Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಿ-ಅಧಿಕಾರಿಗಳಿಗೆ ಸಿಎಂ ಕಿವಿಮಾತು ರಾಜ್ಯ ಅಭಿವೃದ್ಧಿಿಯತ್ತ ನಡೆಸಲು ಅಧಿಕಾರಿಗಳ ಸಹಕಾರ ಅಗತ್ಯ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.01:
ಸರ್ಕಾರದ ಸೇವೆ, ಸೌಲಭ್ಯಗಳನ್ನು ವಿಳಂಬ ಮಾಡದೇ ರಾಜ್ಯದ ಜನತೆಗೆ ಪೂರೈಸುವ ಜೊತೆಗೆ, ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು.
ಅವರು ವಿಧಾನಸೌಧದಲ್ಲಿ ಗುರುವಾರ ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭಕೋರಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲಿಿಷ್ ಕ್ಯಾಾಲೆಂಡರ್‌ನಂತೆ ಇಂದು ಪ್ರಾಾರಂಭವಾಗುವ ಹೊಸ ವರ್ಷವನ್ನು ವಿಶ್ವದಾದ್ಯಂತ ಸಂಭ್ರಮಾಚರಣೆಯಿಂದ ಸ್ವಾಾಗತಿಸಲಾಗುತ್ತದೆ. 2026ರ ವರ್ಷ ರಾಜ್ಯಕ್ಕೆೆ ಸಮೃದ್ಧಿಿಯನ್ನು ತರಲಿ ಹಾಗೂ ರಾಜ್ಯ ಜನತೆ ಸುಖ ಸಮೃದ್ಧಿಿ ಶಾಂತಿಯಿರಲಿ, ಬಡವರ ಹಾಗೂ ರೈತರ ಮೊಗದಲ್ಲಿ ಸಂತೋಷ ಕಾಣಲೆಂದು ಮುಖ್ಯಮಂತ್ರಿಿಗಳು ಶುಭ ಹಾರೈಸಿದರು.
ಬೆಳೆಪರಿಹಾರದಿಂದ ರೈತರು ನೆಮ್ಮದಿ:
ಉತ್ತಮ ಮಳೆಬೆಳೆಯಿಂದ ಹೆಚ್ಚಿಿನ ಸಮಸ್ಯೆೆ ಪರಿಹಾರವಾಗುತ್ತದೆ. 2025 ರಲ್ಲಿ ಉತ್ತಮ ಮಳೆಯಾದ ಜೊತೆಗೆ ಬೆಳೆಹಾನಿಯೂ ಸಂಭವಿಸಿತು. 12 ಲಕ್ಷ ಹೆರ್ಕ್ಟೇ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿ, ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ. ಕೇಂದ್ರ ಸರ್ಕಾರ ಎನ್‌ಡಿಆರ್‌ಎ್ನಿಂದ ಹಾಗೂ ರಾಜ್ಯ ಸರ್ಕಾರ ಎನ್‌ಡಿಆರ್‌ಎ್ನಿಂದ ಪರಿಹಾರವನ್ನು ನೀಡುತ್ತದೆ.
ರೈತರಿಗೆ ಹೆಚ್ಚಿಿನ ಪರಿಹಾರಗಳನ್ನು ಒದಗಿಸುವ ಮೂಲಕ ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ರೈತರ ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ. 2025 ರಲ್ಲಿ ಖುಷ್ಕಿಿ, ನೀರಾವರಿ ಸೇರಿದಂತೆ ಬೆಳೆಗೆ ಪ್ರತಿ ಹೆಕ್ಟೇರ ಗೆ 8500 ರೂ ಪರಿಹಾರ ನೀಡಲಾಗಿದ್ದು, ರೈತರಿಗೆ ತುಸು ನೆಮ್ಮದಿ ಕಾಣುವಂತಾಗಿದೆ ಎಂದು ಸಿಎಂ ಹೇಳಿದರು.
ಸಮಸಮಾಜ ನಿರ್ಮಿಸುವುದು ಸರ್ಕಾರ ಗುರಿ
ವಿರೋಧ ಪಕ್ಷಗಳು ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾಾರೆ. ಪ್ರಜಾಪ್ರಭುತ್ವ ವ್ಯವಸ್ಥೆೆಯಲ್ಲಿ ಜನರ ಕಷ್ಟಸುಖಗಳಿಗೆ ಸ್ಪಂದಿಸಲು ಹೆಚ್ಚಿಿನ ಆದ್ಯತೆ ನೀಡಬೇಕಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ರಾಜಕೀಯ ಸ್ವಾಾತಂತ್ರ್ಯದಿಂದ ಲಾಭವಿಲ್ಲ. ಸಾಮಾಜಿಕ ಆರ್ಥಿಕ ಸ್ವಾಾತಂತ್ರ್ಯದಿಂದಲೇ ರಾಜಕೀಯ ಪ್ರಭುತ್ವಕ್ಕೆೆ ನಿಜ ಅರ್ಥ ದೊರೆಯುತ್ತದೆ ಎಂದು ಪ್ರತಿಪಾದಿಸಿದ್ದರು.
ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ, ಆಧಿಕಾರ ವಿಕೇಂದ್ರಿಿಕರಣಗಳನ್ನು ಸಾಧಿಸುವುದು ನಮ್ಮ ಹೊಣೆಗಾರಿಕೆ. ಸಮಸಮಾಜ ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ರಾಜ್ಯದ ಎಲ್ಲಾಾ ಜನತೆಗೆ ನ್ಯಾಾಯ ಒದಗಿಸುವುದು ಅವಶ್ಯ. ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಬೇಕು. ವಿಳಂಬ ನೀತಿ ಅನುಸರಿಸುವುದೂ ಒಂದು ರೀತಿಯ ಅಪರಾಧವೇ ಎಂದರು.
ಪೊಲೀಸ್ ಇಲಾಖೆಗೆ ಅಭಿನಂದನೆ:

ಹೊಸ ವರ್ಷ ಜನರ ಕೆಲಸ ನಿರ್ವಹಿಸಲು ಹೊಸ ಉತ್ಸಾಾಹದಿಂದ ಶ್ರಮಿಸಬೇಕು. ಅಧಿಕಾರಿಗಳು 30-40 ವರ್ಷಗಳು ಅಧಿಕಾರದಲ್ಲಿದ್ದರೆ, ನಾವು ಅಧಿಕಾರದಲ್ಲಿ ಐದು ವರ್ಷಗಳು ಇರುತ್ತೇವೆ. ರಾಜ್ಯದ ಜನರು ನಿನ್ನೆೆ ಮತ್ತು ಇಂದು ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಾಗತಿಸಿದ್ದಾರೆ. ನೂತನ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಅತ್ಯಂತ ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಂಭ್ರಮಾಚರಣೆ ನಡೆದಿದೆ.ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಾಗಿ ನಿರ್ವಹಿಸಿರುವ ಇಲಾಖೆಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಸಮಾಜದ ವಂಚಿತರಿಗೆ ನ್ಯಾಾಯ ಒದಗಿಸಿ :
ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದರು. ಸಾಮಾಜಿಕ ನ್ಯಾಾಯದಿಂದ ವಂಚಿತರಾದವರಿಗೆ ನ್ಯಾಾಯ ಒದಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.
ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್, ಗೌರವ್ ಗುಪ್ತಾಾ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಸಲೀಂ ಸೇರಿ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ