Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಎಸ್‌ಎಸ್‌ ವೈದ್ಯಕೀಯ ಕಾಲೇಜಿನಲ್ಲಿ ಪದವೀಧರ ದಿನಾಚರಣೆ

ಸುದ್ದಿಮೂಲ ವಾರ್ತೆ

ಮೈಸೂರು, ಅ.29 : ನಗರದ ಜೆಎಸ್‌ಎಸ್‌ ವೈದ್ಯಕೀಯ ಮಹಾವಿದ್ಯಾನಿಲಯದ ಆಲೈಡ್‌ ಹೆಲ್ತ್‌ಸೈನ್ಸ್‌ ವಿದ್ಯಾರ್ಥಿಗಳ ಪದವೀಧರರ ದಿನಾಚರಣೆಯನ್ನು ಅ.31 ರಂದು ಸಂಜೆ ಕಾಲೇಜಿನ ರಾಜೇಂದ್ರ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜೆಎಸ್‌ಎಸ್‌ ವೈದ್ಯಕೀಯ ಮಹಾವಿದ್ಯಾನಿಲಯದ ಪ್ರಾಂಶುಪಾಲ ಡಾ.ಎಚ್‌.ಬಸವನ ಗೌಡಪ್ಪ ಅವರು, 13, ಬಿಎಸ್ಸಿ, 9 ಎಂಎಸ್ಸಿ ಪದವಿ ಕೋರ್ಸ್‌ ಹಾಗೂ ಮಾಸ್ಟರ್‌ ಹೆಲ್ತ್‌ ಪದವಿ ಕೋರ್ಸ್‌ನ 303 ವಿದ್ಯಾರ್ಥಿಗಳು ಅಂದು ಪದವಿ ಪ್ರಮಾಣ ಪತ್ರ ಪಡೆಯಲಿದ್ದಾರೆ. 20 ಮಂದಿ ಚಿನ್ನದ ಪದಕ ಪಡೆದಿದ್ದು, ಪದಕ ಸ್ವೀಕರಿಸುವರು ಎಂದರು.

ಕಾರ್ಯಕ್ರಮವನ್ನು ವಿಜ್ಞಾನಿ ಡಾ.ಸುಚೇತಾ ಬ್ಯಾನರ್ಜಿ ಕುರುಂದ್ಕರ್‌ ಅವರು ಪದವಿ ಪ್ರಧಾನ ಮಾಡಲಿದ್ದು, ಜೆಎಸ್‌ಎಸ್‌ ಮಹಾವಿದ್ಯಾಪೀಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯವಹಿಸಲಿದ್ದಾರೆ. ಜೆಎಸ್‌ಎಸ್‌ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ, ಕಲಾಧಿಪತಿ ಡಾ.ಬಿ.ಸುರೇಶ್‌, ಸಂಶೋಧನಾ ಅಕಾಡೆಮಿ ಉಪಕುಲಾಧಿಪತಿ ಡಾ.ಸುರೀಂದರ್‌ ಸಿಂಗ್‌ ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು. ಪ್ರಾದೇಶಿಕ ನೇತ್ರವಿಜ್ಞಾನ ಸಂಸ್ಥೆ ವೈದ್ಯಕೀಯ ಶಿಕ್ಷಣ ನಿರ್ದೇಶಕ ಡಾ.ಬಿ.ಎಲ್‌.ಸುಜಾತಾ ರಾಥೋಡ್‌ ಅಧ್ಯಕ್ಷತೆ ವಹಿಸುವರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ