Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷತ್ತಿನ ನಾಮನಿರ್ದೇಶನಕ್ಕೆ ರಾಜ್ಯಪಾಲರ ಅನುಮೋದನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.19: ವಿಧಾನ ಪರಿಷತ್ತಿಗೆ ಮೂರು ಸ್ಥಾನಗಳಿಗೆ ನಾಮ ನಿರ್ದೇಶನ ಮಾಡುವ ಸಂಬಂಧ ಸರ್ಕಾರ ಕಳುಹಿಸಿದ ಎಂ.ಆರ್. ಸೀತಾರಾಂ, ಉಮಾಶ್ರೀ ಮತ್ತು ಸುಧಾಮ್ ದಾಸ್ ಅವರ ಹೆಸರುಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.15ರಂದು ಕಳುಹಿಸಿದ ಶಿಫಾರಸು ಪಟ್ಟಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಂಗೀಕಾರ ನೀಡಿದ್ದಾರೆ.

ಶಿಕ್ಷಣ ಕ್ಷೇತ್ರದಡಿ ಎಂ.ಆರ್. ಸೀತಾರಾಂ, ಕಲಾವಿದರ ಕೋಟಾದಡಿ ಉಮಾಶ್ರೀ ಮತ್ತು ಸಮಾಜ ಸೇವೆ ಕ್ಷೇತ್ರದಡಿ ಸುಧಾಮ್ ದಾಸ್ ಅವರ ಹೆಸರುಗಳನ್ನು ನಾಮ ನಿರ್ದೇಶಕ ಕೋರಿ ಶಿಫಾರಸು ಮಾಡಲಾಗಿತ್ತು.

ವಿರೋಧಿಸದರೂ ಫಲವಿಲ್ಲ:

ಸುಧಾಮ್ ದಾಸ್ ಅವರ ನೇಮಕಕ್ಕೆ ವಿರೋಧ ವ್ಯಕ್ತಪಡಿಸಿ ನಾಲ್ವರು ಪರಿಶಿಷ್ಟ ಪಂಗಡದ ಸಚಿವರು ಪತ್ರ ಬರೆದಿದ್ದರೂ ಸಹ ಅದು ಫಲ ನೀಡಿಲ್ಲ. ವಿಧಾನ ಪರಿಷತ್ ಸದಸ್ಯರಾಗಿ ಸುಧಾಮ್ ದಾಸ್ ಆಯ್ಕೆ ಅಂತಿಮಗೊಂಡಿದೆ.

ಸಚಿವರಾದ ಕೆ.ಎಚ್. ಮುನಿಯಪ್ಪ, ಡಾ.ಜಿ. ಪರಮೇಶ್ವರ್, ಡಾ. ಎಚ್.ಸಿ. ಮಹದೇವಪ್ಪ ಮತ್ತು ಆರ್.ಬಿ. ತಿಮ್ಮಾಪುರೆ ಅವರು ಸುಧಾಮ್ ದಾಸ್ ಆಯ್ಕೆ ವಿರೋಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದರು.

'ಸುಧಾಮ್ ದಾಸ್ ಅವರು ಕೇಂದ್ರ ಸರ್ಕಾರಿ ನೌಕರರಾಗಿದ್ದರು. ಮೂರ್ನಾಲ್ಕು ತಿಂಗಳ ಹಿಂದಷ್ಟೇ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕಾಗಿ ಮೂವತ್ತು ವರ್ಷಗಳ ಕಾಲ ದುಡಿದವರಿಗೆ ಈಗ ಆದ್ಯತೆ ನೀಡಲಿ. ಮುಂದಿನ ದಿನಗಳಲ್ಲಿ ಸುಧಾಮ್ ದಾಸ್ ಅವರಿಗೂ ಅವರಿಗೆ ಅವಕಾಶ ನೀಡುವುದಕ್ಕೆ ವಿರೋಧವಿಲ್ಲ,' ಎಂದು ಕೆ.ಎಚ್. ಮುನಿಯಪ್ಪ ಹಳಿಕೆ ನೀಡಿದ್ದರು.

ಹಿರಿಯ ನಾಯಕರ ವಿರೋಧದ ಮಧ್ಯೆಯೂ ಸಹ ಸುಧಾಮ್ ದಾಸ್ ಆಯ್ಕೆ ಅಂತಿಮಗೊಂಡಿದೆ. ಇದು ಮುಂದಿನ ದಿನಗಳಲ್ಲಿ ಯಾವ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ