Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ

ಸುದ್ದಿಮೂಲ ವಾರ್ತೆ

ಹಾಸನ, ನ.2 : ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಇಲ್ಲಿನ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಬುಧವಾರ ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ಗುರುವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.



ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಪೂಜಾ ಕೈಂಕರ್ಯದ ಮೂಲಕ ಹಾಸನ ಜಿಲ್ಲಾ ಉಸ್ತುವಾರಿ ಕೆ ಎನ್ ರಾಜಣ್ಣ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಹಾಸನಾಂಬ ದೇವಸ್ಥಾನದ ಗರ್ಭಗುಡಿಯ ಬಾಗಿಲನ್ನು ತೆರೆಯಲಾಯಿತು. ಮಧ್ಯಾಹ್ನ 12.23 ರಲ್ಲಿ ಹಾಸನಾಂಬಾ ದೇಗುಲ ಹೊರಗೆ ಕದಳಿ ಕಡಿಯುತ್ತಲೇ ದೇವಾಯಲಯದ ಗರ್ಭಗುಡಿ ಬಾಗಿಲು ತೆರೆಯಲಾಯಿತು.

ಗರ್ಭಗುಡಿಯ ಬಾಗಿಲು ತೆರೆದ ಮೊದಲ ಮತ್ತು ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ನಾಳೆಯಿಂದ ಹಾಸನಾಂಬ ದೇವಿಯ ದರ್ಶನ ಪಡೆಯಲು ಭಕ್ತರಿಗೆ ಅವಕಾಶವಿದ್ದು, ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ 12 ದಿನಗಳ ವರೆಗೆ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ ಬೆಳಿಗ್ಗೆ 6 ರಿಂದ ಹಾಸನಾಂಬೆ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಹಾಸನಾಂಬ ದರ್ಶನ ಪಡೆಯಲು ಹಾಸನ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ಪ್ರತಿವರ್ಷ ಗರ್ಭಗುಡಿ ಬಾಗಿಲು ಹಾಕುವ ಸಂದರ್ಭದಲ್ಲಿ ಹಚ್ಚಿದ ಹಣತೆ, ಇಟ್ಟ ನೈವೇದ್ಯ ಹಾಗೂ ಮುಡಿಸಿದ ಹೂ ಬಾಡುವುದಿಲ್ಲ ಎಂಬ ನಂಬಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ಈ ಸಂದರ್ಭದಲ್ಲಿ ಶಾಸಕ ಸ್ವರೂಪ್‌ ಪ್ರಕಾಶ್‌, ಜಿಲ್ಲಾಧಿಕಾರಿ ಮತ್ತಿತರರು ಇದ್ದರು.

ಸಂಸದ ಕಡೆಗಣನೆ

ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ರಾಜಬೀದಿಗಳಲ್ಲಿ ಜಿಲ್ಲಾಡಳಿತದಿದಂ ಹಾಕಿರುವ ಫ್ಲೆಕ್ಸ್‌ಗಳಲ್ಲಿ ಸಂಸದ ಪ್ರಜ್ವಲ್‌ ರೇವಣ್ಣನವರ ಭಾವಚಿತ್ರ ಹಾಕದೇ ಜಿಲ್ಲಾಡಳಿತ ಶಿಷ್ಟಾಚಾರವನ್ನು ಉಲ್ಲಂಘನೆ ಮಾಡಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರ ಭಾವಚಿತ್ರವನ್ನು ಮಾತ್ರ ಹಾಕಲಾಗಿದೆ. ದುರುದ್ದೇಶ ಮತ್ತು ರಾಜಕೀಯ ಕಾರಣಕ್ಕಾಗಿ ಮಾಡಲಾಗಿದೆ ಎಂದು ಜೆಡಿಎಸ್‌ ನಗರಸಭಾ ಸದಸ್ಯ ಎಸ್‌.ಎಚ್‌. ವಾಸದೇವ್‌ ಖಂಡಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ