Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರಿನಲ್ಲಿ ಹಡಪದ ಅಪ್ಪಣ್ಣ ಜಯಂತಿ

ಸುದ್ದಿಮೂಲ ವಾರ್ತೆ

ತುಮಕೂರು, ಜು.3 : ವಚನಗಳನ್ನು ಕನ್ನಡ ಭಾಷೆಯಲ್ಲಿ ಸರಳವಾಗಿ ಎಲ್ಲರಿಗೂ ತಿಳಿಯುವ ರೀತಿಯಲ್ಲಿ ಬರೆಯುವುದರ ಮೂಲಕ ಸಂಸ್ಕೃತದ ಬಿಗಿತನವನ್ನು ಸರಳೀಕರಣಗೊಳಿಸಿ ಬಸವಣ್ಣನವರ ಕಾಲಘಟ್ಟದಲ್ಲಿಯೇ ಗುರುತಿಸಿಕೊಂಡವರು ‘ಹಡಪದ ಅಪ್ಪಣ್ಣನವರು’ ಎಂದು ಉಪವಿಭಾಗಾಧಿಕಾರಿ ಹೆಚ್.ಶಿವಪ್ಪ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿಂದು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 12ನೇ ಶತಮಾನವು ಸಾಮಾಜಿಕ ಕ್ರಾಂತಿಯನ್ನು ಉಂಟುಮಾಡುವುದರ ಜೊತೆಗೆ ಧಾರ್ಮಿಕ ಬದಲಾವಣೆಗಳು ಕೂಡಾ ನಡೆದವು. ಅಂದಿನ ಕಾಲದಲ್ಲಿದ್ದ ಮೂಢನಂಬಿಕೆಗಳನ್ನು ಬಸವಣ್ಣ ಅವರು ಕಟುವಾಗಿ ವಿರೋಧಿಸಿದ್ದರು, ಅವರ ಮಾರ್ಗದಲ್ಲಿಯೇ ಹಡಪದ ಅಪ್ಪಣ್ಣ ಅವರು ಮುನ್ನೆಡೆದರು ಎಂದು ತಿಳಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಅವರು, 12ನೇ ಶತಮಾನದಲ್ಲಿ ವಚನ ಸಾಹಿತ್ಯ ಜೊತೆಗೆ ವೃತ್ತಿಗೆ ಅನುಗುಣವಾಗಿ ವಚನಾಕಾರರಾದ ಕುಂಬಾರ ಗುಂಡಯ್ಯ, ಮಡಿವಾಳ ಮಾಚಯ್ಯ, ಹಡಪದ ಅಪ್ಪಣ್ಣ, ಲೋಹರ ಕಕ್ಕಯ್ಯ ಇಂತಹ ಅನೇಕರು ವೃತ್ತಿಯಲ್ಲಿ ನೈಪುಣ್ಯತೆ ಹೊಂದಿದ್ದರು ಎಂದರು.

ಹಡಪದ ಅಪ್ಪಣ್ಣ ಅವರು ತಮ್ಮ ಚೀಲದಲ್ಲಿ ತನ್ನ ಕಾಯಕಕ್ಕೆ ಬೇಕಾದ ಪರಿಕರಗಳನ್ನು ಇಟ್ಟುಕೊಂಡು ಹೋಗಿ ಜನಸಾಮಾನ್ಯರ ಕೇಶ ವಿನ್ಯಾಸಗೊಳಿಸುತ್ತಿದ್ದರು. ಕಾಯಕದ ನಂತರ ಅಪ್ಪಣ್ಣನವರನ್ನು ಬಸವಣ್ಣನವರು ಅನುಭವ ಮಂಟಪದಲ್ಲಿ ಜೊತೆಯಲ್ಲಿ ಇಟ್ಟುಕೊಂಡು ವಚನಗಳನ್ನು ರಚನೆ ಮಾಡುವಲ್ಲಿ ನಿರತರಾಗುತ್ತಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುರೇಶ್‌ಕುಮಾರ್, ಜಿಲ್ಲಾ ಸವಿತಾ ಸಮಾಜದ ಖಜಾಂಚಿ ಟಿ.ಆರ್. ಮೇಲಾಕ್ಷಪ್ಪ, ನಿರ್ದೇಶಕ ಹೆಚ್.ಎಸ್.ವೇಣುಗೋಪಾಲ್ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ