Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವನೊಬ್ಬ ನಾಮ ಹಲವು:ಡಿ.ಕೆ ಶಿವಕುಮಾರ್

ಸುದ್ದಿಮೂಲ ವಾರ್ತೆ

ಉಜಿರೆ,ಏ.22: ಇಂದು ಪವಿತ್ರ ರಂಜಾನ್ ಹಬ್ಬ. ಧರ್ಮ ಯಾವುದಾದರೂ ತತ್ವವೊಂದೋ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ಇದರಲ್ಲಿ ನಂಬಿಕೆ ಇಟ್ಟುಕೊಂಡು ನಾವು ಬದುಕುತ್ತಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಅವರು ಇಂದು ಉಜಿರೆ ಸಾರ್ವಜನಿಕರ ಸಭೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾವು ಹುಟ್ಟುವಾಗ ಇಂತಹುದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಹುಟ್ಟಿಲ್ಲ. ನಮ್ಮ ತಂದೆ ತಾಯಂದಿರ ಕೃಪೆ, ಆಶೀರ್ವಾದದಿಂದ ನಾವು ಬೇಳೆದಿದ್ದೇವೆ. ಆಮೂಲಕ ಜಾತಿ ಹಾಗೂ ಧರ್ಮದ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಏನೇ ಆದರೂ ನಾವು ಮನುಷ್ಯರು. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದ ವಿಶ್ವಕ್ಕೆ ಶಆಂತಿ ಸಿಗಲಿ ಎಂದು ಎಲ್ಲರಿಗೂ ತಮ್ಮ ಧರ್ಮ ಆಚರಿಸಲು ಅವಕಾಶ ನೀಡಲಾಗಿದೆ. ಎಲ್ಲಾ ಧರ್ಮಪೀಠಗಳು ಮಾನವೀಯತೆ ಮೆರೆದಿವೆ. ನನಗೆ ಮಂಜುನಾಥನ ಬಗ್ಗೆ ವಿಶೇಷ ಆಸಕ್ತಿ ಹಾಗೂ ಭಕ್ತಿ.

ನನ್ನ ಯುವ ಮಿತ್ರ ರಕ್ಷಿತ್ ಗೆ ಯಶಸ್ಸು ಸಿಗಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸಿಕೊಂಡು ಬಂದಿದ್ದೇನೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗಗಳು ಅಧಿಕಾರಕ್ಕೆ ಬಂದಂತೆ. ಈ ಕ್ಷೇತ್ರವನ್ನು ಮಾಜಿ ಶಾಸಕ ಬಂಗೇರಾ ಅವರು ಹಲವು ಬಾರಿ ಸ್ಪರ್ಧಿಸಿ ಸೋತು, ಗೆದ್ದು, ನನ್ನೊಂದಿಗೆ ಶಾಸಕರಾಗಿ ಕೆಲಸ ಮಾಡಿದ್ದಾರೆ. ಇಂದು ಪಕ್ಷ ಇಷ್ಟು ಗಟ್ಟಿಯಾಗಿ ನಿಲ್ಲಲು ಅವರು ಹೊಸಬರಿಗೆ ಅವಕಾಶ ನೀಡಲು ದಾರಿ ಮಾಡಿಕೊಟ್ಟಿದ್ದಾರೆ.



ಈ ಜಿಲ್ಲೆಯಲ್ಲಿ ಮೂರೂವರೆ ಲಕ್ಷ ಒಕ್ಕಲಿಗ ಸಮುದಾಯದವರಿದ್ದಾರೆ. ಅವರಿಗೂ ನ್ಯಾಯ ನೀಡಬೇಕು ಎಂದು ಭಾವಿಸಿದ್ದೆವು. ಆದರೆ ಯುವಕರಿಗೆ ಅವಕಾಶ ನೀಡಲು ಜಿಲ್ಲೆಯಲ್ಲಿ ನಾಲ್ಕು ಜನ ಹೊಸಬರಿಗೆ ಅವಕಾಶ ನೀಡಲಾಗಿದೆ. ಈ ಜಿಲ್ಲೆಯ ಎಲ್ಲಕಡೆ ಯುವಕರು ಸ್ಪರ್ಧಿಸುತ್ತಿದ್ದಾರೆ. ಪಕ್ಷ ತನ್ನದೇ ಆದ ಲೆಕ್ಕಾಚಾರ ಮಾಡಿ ಈ ತೀರ್ಮಾನ ಮಾಡಿದೆ.

ರಾಜ್ಯದಲ್ಲಿ ಮೇ 10ರಂದು ಕೇವಲ ಮತದಾನ ದಿನ ಮಾತ್ರವಲ್ಲ, ನಿಮ್ಮ ಭವಿಷ್ಯ ನೀವೇ ಬರೆದುಕೊಳ್ಲುವ ದಿನ, ಭ್ರಷ್ಟಾಚಾರ ಬಡಿದೋಡಿಸುವ ದಿನ. ನಾನು ಇಲ್ಲಿಗೆ ಬರುವಾಗ ಒಬ್ಬ ಶ್ರೇಷ್ಠ ಹಿರಿಯರು ಅವರ ಹೆಸರು ಹೇಳುವುದಿಲ್ಲ, ಅವರು ಈ ಜಿಲ್ಲೆಯಲ್ಲಿ ಅನೇಕ ಮಂಡಳಿಗಳಿದ್ದವು. ಅನೇಕರು ಈ ಮಂಡಳಿಗೆ ಅನುದಾನ ತಂದಿರುವುದಾಗಿ ಬೋರ್ಡ್ ಹಾಕಿಕೊಳ್ಳುತ್ತಿದ್ದರು. ಆದರೆ ಇತ್ತೀಚೆಗೆ 40% ಕಮಿಷನ್ ನಿಂದ ಆ ಬೋರ್ಡ್ ನೋಡಿದವರೆಲ್ಲಾ 40% ಕಮಿಷನ್ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಪೀಠದ ಮುಖ್ಯಸ್ಥರು ಹೇಳಿದ್ದಾರೆ.



ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎಂಬ ಉದ್ದೇಶಧಿಂದ ನಾವು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ ಜೆಡಿಎಸ್ ಜತೆ ಸರ್ಕಾರ ಮಾಡಿದೆವು. ಆದರೆ ಅವರು ಅದನ್ನು ಉಲಿಸಿಕೊಳ್ಳಲಿಲ್ಲ. ನಂತರ ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಬಂದಿತು. ಈ ಸರ್ಕಾರ ಯುವಕರು, ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಯಾವುದಾದರೂ ಒಂದು ವರ್ಗದ ಜನರ ಬದುಕಿನಲ್ಲಿ ಬದಲಾವಣೆ ತಂದಿದ್ದಾರಾ? ಇವರಿಂದ ಸಮಾಧಾನಕರ ಆಡಳಿತ ಬಂದಿದೆ ಎಂದು ಬಿಜೆಪಿ ಕಾರ್ಯಕರ್ತರು ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಇಲ್ಲಿ ಬಿಜೆಪಿಯ ಮೂವರು ನಾಯಕರು ತಮ್ಮ ವಿರುದ್ಧ ಯಾವುದೇ ಸಿಡಿ ಬರಬಾರದು ಎಂದು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ ಎಂಬ ವಿಚಾರ ನಮ್ಮ ಜಿಲ್ಲಾಧ್ಯಕ್ಷರು ತಿಳಿಸಿದರು. ಇಂತಹ ಪರಿಸ್ಥಿತಿ ಬಂದಿರುವುದೇಕೆ? ಬಿಜೆಪಿ ಇತಿಹಾಸ ಚರಿತ್ರೆ ದೊಡ್ಡದಿದೆ. ಇಂತಹ ಪರಿಸ್ಥಿತಿಯಲ್ಲಿ ಜಿಲ್ಲೆಯ ಮೂವರು ತಡೆಯಾಜ್ಞೆ ತಂದಿದ್ದಾರೆ. ಹಿಂದೆ ಬಾಂಬೆ ಬಾಯ್ಸ್ 6-7 ಮಂದಿ ತಡೆಯಾಜ್ಞೆ ತಂದಿದ್ದು ಕೇಳಿದ್ದೆ. ದಕ್ಷಿಣ ಕನ್ನಡ ಜಿಲ್ಲೆಯ ನಾಯಕರು ಇಂದು ಕೋರ್ಟ್ ಮೊರೆ ಹೋಗಿದ್ದರೆ, ಬಿಜೆಪಿಯಲ್ಲಿ ಎಂತಹ ಹುಳುಕಿದೆ ಎಂದು ನೀವೆಲ್ಲರೂ ಆಲೋಚಿಸಬೇಕು.

ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವ್ಯತ್ಯಾಸ ಎಂದರೆ, ಅವರು ಭಾವನೆ ಬಗ್ಗೆ ಆಲೋಚಿಸಿದರೆ, ನಾವು ಬದುಕಿನ ಬಗ್ಗೆ ಆಲೋಚಿಸುತ್ತೇವೆ. ಇಂದು ಮಧ್ಯಮ ಸಂದರ್ಶನದ ವೇಳೆ ಈ ಭಾಗದ ಬಿಜೆಪಿ ರಾಜ್ಯಾಧ್ಯಕ್ಷರ ವಿಚಾರವಾಗಿ ಕೆಲವು ಪ್ರಶ್ನೆ ಕೇಳಿದರು. ಬಿಜೆಪಿ ಸರ್ಕಾರ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯಕ್ಕೆ 10 ಲಕ್ಷ ಕೋಟಿ ಬಂಡವಾಳ ಬಂದಿದೆ ಎಂದು ಹೇಳಿದ್ದಾರೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ಎಷ್ಟು ಬಂಡವಾಳ ಹೂಡಿಕೆಯಾಗಿದೆ? ಕೇವಲ 5 ಸಾವಿರ ಕೋಟಿ ಬಂಡವಾಳವನ್ನು ಈ ಭಾಗದಲ್ಲಿ ಹೂಡಿಕೆ ಮಾಡಲು ಯಾರೊಬ್ಬರೂ ಮುಂದೆ ಬಂದಿಲ್ಲ ಯಾಕೆ? ಎಂದು ಸವಾಲು ಹಾಕಿದ್ದೇನೆ.

ಮೋದಿ ಅವರು ಕಳೆದ ಚುನಾವಣೆಯಲ್ಲಿ ನೀವು ಮತಹಾಕುವಾಗ ನಿಮ್ಮ ಮನೆ ಅಡುಗೆ ಅನಿಲ ಸಿಲಿಂಡರ್ ಗೆ ನಮಿಸಿ ಮತ ಹಾಕಿ ಎಂದು ಹೇಳಿದ್ದರು. ಈಗ ನಾವು ಏನು ಹೇಳಬೇಕು? ನಾನು ನಮ್ಮ ನಾಯಕರುಗಳಿಗೆ ಒಂದು ಸಲಹೆ ನೀಡುತ್ತೇನೆ. ನೀವು ಪ್ರತಿ ಬೂತ್ ಮುಂದೆ ಸಿಲಿಂಡರ್ ಇಟ್ಟು ಅದಕ್ಕೆ ಒಂದು ಹೂವಿನ ಹಾರ ಹಾಕಬೇಕು. ಜನರ ಆದಾಯ ಪಾತಾಳಕ್ಕೆ ಕುಸಿದಿದ್ದು, ಬೆಲೆಗಳು ಗಗನಕ್ಕೇರಿವೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ ಸಹಾಯ ಮಾಡಲು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿವೆ.

ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುವುದು. ಆಮೂಲಕ ಪ್ರತಿ ಮನೆಗೆ ಸುಮಾರು 1500 ರೂ. ಉಳಿತಾಯವಾಗಲಿದೆ. ನಾನು ಇಂಧನ ಸಚಿವನಾಗಿದ್ದೆ. ಈ ಭಾಗದಲ್ಲಿ 200 ಕುಟುಂಬ ಹೊರತಾಗಿ ಉಳಿದವರು ಯಾರೂ ಕರೆಂಟ್ ಬಿಲ್ ಕಟ್ಟುವಂತಿಲ್ಲ. ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ. ಇನ್ನು ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬಗಳ ಪ್ರತಿ ಸದಸ್ಯನಿಗೆ ತಿಂಗಳಿಗೆ ತಲಾ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಇನ್ನು ನಿರುದ್ಯೋಗ ಯುವಕರಿಗಾಗಿ ಪದವೀಧರರಿಗೆ ಪ್ರತಿ ತಿಂಗಳು 3000 ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. ಈ ಎಲ್ಲಾ ಘೋಷಣೆಗಳ ಗ್ಯಾರಂಟಿ ಕಾರ್ಡ್ ಗಳನ್ನು ನೀವು ಪ್ರತಿ ಮನೆ ಮನೆಗೆ ತಲುಪಿಸಿ. ಮೇ 13ರಂದು ಫಲಿತಾಂಶ ಬಂದ ಮೇಲೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗಳನ್ನು ಜಾರಿ ಮಾಡಲಾಗುವುದು.

ಖಾಸಗಿಯವರು ಉದ್ಯೋಗಸ್ಥರನ್ನು ತೆಗೆದುಕೊಳ್ಳುವಾಗ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು. ಖಾಸಗಿಯಲ್ಲಿ ಉದ್ಯೋಗ ವಿನಿಮಯ ವ್ಯವಸ್ಥೆ ಬರಬೇಕು ಎಂಬ ಸಲಹೆಯನ್ನು ಯುವಕನೊಬ್ಬ ನೀಡಿದ್ದು, ಈ ಕುರಿತ ಭರವಸೆಯನ್ನು ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ತಿಳಿಸಲಿದೆ. ಯುವಕರ ಬಗ್ಗೆ ಚಿಂತನೆ, ಹಸಿವು ಮುಕ್ತ ಕರ್ನಾಟಕ ನಿರ್ಮಾಣ, ರೈತರ ವಿಚಾರವಾಗಿ ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ.

ಈ ಭಾಗದಲ್ಲಿ ಅರಣ್ಯ ಭೂಮಿ ಒತ್ತುವರಿ ವಿಚಾರದಲ್ಲಿ ಸಮಸ್ಯೆ ಎದುರಾಗಿದೆ. ಕಾಂಗ್ರೆಸ್ ಸರ್ಕಾರ ಈ ಹಿಂದೆ ಅರಣ್ಯ ಭೂಮಿ ಹಾಗೂ ವಾಣಿಜ್ಯ ಭೂಮಿಯನ್ನು ಒಥ್ತುವರಿ ಮಾಡಿಕೊಂಡಿದ್ದರೆ, ಅವರಿಗೆ ತೊಂದರೆ ಆಗಬಾರದು ಎಂದು ಸಕ್ರಮ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. 2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಈ ಬಗ್ಗೆ ಕಾನೂನು ಮಾಡಿ ಈ ಭಾಗದ ಜನರ ಸಮಸ್ಯೆಗೆ ಪರಿಹಾರ ನೀಡಲಾಗುವುದು. ಈ ದೇಶದಲ್ಲಿ ಉಳುವವನಿಗೆ ಭೂಮಿ, ಬಡವರಿಗೆ ನಿವೇಶನ ನೀಡಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಭಾಗದ ನಿಮ್ಮ ಜಮೀನನ್ನು ಸಕ್ರಮ ಮಾಡುತ್ತೇವೆ.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿವೆ. ಈ ಸರ್ಕಾರದ ಭ್ರಷ್ಟಾಚಾರಕ್ಕೆ ಅನೇಕರು ಆತ್ಮಹತ್ಯೆ ಮಾಡಿಕೊಂಡರು. ಬಿಜೆಪಿ ನಾಯಕರೇ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಕೆಲವರು ಲಂಚಕ್ಕೆ ಅಧಿಕಾರ ಕಳೆದುಕೊಂಡರೆ, ಮತ್ತೆ ಕೆಲವರು ಮಂಚಕ್ಕೆ ರಾಜೀನಾಮೆ ಕೊಟ್ಟರು. ಶಿವಮೊಗ್ಗದಲ್ಲಿ ದ್ವೇಷ ರಾಜಕೀಯವನ್ನು ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ಅವರೇ ಟೀಕಿಸಿದ್ದರು.

ಇನ್ನು ಬಿಜೆಪಿಯವರು ರಾಜ್ಯದ ನಂದಿನಿ ಹಾಲನ್ನು ಬಿಟ್ಟು ಗುಜರಾತಿನ ಹಾಲು ಖರೀದಿ ಮಾಡಿ ಎಂದು ಹೇಳುತ್ತಿದ್ದಾರೆ. ನಮ್ಮ ರೈತರು ಸರಿಯಾದ ಬೆಲೆ ಸಿಗದೇ ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಂದಿನಿ ಮೇಲೆ ಅಮೂಲ್ ಹೇರಿಕೆ ಮಾಡಲಾಗುತ್ತಿದೆ. ನಮ್ಮ ಹಾಲು ಉತ್ಪಾದಕರನ್ನು ಬೊಮ್ಮಾಯಿ ಅವರಿಂದ ಕಾಪಾಡಲು ಸಾಧ್ಯವಾಗಲಿಲ್ಲ. ಕೋವಿಡ್ ಸಮಯದಲ್ಲಿ ಭ್ರಷ್ಟಾಚಾರ ತಾಂಡವವಾಡಿತ್ತು. ಆಕ್ಸಿಜನ್ ಇಲ್ಲದೆ ಅನೇಕರು ಸತ್ತರು. ಸತ್ತವರಿಗೆ ಸರ್ಕಾರ ಪರಿಹಾರ ನೀಡಲಿಲ್ಲ. ನಷ್ಟ ಅನಭವಿಸಿದ ವ್ಯಾಪಾರಸ್ಥರಿಗೆ ತೆರಿಗೆ ವಿನಾಯ್ತಿ ನೀಡಲಿಲ್ಲ. ಜನರಿಗೆ ಸಹಾಯ ಮಾಡದ ಸರ್ಕಾರ ಯಾಕೆ ಬೇಕು?

ಬೆಂಗಳೂರಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ಮುಂದಾದಾಗ ಮೂರು ಪಟ್ಟು ಟಿಕೆಟ್ ದರ ನಿಗದಿ ಮಾಡಿ ಅವರನ್ನು ಸುಲಿಗೆ ಮಾಡಿದರು. ಆ ಪರಿಸ್ಥಿತಿಯಲ್ಲಿ ಅವರ ಪರವಾಗಿ ನಾನು ನಮ್ಮ ಪಕ್ಷ ಹಣ ನೀಡಲು ಮುಂದಾದಾಗ ಸರ್ಕಾರ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿತು. ನನ್ನ ಈ ತೀರ್ಮಾನ ನೋಡಿ ರಾಷ್ಟ್ರ ಮಟ್ಟದಲ್ಲಿ ಈ ತೀರ್ಮಾನ ಮಾಡಬೇಕಾಯಿತು.

ಈ ಎಲ್ಲಾ ಅನಾಚಾರಗಳಿಂದ ಬಿಜೆಪಿಯ ಆಣೆಕಟ್ಟು ಒಡೆದುಹೋಗಿವೆ. 30 ವರ್ಷಗಳ ಕಾಲ ಬಿಜೆಪಿಯಲ್ಲಿ ಶಾಸಕರಾಗಿ, ಮುಖ್ಯಮಂತ್ರಿಗಳಾಗಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಲಕ್ಷ್ಮಣ ಸವದಿ ಉಪಮುಖ್ಯಮಂತ್ರಿಗಳಾಗಿದ್ದರು, ಪರಿಷತ್ ಸದಸ್ಯರಾದ ಪುಟ್ಟಣ್ಣ 4 ವರ್ಷ ಅಧಿಕಾರ ಇದ್ದರೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಹಾಲಿ ಬಿಜೆಪಿಯ ಒಂದು ಡಜನ್ ಶಾಸಕರು ಕಾಂಗ್ರೆಸ್ ಸೇರಲು ಮುಂದಾಗಿದ್ದರು. ಆದರೆ ನಮ್ಮ ಪಕ್ಷದಲ್ಲಿ ಅವರಿಗೆ ಸ್ಥಾನಮಾನ ನೀಡುವ ಅವಕಾಶವಿಲ್ಲ ಎಂಬ ಕಾರಣಕ್ಕೆ ಕೆಲವರನ್ನು ಮಾತ್ರ ಕರೆದುಕೊಳ್ಳಲಾಗಿದೆ. ಅಂತಹ ನಾಯಕರುಗಳಿಗೆ ಬಿಜೆಪಿ ಬೇಡವಾಗಿದೆ.

ನೀವು ಇನ್ನು ಪ್ರತಿ ಬೂತ್ ಗಳಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಬೇಕು. ಕಾಂಗ್ರೆಸ್ ಮನೆ ಬಾಗಿಲು ನಿಮಗಾಗಿ ತೆರೆದಿದೆ. ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ 150ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ನೀವೆಲ್ಲರೂ ಈ ಜಿಲ್ಲೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ