Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ವೈದ್ಯರಿಂದಾಗಿ ನಾಟಿ ವೈದ್ಯರಿಗೆ ಪ್ರೋತ್ಸಾಹ ಸಿಗುತ್ತಿಲ್ಲ

ಸುದ್ದಿಮೂಲ ವಾರ್ತೆ

ನಾಗಮಂಗಲ, ಅ.26: ಆಧುನಿಕ ವೈದ್ಯಕೀಯದ ಜೊತೆಗೆ ಪಾರಂಪರಿಕ ವೈದ್ಯ ಪದ್ದತಿಯನ್ನ ನಾವು ಮುಖ್ಯವಾಹಿನಿಗೆ ತರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಅವರು, ನಾಗಮಂಗಲ ಆದಿಚುಂಚನಗಿರಿ ಸಂಸ್ಥಾನದಲ್ಲಿ ಇಂದು ರಾಷ್ಟ್ರೀಯ ಪಾರಂಪರಿಕ ವೈದ್ಯರ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಳೆಯುತ್ತಿರುವ ವಿಜ್ಞಾನ ತಂತ್ರಜ್ಞಾನದ ಯುಗದಲ್ಲಿ ಬಹುತೇಕರು ನಾಟಿ ವೈದ್ಯ ಪದ್ದತಿಯನ್ನ ನಂಬಲ್ಲ. ಆದರೆ ಅಲೋಪತಿ ಬರುವ ಮುನ್ನ ನಮ್ಮ ರಾಜ ಮಹಾರಾಜರಿಗೆ ಚಿಕಿತ್ಸೆ ನೀಡಿ, ಕಾಯಿಲೆಗಳನ್ನ ವಾಸಿಮಾಡುತ್ತಿದ್ದುದು ನಮ್ಮ ಗಿಡ ಮೂಲಿಕೆಗಳ ಔಷಧಿಯ ನಾಟಿ ಪದ್ದತಿ ಎಂಬುದನ್ನ ಮರೆಯಬಾರದು ಎಂದರು.‌

ಗಿಡ ಮೂಲಿಕೆಗಳ ಚಿಕಿತ್ಸೆ, ಪಾರಂಪರಿಕ ವೈದ್ಯ ಪದ್ದತಿ ಮುಖ್ಯವಾಹಿನಿಗೆ ತರಬೇಕು. ಆದರೆ ತರಲಾಗುತ್ತಿಲ್ಲ.‌ ಅದಕ್ಕೆ ಮುಖ್ಯ ಕಾರಣ ನಕಲಿ ವೈದ್ಯರ ಹಾವಳಿ. ನಕಲಿ ವೈದ್ಯರ ಹಾವಳಿಯಿಂದಾಗಿಯೇ ನಾಟಿ ವೈದ್ಯ ಪದ್ದತಿ ಮುಖ್ಯವಾಹಿನಿಗೆ ಬರದೇ ಮರೆಮಾಚಿ ಹೋಗುತ್ತಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಗ್ರಾಮೀಣ ಪ್ರದೇಶದಲ್ಲಿ ಬಡ ಜನರಿಗೆ ಕಡಿಮೆ ಖರ್ಚಿನಲ್ಲಿ ಆರೋಗ್ಯ ಒದಗಿಸುವಲ್ಲಿ ಪಾರಂಪರಿಕ ವೈದ್ಯರ ಕೊಡುಗೆ ಖಂಡಿತವಾಗಿಯೂ ಇದೆ. ಇವತ್ತಿಗೂ ಅನೇಕರು ಆಸ್ಪತ್ರೆಗಳಲ್ಲಿ ದುಬಾರಿ ವೆಚ್ಚದ ಚಿಕಿತ್ಸೆ ಹೇಳಿದಾಗ, ನಾಟಿ ಔಷಧಿಯ ಮೇಲೆ ನಂಬಿಕೆಯಿಟ್ಟು ಚಿಕಿತ್ಸೆ ಪಡೆಯುತ್ತಾರೆ.‌ ಗಿಡಮೂಲಿಕೆ ಔಷಧಿ ಉಪಚಾರಗಳಿಂದ ಅತಿ ಕಡಿಮೆ ಖರ್ಚಿನಲ್ಲಿ ಬಡವರಿಗೆ ಆರೋಗ್ಯ ಸೇವೆ ಒದಗಿಸಬಹುದು. ಈ ನಿಟ್ಟಿನಲ್ಲಿ ನಮ್ಮ ಪಾರಂಪರಿಕ ವೈದ್ಯ ಪದ್ದತಿ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.

ಸರ್ಕಾರಕ್ಕೆ ನಿಜವಾದ ನಾಟಿ ವೈದ್ಯರ ಮೇಲೆ ನಂಬಿಕೆಯಿದ್ದರೂ, ನಕಲಿ ವೈದ್ಯರಿಂದಾಗಿ ಈ ಪದ್ದತಿಯನ್ನ ಪ್ರೋತ್ಸಾಹಿಸಲು ಸಾಧ್ಯವಾಗುತ್ತಿಲ್ಲ. ನೈಜ ನಾಟಿ ವೈದ್ಯರನ್ನ ಗುರುತಿಸುವುದು ಒಂದು ಸವಾಲು. ಹೀಗಾಗಿ ಒಂದು ಫ್ರೆಮ್ ವರ್ಕ್ ಮುಖ್ಯ. ನಿಯಮಾವಳಿಗಳೊಂದಿಗೆ ನಾಟಿ ವೈದ್ಯರನ್ನ ಗುರುತಿಸುವ ವ್ಯವಸ್ಥೆ ಜಾರಿಗೆ ಬರಬೇಕು. ಈ ನಿಟ್ಟಿನಲ್ಲಿ ಸರ್ಕಾರ ಚರ್ಚಿಸಿ ತೀರ್ಮಾನಗಳನ್ನ ತೆಗೆದುಕೊಳ್ಳಲು ಮುಕ್ತ ಮನಸ್ಸು ಹೊಂದಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಈ ನಿಟ್ಟಿನಲ್ಲಿ ನಾಟಿ ವೈದ್ಯರ ಔಷಧಿ ವಿಧಾನಗಳು, ಗಿಡಮೂಲಿಕೆಗಳ ಬಗ್ಗೆ ವಿಸ್ತ್ರತವಾಗಿ ವರದಿಯೊಂದಿಗೆ ಮನವಿ ಸಲ್ಲಿಸುವಂತೆ ಪಾರಂಪರಿಕ ವೈದ್ಯರ ಪರಿಷತ್ ಗೆ ಸಚಿವರು ಸೂಚನೆ ನೀಡಿದರು.

ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ್ ಸ್ವಾಮಿಜಿ ಆರೋಗ್ಯ ಕ್ಷೇತ್ರದಲ್ಲಿ ಹಳೇ ಬೇರು ಹೊಸ ಚಿಗುರು ಎರಡು ಮುಖ್ಯ ಎಂದುಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ