Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಣ್ಯ ಇಲಾಖೆಯ ಕಾರ್ಯಕ್ಕೆ ರಾಜ್ಯಪಾಲರ ಮೆಚ್ಚುಗೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.1: ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು ಅರಣ್ಯ ಇಲಾಖೆ ಮಾಡುತ್ತಿರುವ ಕಾರ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜಭವನದಲ್ಲಿಂದು ಅರಣ್ಯ ಇಲಾಖೆ 69ನೇ ವನ್ಯಜೀವಿ ಸಪ್ತಾಹದ ಬಗ್ಗೆ ಜನ ಜಾಗೃತಿ ಮೂಡಿಸಲು ಆಯೋಜಿಸಿದ್ದ ವಿಂಟೇಜ್ ವಾಹನ ಯಾನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಹಸಿರು ನಿಶಾನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾವು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಸಂಗ್ರಾಹಾಲಯದಲ್ಲಿ ಹಳೆಯ ವಾಹನಗಳನ್ನು ನೋಡಿದ್ದೆ. ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ವನ್ಯಜೀವಿ ಸಂರಕ್ಷಣೆಯ ಅರಿವು ಮೂಡಿಸಲು ಹಳೆಯ ವಾಹನ ಯಾನ ಆಯೋಜಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಪ್ರಕೃತಿ ಪರಿಸರ ಉಳಿಸುವ ಅಗತ್ಯವನ್ನು ರಾಜ್ಯಪಾಲರು ಪ್ರತಿಪಾದಿಸಿದರು.

ಅರಣ್ಯ, ವನ್ಯಜೀವಿ ಸಂರಕ್ಷಣೆಗೆ ರಾಜ್ಯ ಮಾದರಿ

ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ರಾಜ್ಯ ಮಾದರಿಯಾಗಿದೆ. ಅತಿ ಹೆಚ್ಚು ಅರಣ್ಯ ಪ್ರದೇಶ ಹೆಚ್ಚಿರುವ ಪ್ರದೇಶಕ್ಕಿಂತ ಅಧಿಕ ಸಂಖ್ಯೆಯ ಅಂದರೆ 6395 ಆನೆಗಳು ರಾಜ್ಯದಲ್ಲಿದ್ದು, ದೇಶದಲ್ಲೇ ನಾವು ಗಜ ಗಣತಿಯಲ್ಲಿ ಮೊದಲಿಗರಾಗಿದ್ದೇವೆ ಎಂದರು.

ಅದೇ ರೀತಿ ಹುಲಿ ಗಣತಿಯಲ್ಲೂ ರಾಜ್ಯ ನಂ.2 ಸ್ಥಾನ ಪಡೆದಿದೆ. ಇಲಾಖೆಯ ಹಸಿರು ಹೊದಿಕೆ ವ್ಯಾಪ್ತಿಯನ್ನು ಹೆಚ್ಚಿಸಲು ಮತ್ತು ನಗರ ಪ್ರದೇಶಗಳಲ್ಲಿ ಕೂಡ ಜನರು ನೆಮ್ಮದಿಯಿಂದ ಉಸಿರಾಡಲು ಸಾಮಾಜಿಕ ಅರಣ್ಯ ಪ್ರದೇಶ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಕಳೆದ ಜುಲೈ 1ರಿಂದ ಇಲ್ಲಿಯವರೆಗೆ 4 ಕೋಟಿ 75 ಲಕ್ಷ ಸಸಿಗಳನ್ನು ನೆಡಲಾಗಿದೆ. ಮುಂದಿನ ಒಂದು ವಾರದಲ್ಲಿ ಉಳಿದ 25 ಲಕ್ಷ ಸಸಿ ನೆಟ್ಟು ಈ ವರ್ಷ 5 ಕೋಟಿ ಗಿಡ ನೆಡಬೇಕು ಎಂಬ ಗುರಿಯನ್ನು ಪೂರೈಸಲಾಗುವುದು ಎಂದರು.

ಹಳೆಯ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟು, ಅವುಗಳನ್ನು ಸಂಚಾರಯೋಗ್ಯವಾಗಿರುವಂತೆ ನಿರ್ವಹಣೆ ಮಾಡುತ್ತಿರುವ ಹಳೆಯ ವಾಹನಗಳ ಮಾಲೀಕರಿಗೆ ಅವರು ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ