Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವನಹಳ್ಳಿ: ಶ್ರೀಚೌಡೇಶ್ವರಿ ದೇವಾಲಯದಲ್ಲಿ ಹಲಗು ಸೇವೆ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಆ.25: ಹಿಂದಿನ ಕಾಲದಿಂದಲೂ ದೇವಾಂಗ ಜನಾಂಗದವರು ರೂಡಿಸಿಕೊಂಡು ಬಂದಂತಹ ಹಲಗು ಸೇವೆಯನ್ನು ನಾವು ಈಗಲೂ ಮುಂದುವರಿಸಿಕೊಂಡು ಬರುತ್ತಿದ್ದೇವೆ. ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಹಲಗು ಸೇವೆ ನಡೆಸಿಕೊಂಡು ಬರುತ್ತಿದ್ದೇವೆ ಎಂದು ಸರ್ವಶಕ್ತ್ಯಾತ್ಮಿಕೆ ಚೌಡೇಶ್ವರಿ ದೇವಾಲಯದ ಸಮಿತಿ ಸದಸ್ಯರದ ಗಂಗಾಧರ್ ತಿಳಿಸಿದರು.

ಪಟ್ಟಣದ ಚೌಡೇಶ್ವರಿ ದೇವಾಲಯದಲ್ಲಿ ಹಲಗು ಸೇವೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿ, ನಮ್ಮ ಸಮುಧಾಯದವರು ಹಾಕಿಕೊಟ್ಟಂತಹ ಬೂನಾದಿಯಲ್ಲಿ ನಾವೆಲ್ಲರು ನಡೆಯಬೇಕು ಅದರಂತೆ ನಾವು ಕಳೆದ ನೂರು ವರ್ಷಗಳಿಂದ ಹಲಗು ಸೇವೆಯನ್ನು ನಡೆಸಿಕೊಂಡು ಬಂದಿದ್ದೇವೆ. ಮೊದಲು ದೇವಾಲಯವಿಲ್ಲದ ಕಾರಣ ಬೇರೆ ಕಡೆ ನಡೆಸುತ್ತಿದ್ದೆವು. ಈಗ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಕಳೆದ 10 ವರ್ಷಗಳಿಂದ ಆಚರಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.

ಶ್ರಾವಣ ಮಾಸದಲ್ಲಿ ಅಮ್ಮನವರಿಗೆ ವಿಶೇಷ ಅಲಂಕಾರ ಪ್ರಸಾದ ವಿನಿಯೋಗ ನಡೆಯುತ್ತದೆ. ಕಳೆದ 10 ವರ್ಷಗಳಲ್ಲಿ ಅಮ್ಮನವರ ಭಕ್ತರು ಸಹ ಹೆಚ್ಚಾಗಿದ್ದು ದೇವಾಲಯ ಪ್ರತೀತಿ ಪಡೆಯುತ್ತಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನಿಂದ ಭಕ್ತಾದಿಗಳು ಬಂದು ಅಮ್ಮನವರಿಗೆ ಹರಕೆಗಳನ್ನು ಹೊತ್ತುಹೋಗುತ್ತಾರೆ. ಹರಕೆ ತೀರಿದ ಮೇಲೆ ಬಂದು ಅಮ್ಮನವರಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದಾರೆ ಎಂದು ವಿವರಿಸಿದರು.

ಸದಸ್ಯ ಜಯರಾಮ್ ಮಾತನಾಡಿ, ಶ್ರೀ ಸರ್ವ ಶಕ್ತಾತ್ಮಕೆ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ದೇವಾಲಯವು ಸಹ ಪ್ರತೀತಿಯಾಗಿದೆ. ದೇವಾಲಯಕ್ಕೆ ಬಂದಂತಹ ಭಕ್ತರ ಇಷ್ಟಾರ್ಥಗಳನ್ನು ದೇವಿ ಇಡೇರಿಸುತ್ತಿದ್ದಾರೆ. ಶ್ರಾವಣ ಮಾಸದ ಅಂಗವಾಗಿ ಪ್ರತಿನಿತ್ಯ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಇದೇ ವೇಳೆ ದೇವನಹಳ್ಳಿ ಪುರಸಭೆ ಮಾಜಿ ಅಧ್ಯಕ್ಷ ಸಿ.ಎಂ.ಜಗನ್ನಾಥ್, ಪುರಸಭೆ ಸದಸ್ಯರಾದ ಮುನಿಕೃಷ್ಣ, ಗೋಪಿ, ಸೋಮಶೇಖರ್ ಬಾಬು, ದೇವಾಲಯ ಸಮಿತಿ ಸದಸ್ಯರಾದ ಅಶ್ವಥ್ ನಾರಾಯಣ್, ಜಯರಾಂ, ಶ್ರೀರಾಮಯ್ಯ, ಎಸ್.ಆರ್.ಮುನಿರಾಜು, ದೇವಾಂಗ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ