ಗೃಹಲಕ್ಷ್ಮೀ ಯೋಜನೆ ಚಾಲನಾ ಕಾರ್ಯಕ್ರಮ
ಸುದ್ದಿಮೂಲವಾರ್ತೆ
ಕೊಪ್ಪಳ,ಆ.28: ಗೃಹಲಕ್ಷ್ಮೀ ಯೋಜನೆಯು ಮಹಿಳೆಯರನ್ನು ಪ್ರೋತ್ಸಾಹಿಸುವ ಮೂಲಕ ಮಹಿಳೆಯರಿಗೆ ಹೆಚ್ಚಿನ ಆರ್ಥಿಕ ಶಕ್ತಿಯನ್ನು ನೀಡಲಿದೆ. ಕುಟುಂಬಗಳಿಗೆ ಭದ್ರತೆ ಮತ್ತು ಸ್ಥಿರತೆಯ ಭಾವನೆಯನ್ನು ನೀಡಲಿರುವ ಈ ಯೋಜನೆಯನ್ನು ಇದೆ ಆಗಸ್ಟ್ 30ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಚಾಲನೆ ನೀಡಲ್ಲಿದ್ದು, ಈ ಕಾರ್ಯಕ್ರಮ ಸಾರ್ವಜನಿಕರು ವೀಕ್ಷಣೆ ಮಾಡಲು ಜಿಲ್ಲೆಯ 153 ಗ್ರಾಮ ಪಂಚಾಯತಗಳಲ್ಲಿ ವ್ಯವಸ್ಥೆ ಕಲ್ಪಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ತಿಳಿಸಿದ್ದಾರೆ. .
ವ ಗೃಹಲಕ್ಷ್ಮೀ ಯೋಜನೆಯ ಕುರಿತು ಅಭಿಪ್ರಾಯವನ್ನು ಹಂಚಿಕೊಳ್ಳಲು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ರಹಟ್ಟಿ ಗ್ರಾಮ ಪಂಚಾಯತಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಸಿಇಓ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.