Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಬಿಐ ತನಿಖೆಗೆ ಸರ್ಕಾರ ನಿರಾಕರಣೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಜು.11: ಜೈನ ಮುನಿ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ನಿರಾಕರಿಸಿದ ಕಾರಣ ಪ್ರತಿಪಕ್ಷ ಬಿಜೆಪಿ ವಿಧಾನಸಭೆಯಲ್ಲಿಂದು ಧರಣಿ ನಡೆಸಿದರು.

ಚಿಕ್ಕೋಡಿ ತಾಲ್ಲೂಕಿನಲ್ಲಿ ಜೈನ ಮುನಿ ಹತ್ಯೆಗೆ ಸಂಬಂಧಪಟ್ಟಂತೆ ಸೋಮವಾರ ನಿಲುವಳಿ ಸೂಚನೆ ಮಂಡಿಸಿ ಚರ್ಚೆಗೆ ಅವಕಾಶ ಕೋರಿದ ನಂತರ ನಿಯಮ ಬದಲಿಸಿ ಸಭಾಧ್ಯಕ್ಷರು ಪ್ರತಿಪಕ್ಷಗಳಿಗೆ ವಿಷಯ ಪ್ರಸ್ತಾಪಿಸಲು ಅವಕಾಶ ನೀಡಿದಾಗ ಹತ್ಯೆ ಖಂಡಿಸಿದ ಪ್ರತಿಪಕ್ಷ ಈ ಪ್ರಕರಣ ಸಿಬಿಐಗೆ ವಹಿಸುವಂತೆ ಆಗ್ರಹಿಸಿದಾಗ ಗೃಹ ಮಂತ್ರಿ ಸ್ಥಳಕ್ಕೆ ಭೇಟಿ ನೀಡಿದ್ದು, ನಾಳೆ ಸದನದಲ್ಲಿ ಉತ್ತರ ನೀಡುತ್ತಾರೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರು.

ಆ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯಲ್ಲಿ ಗೃಹ ಮಂತ್ರಿ ಡಾ.ಜಿ. ಪರಮೇಶ್ವರ್ ಉತ್ತರ ನೀಡಿ, ಈ ಕೊಲೆ ಅಮಾನವೀಯ ಮತ್ತು ಅತ್ಯಂತ ದುಷ್ಕೃತ್ಯದಿಂದ ಕೂಡಿದ್ದು, ಇದನ್ನು ಸರ್ಕಾರ ಖಂಡಿಸುತ್ತದೆ ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲು ಕ್ರಮ ಕೈಗೊಳ್ಳುತ್ತದೆ. ಕೊಲೆಯಾದ ವಿಷಯ ತಿಳಿದ ಆರು ತಾಸುಗಳಲ್ಲಿಯೇ ಆರೋಪಿಗಳನ್ನು ಬಂಧಿಸಿ, ಶವ ಪತ್ತೆ ಮಾಡಿ, ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾರು ತಪ್ಪಿತಸ್ಥರು ಎಂದು ಕಂಡುಬಂದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಪೊಲೀಸರು ಅತ್ಯಂತ ಪ್ರಾಮಾಣಿಕತೆಯಿಂದ ಈ ಪ್ರಕರಣವನ್ನು ಭೇದಿಸಿದ್ದಾರೆ. ಹೀಗಾಗಿ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಉತ್ತರಿಸಿದರು.

ಆದರೆ, ಇದಕ್ಕೆ ಒಪ್ಪದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ, ಇದು ಕೇವಲ ಜೈನ ಮುನಿ ಕೊಲೆ ಅಷ್ಟೇ ಅಲ್ಲ. ಇದರ ಹಿಂದೆ ಇತರರ ಕೈವಾಡಗಳು ಇರುವ ಶಂಕೆ ಇದೆ. ವಿದ್ಯುತ್ ಶಾಕ್ ನೀಡಿ ಮತ್ತು ತುಂಡುತುಂಡಾಗಿ ಕತ್ತರಿಸಿದ್ದು ಪೂರ್ವ ನಿಯೋಜಿತ ಕೃತ್ಯವಾಗಿದ್ದರಿಂದ ಇದು ಸಿಬಿಐನಿಂದಲೇ ತನಿಖೆ ಮಾಡುವುದು ಸೂಕ್ತ ಎಂದು ಒತ್ತಾಯಿಸಿದರು.

ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ, ಇದೊಂದು ಹೇಯ ಕೃತ್ಯ. ನಾಗರಿಕ ಸಮಾಜದಲ್ಲಿ ಇಂತಹ ಕೃತ್ಯಗಳು ಜರುಗಬಾರದು. ಸರ್ಕಾರ ಈ ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಇದರಲ್ಲಿ ಯಾರದ್ದೇ ಕೈವಾಡ ಇದ್ದರೂ ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕಠಿಣ ಶಿಕ್ಷೆ ಕೊಡುವ ಮೂಲಕ ಮುಂದೆ ಇಂತಹ ಘಟನೆಗಳು ಆಗದಂತೆ ಎಚ್ಚರ ವಹಿಸಲಾಗುವುದು. ರಾಜ್ಯದ ಪೊಲೀಸರು ಈ ವಿಷಯದಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಮತ್ತು ಬದ್ಧತೆಯಿಂದ ಕೆಲಸ ಮಾಡಿದ್ದಾರೆ. ಈಗ ತನಿಖೆ ನಡೆಯುತ್ತಿದ್ದು, ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಹೀಗಾಗಿ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಉತ್ತರಿಸಿದರು.

ಜೈನಮುನಿಗಳ ಕೊಲೆ ಪ್ರಕರಣ ಸಿಬಿಐ ತನಿಖೆ ಅಗತ್ಯವಿಲ್ಲ;ಕರ್ನಾಟಕ ಪೊಲೀಸರ ಕೈಯಿಂದಲೇ ತನಿಖೆ ಮಾಡಿಸಿ ಕಠಿಣ ಶಿಕ್ಷೆ ವಿಧಿಸಲಾಗುವುದು.ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುವುದು ಎಂದು ಹೇಳಿದ ಸಿಎಂ ಸಿದ್ದರಾಮಯ್ಯ ಅವರು ಟಿ.ನರಸಿಪುರ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯವಿದ್ದರೇ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು. ಎಲ್ಲ ಪ್ರಕರಣಗಳನ್ನು ನಮ್ಮ ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದರು.

ಇದೇ ಸಂದರ್ಭದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರು ಜೈನಮುನಿಗಳ ಆಶ್ರಮ ಹಾಗೂ ಘಟನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವಾಸ್ತವ ವರದಿಯನ್ನು ಸದನದ ಮುಂದಿಟ್ಟರು ಮತ್ತು ಈ ವಿಷಯದಲ್ಲಿ ನಮ್ಮ ಪೊಲೀಸರು ಎಲ್ಲ ಆಯಾಮಗಳಿಂದಲೂ ಅತ್ಯಂತ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದು,ಸಿಬಿಐ ತನಿಖೆ ಅಗತ್ಯವಿಲ್ಲ ಎಂದರು.

ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿ ಉತ್ತರದಿಂದ ತೃಪ್ತರಾಗದ ಪ್ರತಿಪಕ್ಷಗಳು ಪುನಃ ಇದರಲ್ಲಿ ಪ್ರತಿಷ್ಠೆ ಬೇಡ. ಸಿಬಿಐ ತನಿಖೆಗೆ ನೀಡಿದರೆ ಇನ್ನಷ್ಟು ಸತ್ಯ ಸಂಗತಿ ಬಯಲಾಗಲಿದೆ ಎಂದು ಒತ್ತಾಯಿಸಿದರು. ಆದರೆ, ಸರ್ಕಾರ ಅದಕ್ಕೆ ಒಪ್ಪದೆ ಇದ್ದಾಗ ಸದನದ ಬಾವಿಗೆ ಇಳಿದು ಪ್ರತಿಭಟನೆ ಮುಂದುವರಿಸಿದಾಗ ಸದನವನ್ನ 10 ನಿಮಿಷಗಳ ಕಾಲ ಮುಂದೂಡಲಾಯಿತು.

ಸದನ ಪುನಃ ಸಮಾವೇಶಗೊಂಡಾಗ ಧರಣಿ ಮುಂದುವರಿಸಿದ ಪ್ರತಿಪಕ್ಷಗಳು, ಸಿಬಿಐ ತನಿಖೆಗೆ ಪಟ್ಟು ಹಿಡಿದರು. ಆದರೆ, ಸರ್ಕಾರ ಅದಕ್ಕೆ ಒಪ್ಪದೇ ಇದ್ದಾಗ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮಾತನಾಡಿ, ಇನ್ನು ಮುಂದೆ ಶೂನ್ಯ ವೇಳೆಯಲ್ಲಿ ಕೇವಲ ನಿಯಮಕ್ಕನುಸಾರವಾಗಿ ಇರುವ ಪ್ರಶ್ನೆಗಳನ್ನು ಮಾತ್ರ ಕೈಗೆತ್ತಿಕೊಳ್ಳಲಾಗುತ್ತದೆ. ಸದಸ್ಯರು ಸಹ 59 (ಸಿ) ಅಡಿ ವಿಷಯ ಪ್ರಸ್ತಾಪಕ್ಕೆ ಕೇವಲ ಮೂರು ನಿಮಿಷಗಳ ಕಾಲ ಮಾತ್ರ ಅವಶ್ಯಕತೆ ಇದ್ದು, ಅತಿ ಜರೂರು ಮತ್ತು ಸಾರ್ವಜನಿಕ ಹಿತದೃಷ್ಟಿಯ ವಿಷಯಗಳನ್ನು ಮಾತ್ರ ಪ್ರಸ್ತಾಪಿಸಬೇಕು ಎಂದು ಸದಸ್ಯರಿಗೆ ಸಲಹೆ ಮಾಡಿ ಶೂನ್ಯ ವೇಳೆಯಲ್ಲಿ ಬಸವರಾಜ ರಾಯರೆಡ್ಡಿ ಮತ್ತು ಜಯಚಂದ್ರ ಅವರು ಎತ್ತಿದ ಕ್ರಿಯಾಲೋಪಕ್ಕೆ ರೂಲಿಂಗ್ ನೀಡಿದರು.

ಈ ಮಧ್ಯೆ ಪ್ರತಿಪಕ್ಷಗಳ ಧರಣಿ ಹಾಗೇ ಮುಂದುವರಿದಾಗ ಸದನವನ್ನು ಸಭಾಧ್ಯಕ್ಷರು ಬುಧವಾರಕ್ಕೆ ಮುಂದೂಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ