Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟ: ಕೆಂಪೇಗೌಡ ಜಯಂತ್ಯುತ್ಸವ ಆಚರಣೆಗೆ ಅದ್ಧೂರಿ ಸಿದ್ಧತೆ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಜೂ.25: ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವವನ್ನು ಒಕ್ಕಲಿಗರ ಸಂಘದ ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿ ವತಿಯಿಂದ ಆರ್ಥಪೂರ್ಣವಾಗಿ ಜೂನ್ 27ರಂದು ಆಚರಿಸುವುದಾಗಿ ಆಚರಣಾ ಸಮಿತಿ ಸದಸ್ಯ ಜೆ.ಎಸ್.ವೆಂಕಟಸ್ವಾಮಿ ತಿಳಿಸಿದರು.

ಶಿಡ್ಲಘಟ್ಟ ನಗರದ ಒಕ್ಕಲಿಗರ ಸಂಘದ ಭವನದಲ್ಲಿ ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ನಾಡಪ್ರಭು ಶ್ರೀ ಕೆಂಪೇಗೌಡರಿಗೆ ಗೌರವ ಸಲ್ಲಿಸುವುದರ ಜೊತೆಗೆ ಅವರ ತ್ಯಾಗ, ಬಲಿದಾನ, ಬೆಂಗಳೂರು ನಿರ್ಮಾಣ, ಎಲ್ಲಾ ಸಮುದಾಯದವರ ಏಳಿಗೆಗೆ ಕೈಗೊಂಡ ಕ್ರಮಗಳು, ಒಟ್ಟಾರೆ ನಾಡನ್ನು ಅವರು ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಕಟ್ಟಿರುವ ಆದರ್ಶವನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಮಾಡಲಿದ್ದೇವೆ. ವಿಶ್ವದಲ್ಲಿ ಮಾದರಿ ವ್ಯಕ್ತಿಗಳಲ್ಲೊಬ್ಬರಾದ ಕೆಂಪೇಗೌಡರ ಜಯಂತ್ಯುತ್ಸವದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸಮುದಾಯದ ಪೂಜ್ಯರು, ಹಾಲಿ ಹಾಗೂ ಮಾಜಿ ಶಾಸಕರು, ರಾಜ್ಯ ಸಂಘದ ನಿರ್ದೇಶಕರು ಭಾಗವಹಿಸಿಲಿದ್ದಾರೆ.

27 ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ನಾಡಪ್ರಭು ಕೆಂಪೇಗೌಡರ ಪಲ್ಲಕ್ಕಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ನಗರದ ಬಸ್ ನಿಲ್ದಾಣದಿಂದ ಮೆರವಣಿಗೆ ಪ್ರಾರಂಭವಾಗಿ ದಿಬ್ಬರಹಳ್ಳಿ ರಸ್ತೆಯ ನ್ಯಾಯಾಲಯ ಸಂಕೀರ್ಣದ ಮುಂಭಾಗದ ರಸ್ತೆ ಬದಿಯಲ್ಲಿನ ವೇದಿಕೆಯ ಬಳಿಯವರೆಗೂ ನಡೆಯಲಿದೆ. ವಿವಿಧ ಗ್ರಾಮಗಳ ಪಲ್ಲಕ್ಕಿಗಳು, ಕಲಾ ತಂಡಗಳು, ವೇಷಭೂಷಣಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ನೂರು ಮಂದಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಅರ್ಥಪೂರ್ಣವಾಗಿ ಆಚರಿಸಲಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿಯ ಬಿ.ನಾರಾಯಣಸ್ವಾಮಿ, ಕೆ.ಎನ್.ಸುಬ್ಬಾರೆಡ್ಡಿ, ಆರ್.ಎ.ಉಮೇಶ್, ಬಿ.ಕೆ.ಶ್ರೀನಿವಾಸ್,ಚೀಮನಹಳ್ಳಿ ಗೋಪಾಲ್,ಪ್ರಕಾಶ್,ಆನೂರು ಗ್ರಾಮ ಪಂಚಾಯತಿ ಸದಸ್ಯ ಲತಾ ದೇವರಾಜ್,ಸಿ.ಎಂ.ಮುನಿರಾಜು, ಪುರುಷೋತ್ತಮ್, ಪ್ರಭು, ಪ್ರಸನ್ನ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ