Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ಸರ್ಕಾರಿ ಹೆಣ್ಣು ಮಕ್ಕಳ ಶಾಲೆಗೆ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಆ.1: ಪಟ್ಟಣದಲ್ಲಿ ನಡೆದ ಹೋಬಳಿ ಮಟ್ಟದ ವಿವಿಧ ಕ್ರೀಡಾಕೂಟದಲ್ಲಿ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿನಿಯರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಶಾಲೆಯ ಮುಖ್ಯಶಿಕ್ಷಕ ರಾಮದಾಸ ಶಿವುಹಳ್ಳೇರ್‌ ವಿಜೇತ ವಿದ್ಯಾರ್ಥಿನಿಯರಿಗೆ ಅಭಿನಂದಿಸಿ ಮಾತನಾಡಿದ ಅವರು, 'ಪಠ್ಯದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಮಕ್ಕಳಿಗೆ ವ್ಯಾಪಕ ಪ್ರೋತ್ಸಾಹ ನೀಡಲಾಗುತ್ತಿದ್ದು, ಅದರ ಫಲವಾಗಿ ಇಂದು ಹೋಬಳಿ ಮಟ್ಟದಲ್ಲಿ ಶಾಲೆಯೂ ಮೊದಲ ಬಹುಮಾನ ಪಡೆದುಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ವಾಲಿಬಾಲ್‌ ಗಂಗಾ ಮತ್ತು ತಂಡ ಪ್ರಥಮಸ್ಥಾನ, ಥ್ರೋಬಾಲ್‌ ಭೂಮಿಕಾ ಮತ್ತು ತಂಡ ಪ್ರಥಮಸ್ಥಾನ, ಶಟಲ್‌ ಬ್ಯಾಡ್ಮಿಂಟನ್ ಜನಿಕ ಮತ್ತು ತಂಡ ಪ್ರಥಮಸ್ಥಾನ, 100 ಮೀಟರ್‌ ಓಟ ಹರಿಣಿ.ಸಿ ಪ್ರಥಮಸ್ಥಾನ, ಜೀವಿತ ತೃತೀಯ ಸ್ಥಾನ, 200 ಮೀಟರ್‌ ಓಟ ಗಂಗಾ ದ್ವಿತೀಯಸ್ಥಾನ, 400 ಮೀಟರ್‌ ಓಟ ಅಖಿಲ.ವಿ ತೃತೀಯಸ್ಥಾನ, ತಟ್ಟೆ ಎಸೆತ ಅನಿತ ಪ್ರಥಮ ಸ್ಥಾನ, ಉದ್ದಜಿಗಿತ ಅಖಿಲ.ವಿ ಪ್ರಥಮಸ್ಥಾನ, ಎತ್ತರ ಜಿಗಿತ ಜೀವಿತ ಪ್ರಥಮಸ್ಥಾನ, 100 ಮೀಟರ್‌ ರಿಲೇ ಜೀವಿತ ಮತ್ತು ತಂಡ ಪ್ರಥಮ ಸ್ಥಾನಗಳಿಸಿ ಶಾಲೆಯ ಕಿರ್ತಿಯನ್ನು ಹೆಚ್ಚಿಸಿದ್ದಾರೆ ಎಂದರು.

ಇದೇ ವೇಳೆ ಶಾಲೆಯ ಎಸ್‌.ಡಿ.ಎಂ.ಸಿ ಅಧ್ಯಕ್ಷ ವಿನಯ್‌ಕುಮಾರ್, ಸದಸ್ಯರು, ಶಾಲಾ ಶಿಕ್ಷಕರಾದ ಶಿವಕುಮಾರ್‌.ಬಿ.ವಿ ನಸೀಮಾಬಾನು, ಬೊಮ್ಮಕ್ಕ, ವಿಜಯಲಕ್ಷ್ಮೀ. ಡಿ.ಎಚ್, ಕಲಾವತಿ, ನಗೀನಾತಾಜ್, ಸುನಿಲ್‌ಕುಮಾರ್, ಎನ್. ಅತಿಥಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ