Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಯೋಜನೆ - ತುಮಕೂರಿನಲ್ಲಿ ಅರ್ಹ ಯಜಮಾನಿ ಖಾತೆಗೆ ನಗದು ವರ್ಗಾವಣೆ

ಸುದ್ದಿಮೂಲ ವಾರ್ತೆ

ತುಮಕೂರು,ಆ.30: ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 5.80 ಲಕ್ಷ ಫಲಾನುಭವಿಗಳು

ನೋಂದಣಿಯಾಗಿದ್ದು, ಕುಟುಂಬದ ಯಜಮಾನಿ ಮಹಿಳೆಗೆ ಮಾಸಿಕ 2 ಸಾವಿರ ರೂ.ಗಳಂತೆ ಜಿಲ್ಲೆಯ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣವನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿಂದು ನಗರದ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಂದರ್ಭದಲ್ಲಿ ಜಿಲ್ಲೆಯ 1.35ಲಕ್ಷ ಫಲಾನುಭವಿಗಳ ಖಾತೆಗಿಂದು ನೇರ ನಗದು ವರ್ಗಾವಣೆ ಮೂಲಕ ಹಣವನ್ನು ಜಮೆ ಮಾಡಲಾಗಿದ್ದು, ಉಳಿದ ಫಲಾನುಭವಿಗಳಿಗೆ ಹಂತ ಹಂತವಾಗಿ ಡಿಬಿಟಿ ಮೂಲಕ ಅವರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟಾರೆ ಶೇ.87ರಷ್ಟು ಕುಟುಂಬದ ಯಜಮಾನಿ ಮಹಿಳೆಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಇನ್ನುಳಿದ ಶೇ.13ರಷ್ಟು ಮಹಿಳೆಯರನ್ನು ಯೋಜನೆಯಡಿ ನೋಂದಾಯಿಸಲು ಕ್ರಮ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಹರಿರುವ ಫಲಾನುಭವಿಗಳು ನೋಂದಣಿಯಾಗದಿದ್ದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳುವಂತೆ ಅವರಿಗೆ ಅರಿವು ಮೂಡಿಸಬೇಕೆಂದು ಸೂಚಿಸಲಾಗಿದೆ ಎಂದ ಅವರು, ಯಾವ ಫಲಾನುಭವಿ ಖಾತೆ ಹೊಂದಿರುವುದಿಲ್ಲವೋ ಅವರಿಗೆ ಹತ್ತಿರದ ಬ್ಯಾಂಕ್‌ಗಳಲ್ಲಿ ಖಾತೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.

ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಪ್ರತಿ ಮಹಿಳೆಯರು ಈ ಯೋಜನೆಯಡಿ ಅರ್ಹ ಫಲಾನುಭವಿಗಳಾಗಿರುತ್ತಾರೆ. ಗೃಹಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ದೊರಕುವಂತೆ ಮಾಡಿ ಬಡತನ ತೊಲಗಿಸಲು ಹಾಗೂ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಒಂದು ಉತ್ತಮ ಯೋಜನೆಯಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನೋಂದಣಿ ಕೇಂದ್ರಗಳಲ್ಲಿ ಯಾವುದೇ ಲೋಪಗಳು ಬಾರದಿರುವ ರೀತಿ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. ಒಂದು ವೇಳೆ ಅರ್ಹ ಫಲಾನುಭವಿಗಳು ಸದರಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಲು ಆಗದೇ ಇರುವಂತಹ ಸಂದರ್ಭದಲ್ಲಿ ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗಿದ್ದು, ಇವರ ಮೂಲಕ ಅರ್ಜಿಗಳನ್ನು ಫಲಾನುಭವಿಗಳ ಮನೆಯ ಬಾಗಿಲಿನಲ್ಲಿಯೇ ನೋಂದಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲಿಕೆ ಮೇಯರ್ ಪ್ರಭಾವತಿ, ಉಪಮೇಯರ್ ನರಸಿಂಹಮೂರ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರಪಾಲಿಕೆ ಆಯುಕ್ತೆ ಅಶ್ವಿಜ, ಉಪವಿಭಾಗಾಧಿಕಾರಿ ಗೌರವ್‌ಕುಮಾರ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಮಹಿಳಾ ಮತ್ತು ಮಕ್ಕಳ ಅಧಿಕಾರಿ ಪವಿತ್ರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ