Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿ ಯೋಜನೆಗಳನ್ನು ಶರ್ತಗಳಿಲ್ಲದೆ ಜಾರಿ ಮಾಡಲು ಗೋವಿಂದ ಕಾರಜೋಳ ಆಗ್ರಹ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ31: ರಾಜ್ಯದ ಕಾಂಗ್ರೆಸ್ ಪಕ್ಷವು ನೀಡಿದ ವಿವಿಧ ಗ್ಯಾರಂಟಿ ಯೋಜನೆಗಳನ್ನು ಶರ್ತಗಳಿಲ್ಲದೆ ಅನುಷ್ಠಾನಕ್ಕೆ ತರಬೇಕು ಎಂದು ರಾಜ್ಯದ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಆಗ್ರಹಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂದು ಕಾಂಗ್ರೆಸ್‍ನವರು, ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷ ಹಾಗೂ ಈಗಿನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ನಾಡಿನ ಜನತೆಗೆ 5 ಗ್ಯಾರಂಟಿಗಳನ್ನು ಕೊಟ್ಟಿದ್ದರು. ಅಲ್ಲದೆ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಟೀಕಿಸಿದರು.

ಗ್ಯಾರಂಟಿ ಕಾರ್ಡ್ ಜೋಪಾನವಾಗಿ ಇಟ್ಟುಕೊಳ್ಳಿ; ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೊದಲನೇ ಸಂಪುಟ ಸಭೆಯಿಂದ ನಾವು 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ನಿಮ್ಮ ಕುಟುಂಬಕ್ಕೆ ಪ್ರತಿ ತಿಂಗಳೂ ಕನಿಷ್ಠ ರೂ. 10 ಸಾವಿರದಷ್ಟು ಅನುಕೂಲ ಆಗಲಿದೆ ಎಂದು ಜನರಿಗೆ ಭರವಸೆ ಕೊಟ್ಟು ಮೋಸ ಮಾಡಿದ್ದರು ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ಪಕ್ಷವು ಮೋಸ, ವಂಚನೆ, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಯಾವ ಮಟ್ಟಕ್ಕಾದರೂ ಹೋಗುವುದನ್ನು ಸ್ವಾತಂತ್ರ್ಯಾನಂತರದ 60 ವರ್ಷಗಳಲ್ಲಿ ಮಾಡುತ್ತಲೇ ಬಂದಿದೆ. ಮೊದಲ 60 ವರ್ಷಗಳಲ್ಲಿ ಜಾತಿ, ಜಾತಿ, ಧರ್ಮ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ಆಡಳಿತ ಮಾಡಿದ್ದರು. ಬಡವರ ಮೂಗಿಗೆ ತುಪ್ಪ ಸವರಿದರು; ಗರೀಬಿ ಹಠಾವೋ ಮಾಡುವುದಾಗಿ ಹೇಳಿದ್ದರೂ ಬಡತನ ನಿರ್ಮೂಲನೆ ಬಡವರ ಕಲ್ಯಾಣ, ದೀನದಲಿತರ ಉದ್ಧಾರ ಮಾಡಲಿಲ್ಲ ಎಂದು ತಿಳಿಸಿದರು.

ಜನರಿಗೆ ಸತತವಾಗಿ ಮೋಸ ಮಾಡುತ್ತ ಬಂದ ಕಾಂಗ್ರೆಸ್ ಪಕ್ಷವು ಇವತ್ತು ಕರ್ನಾಟಕದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ವಿವಿಧ ಗ್ಯಾರಂಟಿಗಳನ್ನು ಕೊಟ್ಟಿದೆ. ಕುಟುಂಬದ ಯಜಮಾನಿಗೆ 2 ಸಾವಿರ ಕೊಡುವುದಾಗಿ ತಿಳಿಸಿದ್ದರು. ಈಗ ಅತ್ತೆಗೆ ಮಾತ್ರ ಕೊಡುವುದಾಗಿ ಹೇಳುತ್ತಿದ್ದಾರೆ. ಅದೇ ಅತ್ತೆಗೆ 4 ಮಕ್ಕಳಿದ್ದರೆ ಅವರು ಬೇರೆ ಬೇರೆ ಮನೆಯಲ್ಲಿರುತ್ತಾರೆ. ಇದನ್ನು ಗಮನಿಸಿ ಯಾವುದೇ ಶರ್ತವಿಲ್ಲದೆ ಪ್ರತಿ ಕುಟುಂಬದ ಯಜಮಾನ್ತಿಗೆ 2 ಸಾವಿರ ಕೊಡಬೇಕು ಎಂದು ಆಗ್ರಹಿಸಿದರು.

ಪದವೀಧರ ನಿರುದ್ಯೋಗಿಗೆ 3 ಸಾವಿರ ಕೊಡುವ ಭರವಸೆ ಕೊಟ್ಟಿದ್ದರು. ಇದೀಗ ಈ ವರ್ಷ ಉತ್ತೀರ್ಣರಾದವರಿಗೆ ಮಾತ್ರ ಎನ್ನುತ್ತಿದ್ದಾರೆ. ಚುನಾವಣೆ ಫಲಿತಾಂಶ ಬಂದ ದಿನ ಎಷ್ಟು ಜನ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಪಡೆದವರು ಇದ್ದರೋ ಅಂದರೆ ಸುಮಾರು 50 ಲಕ್ಷದಿಂದ 60 ಲಕ್ಷ ಯುವಜನರಿಗೆ 3 ಸಾವಿರ ಮತ್ತು ಒಂದೂವರೆ ಸಾವಿರ ಕೊಡಲೇಬೇಕು ಎಂದು ಒತ್ತಾಯಿಸಿದರು. ಈ ವರ್ಷ ಪಾಸಾದವರಿಗೆ ನಿಮ್ಮ ಪ್ರಣಾಳಿಕೆಯಲ್ಲಿ ಹೇಳಬೇಕಿತ್ತು; ಹೇಳಿಲ್ಲ ಅಲ್ಲವೇ ಎಂದು ಪ್ರಶ್ನಿಸಿದರು.

ವಿದ್ಯುತ್ ನನಗೂ ಫ್ರೀ, ನಿಮಗೂ ಫ್ರೀ, ಹಿಂದೆ ಕುಂತವರಿಗೂ ಫ್ರೀ, ಮುಂದೆ ಕುಳಿತವರಿಗೂ ಫ್ರೀ ಎಂದಿದ್ದರು. ಮಹದೇವಪ್ಪಗೂ ಫ್ರೀ; ಮತ್ತೊಬ್ಬರಿಗೂ ಫ್ರೀ ಎಂದು ತಿಳಿಸಿದ್ದರು. ಆದಾಯ ತೆರಿಗೆ ಪಾವತಿಸುವ ತಮಗೂ ಫ್ರೀ ಎಂದು ಸಿದ್ದರಾಮಯ್ಯನವರು ಹೇಳಿದ್ದರು. ಆದ್ದರಿಂದ ಶರ್ತರಹಿತವಾಗಿ ಎಲ್ಲರಿಗೂ ಉಚಿತ ವಿದ್ಯುತ್ ನೀಡಬೇಕು. ಅದನ್ನು ತಪ್ಪಿಸಬೇಡಿ ಎಂದು ಸಿದ್ದರಾಮಯ್ಯರನ್ನು ಒತ್ತಾಯಿಸಿದರು.

10 ಕೆಜಿ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಕೇಳುತ್ತಿದ್ದಾರೆ. ಕೇಂದ್ರಕ್ಕೆ ಯಾಕೆ ಕೇಳುತ್ತೀರಿ ಎಂದು ಪ್ರಶ್ನಿಸಿದರಲ್ಲದೆ, ಮಾರ್ಕೆಟ್‍ನಲ್ಲಿ ಅಕ್ಕಿ ಬೇಕಾದಷ್ಟು ಸಿಗುತ್ತದೆ. ಖರೀದಿಸಿ ನಾಳೆಯಿಂದಲೇ ವಿತರಣೆ ಆರಂಭಿಸಿ ಎಂದು ಅವರು ಆಗ್ರಹಪೂರ್ವಕವಾಗಿ ನುಡಿದರು. ಉಚಿತ ಬಸ್ ಪ್ರಯಾಣ ಕೊಡುವುದಾಗಿ ಹೇಳಿದ್ದಾರೆ. ಸರಕಾರದ ನಿರ್ಧಾರವನ್ನು ಕಾದು ನೋಡೋಣ ಎಂದು ತಿಳಿಸಿದರು.

ಉಚಿತಗಳ ಗ್ಯಾರಂಟಿ ಜಾರಿ ಮಾಡದಿದ್ದರೆ ನಾಡಿನ ಜನ ಇವರಿಗೆ ರಸ್ತೆಯಲ್ಲಿ ಓಡಾಡಲು ಬಿಡುವುದಿಲ್ಲ ಎಂದು ಎಚ್ಚರಿಸಿದರು. ದೀನದಲಿತರಿಗೆ ಶಿಕ್ಷಣ ಕ್ಷೇತ್ರಕ್ಕಾಗಿ ಕೊಡುವ ಅನುದಾನದ ಹಣವನ್ನು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಳಸುವ ಮಾಹಿತಿ ಇದೆ. ಹೀಗೆ ಮಾಡಿದರೆ ದೊಡ್ಡ ಹೋರಾಟ ಆಗಲಿದೆ ಎಂದು ತಿಳಿಸಿದರು.

ದೀನದಲಿತರ ವಿದ್ಯಾಭ್ಯಾಸ, ಊಟ ವಸತಿ, ಸುಸಜ್ಜಿತ ವಸತಿ ಶಾಲೆ ನಿರ್ಮಾಣ, ಹಾಸ್ಟೆಲ್ ನಿರ್ಮಾಣ, ನಿಗಮಗಳ ಮೂಲಕ ಭೂಮಿ ಖರೀದಿಗೆ ಮತ್ತು ಸಾಲ ಸೌಲಭ್ಯಗಳಿಗೆ, ಸ್ವಯಂ ಉದ್ಯೋಗಕ್ಕೆ ಸಂಬಂಧಿಸಿದ ಅನುದಾನವನ್ನು ಗ್ಯಾರಂಟಿಗಾಗಿ ಬಳಸಿ ಮೋಸ ಮಾಡಿದರೆ ಈ ದೀನದಲಿತರು ರಸ್ತೆಗೆ ಇಳಿದು ಹೋರಾಡುತ್ತಾರೆ ಎಂದೂ ಅವರು ಎಚ್ಚರಿಕೆ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ