ್ಪಿಸಿಕೊಡುವ ಮೂಲಕ ಬೆಂಗಳೂರಿನ ಆರ್ಥಿಕ ವ್ಯವಸ್ಥೆಗೆ ಬುನಾದಿ ಹಾಕಿಕೊಟ್ಟರು ಎಂದು ಹೇಳಿದರು.

ಕೆಂಪೇಗೌಡರು ಬೆಂಗಳೂರಿನಲ್ಲಿ ಒಟ್ಟು 2300 ಕೆರೆಗಳನ್ನು ನಿರ್ಮಿಸಿದ್ದರು. ಈ ಕೆರೆಗಳ ವೈಶಿಷ್ಟ್ಯವೆಂದರೆ ಒಂದು ಕೆರೆ ತುಂಬಿದರೆ ಆ ಕೆರೆಯ ನೀರು ಮತ್ತೊಂದು ಕೆರೆಗೆ ಹೋಗುವ ರೀತಿಯಲ್ಲಿ ಅಂದಿನ ಕಾಲದಲ್ಲಿಯೇ ನಿರ್ಮಿಸಿದ್ದರು. ನಗರೀಕರಣದಿಂದ ಕೆರೆಗಳು ನಶಿಸಿ ಹೋಗಿ ಅಲ್ಲಿ ಕಾಂಕ್ರಿಟ್ ರಸ್ತೆಗಳು, ಬಸ್ ನಿಲ್ದಾಣಗಳು ನಿರ್ಮಾಣವಾಗಿವೆ ಎಂದು ಹೇಳಿದರು.

ಆಡಳಿತ ಅನುಕೂಲಕ್ಕಾಗಿ ನಾಲ್ಕು ದ್ವಾರಗಳನ್ನು ನಿರ್ಮಿಸಿದ್ದರು. ಇಂದು ಬೆಂಗಳೂರು ನಾಲ್ಕು ದ್ವಾರಗಳನ್ನು ಮೀರಿ ಬೆಳೆದು ನಿಂತಿದೆ. ಮಹಾನಗರದಲ್ಲಿ1ಕೋಟಿ 40 ಲಕ್ಷ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದಾರೆ. ಪ್ರತಿದಿನ ಸಾವಿರಾರು ಜನರು ಜೀವನ ನಡೆಸುವ ಸಲುವಾಗಿ ಉದ್ಯೋಗ ಹರಸಿ ನಗರಕ್ಕೆ ಆಗಮಿಸುತ್ತಿದ್ದಾರೆ ಎಂದು ಹೇಳಿದರು.

ಶಾಸಕ ಜ್ಯೋ ತಿಗಣೇಶ್, ಕೆಂಪೇಗೌಡರು ನಗರ ನಿರ್ಮಾಣದ ಪರಿಕಲ್ಪನೆಯನ್ನು 500 ವರ್ಷಗಳ ಹಿಂದೆಯೇ ತೋರಿಸಿ ಕೊಟ್ಟಿದ್ದು, ಬೆಂಗಳೂರು ನಗರ ನಿರ್ಮಾಣಕ್ಕೆ ಈ ನಿಟ್ಟಿನಲ್ಲಿ ಅಡಿಪಾಯ ಹಾಕಿದ್ದರು ಎಂದು ಅವರ ಆಡಳಿತವನ್ನು ಸ್ಮರಿಸಿದರು. ಒಂದು ಊರಿಗೆ ಎಷ್ಟು ಕೆರೆಗಳು ಹಾಗೂ ಉದ್ಯಾನವನಗಳು ಅವಶ್ಯಕತೆವಿದೆಯೋ ಅದಕ್ಕೆ ಅನುಗುಣವಾಗಿ ಬೆಂಗಳೂರು ನಗರವನ್ನು ಸಮತೋಲನವಾಗಿ ನಿರ್ಮಿಸಿದ್ದರು. ಅವರ ಹಾದಿಯಲ್ಲಿಯೇ ನಾವು ನಗರ ನಿರ್ಮಾಣವನ್ನು ಮಾಡಬೇಕು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಲಿಂಗಯ್ಯ ಮಾತನಾಡಿ, ಕೆಂಪೇಗೌಡರ ಆಡಳಿತಕ್ಕೆ

ತುಮಕೂರು ಜಿಲ್ಲೆಯ ಕುಣಿಗಲ್ ಹಾಗೂ ಹುಲಿಯೂರುದುರ್ಗದ ಭಾಗಗಳು ಒಳಪಟ್ಟಿದ್ದವು. ಸಮುದ್ರ ಮಟ್ಟದಿಂದ 900 ಅಡಿಗಳ ಎತ್ತರದಲ್ಲಿ ಬೆಂಗಳೂರನ್ನು ನಿರ್ಮಾಣ ಮಾಡಿ, ಯಾವುದೇ ಹವಾಮಾನ ವೈಪರಿತ್ಯಗಳಿಗೆ ಜಗ್ಗದಂತೆ ನಗರವನ್ನು ನಿರ್ಮಾಣ ಮಾಡಿದ್ದರು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಒಕ್ಕಲಿಗ ಸಮುದಾಯದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ