Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಧಾನಿಯ ಧಾರಾಕಾರ ಮಳೆಗೆ ತೇಲಿ ಬಂದ ಗನ್‌ ಗಳು

ಸುದ್ದಿಮೂಲ ವಾರ್ತೆ

ಬೆಂಗಳೂರು, ನ. 07 : ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಎದ್ದಿದ್ದು, ಟ್ರಫ್‌ ನಿರ್ಮಾಣವಾಗಿದೆ. ಇದರ ಪ್ರಭಾವದಿಂದಾಗಿ ರಾಜ್ಯಾದ್ಯಂತ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಲ್ಲಿ‌ ಬೆಳಗಿನ ಸಮಯ ಮೋಡ ಕವಿದ ವಾತಾವರಣ ಇದ್ದರೆ, ಮಧ್ಯಾಹ್ನ ಆಗುತ್ತಿದ್ದಂತೆ ಕಗ್ಗತ್ತಲು ಆವರಿಸಿತ್ತು. ಮಧ್ಯಾಹ್ನ 3ರ ಸುಮಾರಿಗೆ ಶುರುವಾದ ಮಳೆಯು ಅರ್ಧ ಗಂಟೆಗೂ ಹೆಚ್ಚು ಸಮಯ ಅಬ್ಬರಿಸಿದೆ.

ನಗರದ ವಿಧಾನಸೌಧ, ಶಿವಾಜಿನಗರ, ಕಬ್ಬನ್‌ಪಾರ್ಕ್‌, ಕೆಆರ್‌ ಸರ್ಕಲ್‌ ಸೇರಿದಂತೆ ಫ್ರೀಡಂ ಪಾರ್ಕ್‌, ಮೆಜೆಸ್ಟಿಕ್‌, ಕೆಆರ್‌ ಮಾರ್ಕೆಟ್‌ ಸುತ್ತಮುತ್ತ ಗುಡುಗು ಸಹಿತ ಭಾರಿ ಮಳೆಯಾಗಿದೆ. ಇನ್ನೆರಡು ದಿನಗಳು ಬೆಂಗಳೂರಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಳೆಗೆ ಸಿಎಆರ್‌ ಕಚೇರಿಯ ಗೋಡೆ ಕುಸಿದ ಪರಿಣಾಮ ಕೊಠಡಿಯಲ್ಲಿಟ್ಟಿದ್ದ ಗನ್‌ಗಳು ನೀರಲ್ಲಿ ತೇಲಿ ಬಂದಿದೆ.

ಇತ್ತೀಚೆಗೆ ನಿರ್ಮಾಣವಾಗಿದ್ದ ಸಶಸ್ತ್ರ ಮೀಸಲು ಪಡೆ ಕಚೇರಿಯ ಗೋಡೆ ಕುಸಿದಿದೆ. ಪರಿಣಾಮ ಮಳೆ ನೀರು ಕಚೇರಿಯೊಳಗೆ ನುಗ್ಗಿದೆ. ಬೆಂಗಳೂರು ಪಶ್ಚಿಮದ ಉಲ್ಲಾಳದಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆ ಕಚೇರಿಯೊಳಗೆ ಘಟನೆ ನಡೆದಿದೆ. ಇಡೀ ರಾತ್ರಿ ಮಳೆ ನೀರಿನಲ್ಲೆ ಸಿಎಆರ್ ಸಿಬ್ಬಂದಿ ಕಾಲ ಕಳೆದಿದ್ದಾರೆ. ಗನ್‌ಗಳನ್ನು ಇಟ್ಟಿದ್ದ ಕೊಠಡಿಗೂ ನೀರು ನುಗ್ಗಿದ್ದರಿಂದ ಎಲ್ಲವೂ ತೇಲಿ ಬಂದಿತ್ತು. ಲಕ್ಷಾಂತರ ರೂಪಾಯಿ ವೆಚ್ಚದ ಶಸ್ತ್ರಾಸ್ರಗಳು ಹಾನಿಯಾಗಿದೆ. ಕಳಪೆ ಕಾಮಗಾರಿಯಿಂದ ಗೋಡೆ ಕುಸಿದಿದೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ