Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಉದ್ಯಮಿಗಳಿಗೆ ಉತ್ತೇಜನ ನೀಡಲು ಸರಕಾರ ಬದ್ಧ: ಎಂ ಬಿ ಪಾಟೀಲ

ಸುದ್ದಿಮೂಲ ವಾರ್ತೆ

ಬೆಂಗಳೂರು,ನ.18: ರಾಜ್ಯ ಸರಕಾರವು ಮಹಿಳಾ ಉದ್ಯಮಿಗಳಿಗೆ ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಲಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮಂಡಲಿ ಸೇರಿದಂತೆ ಹಲವು ಸಾಂಸ್ಥಿಕ ವ್ಯವಸ್ಥೆಗಳ ಮೂಲಕ ಉತ್ತೇಜನ ನೀಡುತ್ತಿದೆ. ಉದ್ಯಮಶೀಲ ಮಹಿಳೆಯರು ಬೆಂಗಳೂರಿನ ಆಚೆಗೂ ಉದ್ಯಮಗಳನ್ನು ಸ್ಥಾಪಿಸಲು ಮನಸ್ಸು ಮಾಡಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕರೆ ನೀಡಿದ್ದಾರೆ.

ಶನಿವಾರ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮಹಿಳಾ ಉದ್ಯಮಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ಮಹಿಳಾ ಉದ್ಯಮಿಗಳ ಮಹಾಒಕ್ಕೂಟವಾದ ʻಉಬುಂಟುʼ ಇದನ್ನು ಏರ್ಪಡಿಸಿತ್ತು.

ರಾಜ್ಯದ ಕೈಗಾರಿಕಾ ನೀತಿಯಲ್ಲಿ ಕೆಐಎಡಿಬಿ ಮೂಲಕ ಉದ್ಯಮಿಗಳಿಗೆ ಹಂಚುತ್ತಿರುವ ನಿವೇಶನದಲ್ಲಿ ಮಹಿಳಾ ಉದ್ಯಮಿಗಳಿಗೆ ಶೇ.5ರಷ್ಟು ಮೀಸಲಾತಿ ಇದೆ. ಜೊತೆಗೆ ಕೆಎಸ್ಸೆಸೈಡಿಸಿಯಲ್ಲೂ ಜಮೀನು ಹಂಚಿಕೆಯಲ್ಲಿ ಇದೇ ಸೂತ್ರವನ್ನು ಅಳವಡಿಸಿಕೊಳ್ಳಲಾಗಿದೆ. ಹೂಡಿಕೆ ಸಬ್ಸಿಡಿಯಾಗಿ ಶೇ.5ರಷ್ಟು ಹೆಚ್ಚುವರಿ ಪ್ರೋತ್ಸಾಹ ಮತ್ತು ವಿದ್ಯುತ್‌ ಬಿಲ್‌ ಮೇಲೆ ಗರಿಷ್ಠ ನಾಲ್ಕು ವರ್ಷಗಳ ವಿನಾಯಿತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ರಾಜ್ಯವು ಮಹಿಳೆಯರನ್ನು ಕೈಗಾರಿಕಾ ರಂಗದಲ್ಲಿ ಮೊದಲಿನಿಂದಲೂ ಪ್ರೋತ್ಸಾಹಿಸುತ್ತಿದೆ. ತಂತ್ರಜ್ಞಾನ ಪರಿಪೋಷಣಾ ಕೇಂದ್ರ, ತಂತ್ರಜ್ಞಾನ ಅಳವಡಿಕೆ ಇವುಗಳಲ್ಲೂ ಅರ್ಧದಷ್ಟು ಮೊತ್ತವನ್ನು ಸಬ್ಸಿಡಿಯಾಗಿ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ಮಳೆನೀರು ಸಂಗ್ರಹಣೆ, ತ್ಯಾಜ್ಯ ನೀರು ಮರುಬಳಕೆ, ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗಳಿಗೂ ಪ್ರೋತ್ಸಾಹ ಕೊಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಮಹಿಳೆಯರು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬಂದರೆ, ಕೆಎಸ್‌ಎಫ್‌ಸಿ ಮೂಲಕ ಗರಿಷ್ಠ 2 ಕೋಟಿ ರೂ.ವರೆಗೂ ಶೇ.14ರಷ್ಟು ಬಡ್ಡಿ ದರದಲ್ಲಿ ಸುಲಭವಾಗಿ ಸಾಲ ಕೊಡಲಾಗುತ್ತಿದೆ. ಸಣ್ಣ ಮತ್ತು ಮಧ್ಯಮ ಸ್ವರೂಪದ ಕೈಗಾರಿಕೆಗಳನ್ನು ಸ್ಥಾಪಿಸುವ ಆಸಕ್ತಿ ಇರುವ ಮಹಿಳೆಯರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ಸಾಲಕ್ಕೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಐದು ವರ್ಷಗಳವರೆಗೆ ಶೇ.10ರಷ್ಟು ಬಡ್ಡಿಯನ್ನು ತಾನೇ ಪಾವತಿಸುತ್ತದೆ ಎಂದು ಸಚಿವರು ನುಡಿದರು.

ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಸರಕಾರವು ಒತ್ತು ಕೊಟ್ಟಿದೆ. ಜೊತೆಗೆ, ಕೌಶಲ್ಯಾಭಿವೃದ್ಧಿಗೂ ಗಮನ ಹರಿಸಲಾಗಿದೆ. ಮಹಿಳೆಯರು ಆರ್ಥಿಕ ಪ್ರಗತಿ ಸಾಧಿಸುವ ಮೂಲಕ ಹಲವು ಸಾಮಾಜಿಕ ಆಶಯಗಳನ್ನೂ ನನಸು ಮಾಡಿಕೊಳ್ಳುವುದು ಸಾಧ್ಯವಿದೆ ಎಂದು ಅವರು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ ಕೆ.ರತ್ನಪ್ರಭಾ, ಉದ್ಯಮಿಗಳಾದ ಉಮಾ ರೆಡ್ಡಿ, ರಾಜಲಕ್ಷ್ಮಿ, ಲತಾ ಗಿರೀಶ್‌ ಮುಂತಾದವರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ