Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರುನಾಡ ಜನತೆಗೆ ಜೆಡಿಎಸ್ ಭರವಸೆ: ಹೆಚ್.ಡಿ.ದೇವೆಗೌಡರು

 

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.15: ಪ್ರಸಕ್ತ ವಿಧಾನಸಭೆ ಚುನಾವಣೆಯ ಜಾತ್ಯತೀತ ಜನತಾದಳ ಪಕ್ಷದ ಕರುನಾಡ ಜನತೆಗೆ ಜೆಡಿಎಸ್ ಭರವಸೆ ಎಂಬ ಸಂಕ್ಷಿಪ್ತ ಭರವಸೆಗಳ ಪತ್ರವನ್ನು ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೆಗೌಡರು ಶನಿವಾರ ಬಿಡುಗಡೆ ಮಾಡಿದರು.



ಬೆಂಗಳೂರಿನ ತಮ್ಮ ನಿವಾಸದಲ್ಲಿ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ಭರಸೆಗಳನ್ನು ರಾಜ್ಯದ ಜನತೆಯ ಮುಂದಿಟ್ಟ ಮಾಜಿ ಪ್ರಧಾನಿಗಳು, ಜೆಡಿಎಸ್ ಅಧಿಕಾರಕ್ಕೆ ಬಂದರೆ ಈ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಬಿ.ಎಂ.ಫಾರೂಕ್, ಸದಸ್ಯ ಕುಪೇಂದ್ರ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

1.ಮಾತೃಶ್ರೀ ಮತ್ತು ಮಹಿಳಾ ಸಬಲೀಕರಣ

• ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸಾಲಮನ್ನಾ

• ವರ್ಷಕ್ಕೆ 5 ಅಡುಗೆ ಅನಿಲ ಸಿಲಿಂಡರ್ ಉಚಿತ

• ಗರ್ಭಿಣಿ ತಾಯಂದಿರ ಅಗತ್ಯತೆ ಪೂರೈಕೆಗೆ 6 ತಿಂಗಳ ಕಾಲ 6,000 ರೂ. ಭತ್ಯೆ

• ವಿಧವಾ ವೇತನ 900 ರೂ.ನಿಂದ 2,500 ರೂ.ಗಳಿಗೆ ಹೆಚ್ಚಳ

• ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 5000 ರೂ.ವರೆಗೆ ಹೆಚ್ಚಿನ ವೇತನ

• ಕನಿಷ್ಟ 15 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಯಕರ್ತೆಯರಿಗೆ ಪಿಂಚಣಿ

2.ಕನ್ನಡವೇ ಮೊದಲು

•ಕೇಂದ್ರ ಸರಕಾರದ ನಾಗರಿಕ ಸೇವೆಗಳಾದ ರೈಲ್ವೆ, ಬ್ಯಾಂಕಿಂಗ್, ರಾಜ್ಯದಲ್ಲಿರುವ ಕೇಂದ್ರ ಸಾರ್ವಜನಿಕ ಉದ್ಯಮಗಳು, ಕೇಂದ್ರ ಭದ್ರತಾಪಡೆ ಇನ್ನಿತರೆ ನೇಮಕದಲ್ಲಿ ಕನ್ನಡದಲ್ಲೇ ಪರೀಕ್ಷೆ ನಡೆಸಿ ಕನ್ನಡಿಗರಿಗೆ ಆದ್ಯತೆ ನೀಡಲು ಕೇಂದ್ರ ಸರಕಾರದ ಮೇಲೆ ಒತ್ತಡ.

•ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಿಗೆ ಅಗತ್ಯ ಕಾಯಿದೆ ಜಾರಿ.

3.ಶಿಕ್ಷಣವೇ ಆಧುನಿಕ ಶಕ್ತಿ

• ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 6.8 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್

• ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮತ್ತು ಆರ್ಥಿಕವಾಗಿ ಹಿಂದುಳಿದಿರುವ, 18 ವರ್ಷ ತುಂಬಿರುವ 60,000 ಸಾವಿರ ವಿದ್ಯಾರ್ಥಿನಿಯರಿಗೆ ವಿದ್ಯುತ್ ಚಾಲಿತ ಮೊಪೆಡ್.

4.ಆರೋಗ್ಯ ಸಂಪತ್ತು

• ರಾಜ್ಯ ಸರಕಾರದಿಂದ ನಿಮ್ಹಾನ್ಸ್ ಮಾದರಿಯಲ್ಲಿ 500 ಹಾಸಿಗೆಯುಳ್ಳ ಆಧುನಿಕ ನರವಿಜ್ಞಾನ ವೈದ್ಯಕೀಯ ಸಂಸ್ಥೆ ಸ್ಥಾಪನೆ.

• ಆಯುಷ್ಮಾನ್ ಭಾರತ್, ಯಶಸ್ವಿನಿ ಯೋಜನೆಯಡಿಯಲ್ಲಿ ಸರ್ಪಡೆಯಾಗದ ಮತ್ತು ದುಬಾರಿ ವೆಚ್ಚದ ವೈದ್ಯಕೀಯ ಶಸ್ತ್ರಚಿಕಿತ್ಸೆಗಳಾದ ಮೂಳೆಮಜ್ಜೆ ಚಿಕಿತ್ಸೆ (Bone Marrow Treatment, ಹೃದಯ, ಶ್ವಾಸಕೋಶ ಮತ್ತು ಯಕೃತ್ ಬದಲಾಯಿಸುವ ಶಸ್ತ್ರಚಿಕಿತ್ಸೆಗಳಿಗೆ (Heart, Lungs, Liver Transplantation)ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷದ ರೂ.ವರೆಗಿನ ಪರಿಹಾರವನ್ನು 24 ಗಂಟೆಗಳ ಅವಧಿಯಲ್ಲಿ ನೀಡಿಕೆ.

5.ರೈತ ಚೈತನ್ಯ

• ಪ್ರತೀ ಎಕರೆಗೆ 10,000 ರೂ. ಸಹಾಯ ಧನ

• ರೈತ ಯುವಕರನ್ನು ಮದುವೆ ಆಗುವ ಯುವತಿಯರಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ

• ಪ್ರತಿ ಕೃಷಿ ಕಾರ್ಮಿಕ ಕುಟುಂಬಕ್ಕೆ ಮಾಸಿಕ 2000 ರೂ. ಸಹಾಯ ಧನ

6. ಹಿರಿಯ ನಾಗರಿಗರಿಕೆ ಸನ್ಮಾನ

• ಹಿರಿಯ ನಾಗರೀಕರ ಮಸಾಶನವನ್ನು 1200 ರೂ.ನಿಂದ 5000 ರೂ.ಗಳಿಗೆ ಏರಿಕೆ

7. ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿ

• ನ್ಯಾ.ರಾಜೇಂದ್ರ ಸಾಚರ್ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಕುರಿತು ಅಧ್ಯಯನಕ್ಕೆ ಸಮಿತಿ ರಚನೆ ಮತ್ತು ಆ ಸಮಿತಿ ವರದಿ ಆಧರಿಸಿ ಜಾರಿಗೆ ಕ್ರಮ

• ರಾಜ್ಯದಲ್ಲಿನ ವಕ್ಫ್ ಆಸ್ತಿ ಸಂರಕ್ಷಣೆ ಮತ್ತು ಅಭಿವೃದ್ದಿಗೆ ಉನ್ನತಮಟ್ಟದ ಸಮಿತಿ ರಚನೆ; ಅಗತ್ಯ ಅನುದಾನ ನೀಡಿಕೆ

• ಅಶಕ್ತ ಪುರುಷ ಮತ್ತು ಅಬಲೆಯರ ಆಶ್ರಯಕ್ಕೆ ಸಹಾರಾ ಯೋಜನೆ ಜಾರಿ

8 .ಯುವಜನ ಸಬಲೀಕರಣ

I. ಒಂದು ವರ್ಷದ ಕೌಶಲ್ಯ ಅಭಿವೃದ್ದಿ ತರಬೇತಿ ಯೋಜನೆಗಳಲ್ಲಿ ತೊಡಗಿಸಿಕೊಳ್ಳುವ ಯುವಕ/ಯುವತಿಯರಿಗೆ ಮಾಸಿಕ 8000 ರೂ. ಭತ್ಯೆ

II. ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ ವಲಯಗಳಲ್ಲಿ ತೊಡಗಿಸಿಕೊಳ್ಳುವ ಯುವಕ/ಯುವತಿಯರಿಗೆ ನೆರವು

• ಕೈಗಾರಿಕೆ ಉತ್ಪನ್ನ ಘಟಕ ಸ್ಥಾಪನೆಗೆ 10 ಲಕ್ಷ ರೂ. ಸಹಾಯಧನ

• ತರಬೇತಿ ಮತ್ತು ಸೇವೆಗಳ ವಲಯದಲ್ಲಿ ಒದಗಿಸುವ ವಲಯಗಳಲ್ಲಿ ತೊಡಗಿಸಿಕೊಳ್ಳುವವರಿಗೆ 3 ಲಕ್ಷ ರೂ. ಸಹಾಯಧನ

• ಸಣ್ಣ ಉದ್ಯಮವಾಗಿ ವ್ಯಾಪಾರ-ವಹಿವಾಟು ನಡೆಸುವವರಿಗೆ 2 ಲಕ್ಷ ರೂ. ಸಹಾಯಧನ

• ಸಣ್ಣ ಉದ್ಯಮ ನಡೆಸುವ ಮಹಿಳಾ ಉದ್ಯಮಿಗಳಿಗೆ ಮೇಲಾಧಾರ ಭದ್ರತೆ ರಹಿತ (Collateral Free) 2 ಕೋಟಿ ರೂ.ವರೆಗೆ ಬ್ಯಾಂಕುಗಳ ಮುಖೇನ ಸಾಲ

9. ವಿಕಲ ಚೇತನರಿಗೆ ಆಸರೆ

• ವಿಕಲಚೇತನರ 600 ರೂ.ಗಳ ಪಿಂಚಣಿಯನ್ನು 2,500 ರೂ.ಗಳಿಗೆ ಹೆಚ್ಚಳ

5. ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿ

• ನ್ಯಾ.ರಾಜೇಂದ್ರ ಸಾಚರ್ ಆಯೋಗದ ವರದಿ ಶಿಪಾರಸುಗಳ ಅನುಷ್ಠಾನ ಕುರಿತು ಅಧ್ಯಯನಕ್ಕೆ ರಚನೆ ಮತ್ತು ಸಮಿತಿ ವರದಿ ಆಧರಿಸಿ ಜಾರಿಗೆ ಕ್ರಮ

• ರಾಜ್ಯದಲ್ಲಿನ ವಕ್ಫ್ ಆಸ್ತಿ ಸಂರಕ್ಷಣೆ ಮತ್ತು ಅಭಿವೃದ್ದಿಗೆ ಉನ್ನತಮಟ್ಟದ ಸಮಿತಿ ರಚನೆ; ಅಗತ್ಯ ಅನುದಾನ ನೀಡಿಕೆ

• ಅಶಕ್ತ ಪುರುಷ ಮತ್ತು ಅಬಲೆಯರ ಆಶ್ರಯಕ್ಕೆ ಸಹಾರಾ ಯೋಜನೆ ಜಾರಿ

10.ಆರಕ್ಷಕರಿಗೆ ಅಭಯ

• ಔರಾದ್ಕರ್ ಸಮಿತಿ ವರದಿಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ನೀಡುವ ವೇತನ, ಸೌಲಭ್ಯಗಳಲ್ಲಿ ನ್ಯೂನತೆಗಳಿದ್ದು, ಈ ತಾರತಮ್ಯ ಹೋಗಲಾಡಿಸಿ, ನ್ಯಾಯಯುತ ವೇತನ, ಸೌಲಭ್ಯ ನೀಡಿಕೆ

11.ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ಏಳಿಗೆ

• ಕೆ.ಎಸ್.ಎಫ್.ಸಿ ಪ್ರಸ್ತುತ ಶೇ.4ರಷ್ಟು ಬಡ್ಡಿ ವಿಧಿಸುತ್ತಿದ್ದು, ಇದಕ್ಕೆ ಇನ್ನಷ್ಟು ಸಬ್ಸಿಡಿ ನೀಡಿ ಎಸ್.ಸಿ/ಎಸ್.ಟಿ ಉದ್ದಿಮೆದಾರರಿಗೆ ಬಡ್ಡಿದರವನ್ನು ಶೇ.4ರಿಂದ ಶೇ.2ಕ್ಕೆ ಇಳಿಸುವುದು.

• ಎಸ್.ಸಿ/ಎಸ್.ಟಿ ಉದ್ದಿಮೆದಾರು/ಗುತ್ತಿಗೆದಾರರಿಗೆ ಶೇ.2 ಬಡ್ಡಿ ದರದಲ್ಲಿ 5 ಕೋಟಿ ರೂ.ವರೆಗೆ ಬಂಡವಾಳ ಒದಗಿಸಲಾಗುವುದು.

• ರಾಜ್ಯದಲ್ಲಿ ಅನುಷ್ಠಾನದಲ್ಲಿರುವ ವಿವಿಧ ವಸತಿ ಯೋಜನೆಗಳಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.50 ರಿಯಾಯಿತಿ ದರದಲ್ಲಿ ಮನೆ ಹಂಚಿಕೆ.

12.ವೃತ್ತಿ ನಿರತ ವಕೀಲರ ಅಭ್ಯುದಯ

• ವೃತ್ತಿನಿರತ ವಕೀಲರ ರಕ್ಷಣೆಗೆ ಕಾಯಿದೆ ಜಾರಿ

• ನೂತನವಾಗಿ ನೋಂದಾಯಿತ ವಕೀಲರಿಗೆ ಈಗ ನೀಡುವ ಮಾಸಿಕ ಭತ್ಯೆ (Stipend) ವನ್ನು 2000ದಿಂದ 3000 ರೂ.ಗಳಿಗೆ ಹೆಚ್ಚಳ
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ