ಗುಬ್ಬಿ ವಿಧಾನಸಭಾ ಕ್ಷೇತ್ರ: ನಿಷೇಧಾಜ್ಞೆ ಜಾರಿ
ಗುಬ್ಬಿ ವಿಧಾನಸಭಾ ಕ್ಷೇತ್ರ: ನಿಷೇಧಾಜ್ಞೆ ಜಾರಿ
ತುಮಕೂರು,ಏ.11: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಏಪ್ರಿಲ್ 13 ರಿಂದ 20ರವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಈ ಅವಧಿಯಲ್ಲಿ ಜನಸಂದಣಿ ಹೆಚ್ಚಾಗುವುದರಿಂದ ಸಾರ್ವಜನಿಕರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ 135-ಗುಬ್ಬಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶದಲ್ಲಿ ನಿಷೇಧಾಜ್ಞೆ ಹೊರಡಿಸಿ ಗುಬ್ಬಿ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿ ಆರತಿ ಬಿ. ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆಯು ಏಪ್ರಿಲ್ 13 ರಿಂದ 20ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಿಷೇಧಾಜ್ಞೆ ಜಾರಿ ಅವಧಿಯಲ್ಲಿ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವ ಅಭ್ಯರ್ಥಿ ಮತ್ತು ಅವರೊಂದಿಗೆ 4 ಮಂದಿಗೆ ಮಾತ್ರ 135-ಗುಬ್ಬಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯನ್ನು ಪ್ರವೇಶಿಸಲು ಅನುಮತಿ ಇರುತ್ತದೆ. ಈ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ.
ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.