Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

32,240 ಅಭ್ಯರ್ಥಿಗಳಿಗೆ ಪದವಿ ಪ್ರದಾನ

 

ಸುದ್ದಿಮೂಲ ವಾರ್ತೆ

ಮೈಸೂರು,ಅ.18:ನಗರದಲ್ಲಿ ನಡೆದ ಮೈಸೂರು ವಿಶ್ವವಿದ್ಯಾಲಯದ 103 ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ನಾಡೋಜ ಡಾ.ಪಿ.ಎಸ್.ಶಂಕರ್, ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಅವರಿಗೆ ಗೌರವ ಡಾಕ್ಟರೆಟ್‌ ಅನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರದಾನ ಮಾಡಿದರು.



ಇದೇ ವೇಳೆ ಪಿಎಚ್.ಡಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಒಟ್ಟು 32,240 ಅಭ್ಯರ್ಥಿಗಳಿಗೆ ಪದವಿಗಳನ್ನು ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದ ಮೈಸೂರಿನರೇ ಆದ ಅಂತಾರಾಷ್ಟ್ರೀಯ ಮಾಜಿ ಕ್ತಿಕೆಟ್‌ ಪಟು ಜಾವಗಲ್‌ ಶ್ರೀನಾಥ್‌ ಗೈರಾಗಿದ್ದರು.

ಪದವಿ ಪಡೆಯುತ್ತಿರುವ ಒಟ್ಟು 32,240 ಅಭ್ಯರ್ಥಿಗಳ ಪೈಕಿ 12,051 (ಶೇ.37.37) ಪುರುಷ ಅಭ್ಯರ್ಥಿಗಳಾದರೆ, 20,189 (ಶೆ.62.62) ಮಹಿಳಾ ಅಭ್ಯರ್ಥಿಗಳಿದ್ದರು. ಈ ಬಾರಿ ಘಟಿಕೋತ್ಸವದಲ್ಲಿ ಮಹಿಳೆಯರೆ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಪದವಿಗಳನ್ನು ಪಡೆಯುತ್ತಿದ್ದಾರೆ. ವಿವಿಧ ವಿಷಯಗಳಲ್ಲಿ 539 ಅಭ್ಯರ್ಥಿಗಳು ಪಿಎಚ್.ಡಿ ಪದವಿ ಪಡೆಯುತ್ತಿದ್ದಾರೆ. ಈ ಪೈಕಿ248 (ಶೇ.46.01) ಮಹಿಳಾ ಅಭ್ಯರ್ಥಿಗಳಿದ್ದರೆ, 291 ಮಂದಿ (ಶೆ.53.98) ಪುರುಷ ಅಭ್ಯರ್ಥಿಗಳಿದ್ದಾರೆ.

ಚಿನ್ನದ ಪದಕ

ಪದವಿ ಪಡೆಯುತ್ತಿರುವ ಅಭ್ಯರ್ಥಿಗಳಲ್ಲಿ 40 ಮಂದಿ ವಿದೇಶಿ ಅಭ್ಯರ್ಥಿಗಳಿದ್ದರು. ಹಾಗೆಯೇ 420 ಚಿನ್ನದ ಪದಕ, 275 ನಗದು ಬಹುಮಾನಗಳನ್ನು 249 ಅಭ್ಯರ್ಥಿಗಳು ಪಡೆದುಕೊಂಡರೆ, ಅದರಲ್ಲಿ 180 ಮಹಿಳಾ ಅಭ್ಯರ್ಥಿಗಳಿದ್ದರು

ಬಳಿಕ ರಾಜ್ಯಪಾಲರು ಮಾತನಾಡಿ, ದಕ್ಷಿಣ ಭಾರತದಲ್ಲೇ ಮೈಸೂರು ವಿವಿ ಹಾಗೂ ಮೈಸೂರು ಶಿಕ್ಷಣಕ್ಕೆ ತನ್ನದೆ ಆದ ಕೊಡುಗೆ ನೀಡುತ್ತಾ ಬಂದಿದೆ. ಕಲೆ, ಸಾಹಿತ್ಯಕ್ಕೂ ಪ್ರೋತ್ಸಹ ನೀಡುತ್ತಾ ಬಂದಿದೆ ಎಂದು ಹೇಳಿದರು.

ಸಚಿವ ಡಾ.ಎಂ.ಸಿ ಸುಧಾಕರ್ ಅವರು ಮಾತನಾಡಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ನಾಡೋಜ ಡಾ.ಪಿ.ಎಸ್.ಶಂಕರ್, ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಸಂಸ್ಥಾಪಕ ಸಂಪಾದಕರಾದ ಕೆ.ಬಿ.ಗಣಪತಿ ಅವರಿಗೆ ಗೌರವ ಡಾಕ್ಟರೆಟ್ ನೀಡಿರುವುದರಿಂದ ಯೂನಿವರ್ಸಿಟಿಯ ಗೌರವವನ್ನು ಹೆಚ್ಚಿಸಿದೆ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಲ್ಪನೆಯಲ್ಲಿ ಮೂಡಿದ ಹಾಗೂ ಶತಮಾನ ಕಂಡಿರುವ ವಿಶ್ವವಿದ್ಯಾನಿಲಯ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಕಾಣಿಸಿಕೊಳ್ಳುತ್ತಿದ್ದು ಹೆಮ್ಮೆಯ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೋ.ಲೋಕನಾಥ್, ಕುಲಸಚಿವರಾದ ಶೈಲಜ, ರಕ್ಷಣಾ ಸಂಶೋದನೆ ಮತ್ತು ಅಭಿವೃದ್ದಿ ಸಂಸ್ಥೆಯ ವಿಶ್ರಾಂತ ಮಹಾನಿರ್ದೇಶಕ ಪದ್ಮವಿಭೂಷಣ ಪ್ರಶಸ್ತಿ ಪಡೆದಿರುವ ಡಾ.ವಾಸುದೇವ್ ಕೆ.ಆತ್ರೆ ಸೇರಿದಂತೆ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ